ಬಿಜೆಪಿಯಿಂದ ಮತ ಕಳ್ಳತನ ಕೃತ್ಯ: ಡಿಕೆ ಶಿವಕುಮಾರ್‌

ಮನುವಾದಿಗಳಿಗೆ ಉತ್ತರ ಕೊಡಲು ಸಿದ್ಧತೆ ಮಾಡಿಕೊಳ್ಳಬೇಕು

Team Udayavani, Nov 29, 2022, 6:49 PM IST

ಬಿಜೆಪಿಯಿಂದ ಮತ ಕಳ್ಳತನ ಕೃತ್ಯ: ಡಿಕೆ ಶಿವಕುಮಾರ್‌

ಚಿತ್ರದುರ್ಗ: ಹಿಂದುತ್ವದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವ ಬಿಜೆಪಿ, ಈಗ ಮತ ಕಳ್ಳತನಕ್ಕೆ ಕೈ ಹಾಕಿದೆ. ಮುಸಲ್ಮಾನರ ಮತಗಳನ್ನು ಮತಪಟ್ಟಿಯಿಂದ ಡಿಲೀಟ್‌ ಮಾಡಿಸುವ ಕೆಲಸ ಮಾಡುತ್ತಿರುವುದರ ವಿರುದ್ಧ ಕಾರ್ಯಕರ್ತರು, ಮುಖಂಡರು ಎಚ್ಚೆತ್ತು ಪ್ರತಿ ಮನೆಗೆ ಹೋಗಿ ಮತದಾರರ ಪಟ್ಟಿ ಸರಿಪಡಿಸುವ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಕಾಂಗ್ರೆಸ್‌ನಿಂದ ಸೋಮವಾರ ಆಯೋಜಿಸಿದ್ದ “ಸಂವಿಧಾನ ಬಚಾವೋ’ ಪಾದಯಾತ್ರೆ ಸಮಾರೋಪದಲ್ಲಿ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಲ್ಲಿ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್‌ ಗಾಂಧಿ ಇಡೀ ಭಾರತವನ್ನು ಒಗ್ಗೂಡಿಸಲು ಪಾದಯಾತ್ರೆ ಮಾಡುತ್ತಿದ್ದಾರೆ. ಆದರೆ ಬಿಜೆಪಿಯವರು ಹಿಂದುತ್ವ ಇಟ್ಟುಕೊಂಡು ಓಡಾಡುತ್ತಿದ್ದು, ನಾವು ಹಿಂದೂಗಳಲ್ಲವೇ ಎಂದು ಪ್ರಶ್ನಿಸಿದರು.

ಅಂಬೇಡ್ಕರ್‌ ದೇಶಕ್ಕೆ ಕೊಡುಗೆಯಾಗಿ ನೀಡಿರುವ ಸಂವಿಧಾನದಲ್ಲಿ ಎಲ್ಲಾ ಜಾತಿ-ಧರ್ಮದವರು ಸಮಾನವಾಗಿ ಬದುಕುವ ಹಕ್ಕಿದೆ. ಅಂತಹ ಪವಿತ್ರವಾದ ಸಂವಿಧಾನವನ್ನು ಉಳಿಸುವ ಕೆಲಸವನ್ನು ಕಾಂಗ್ರೆಸ್‌ ಕಾರ್ಯಕರ್ತರು ಮಾಡಬೇಕು. ಕಾಂಗ್ರೆಸ್‌ ಇತಿಹಾಸ, ದೇಶದ ಇತಿಹಾಸ. ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿ ಕಾರಕ್ಕೆ ಬಂದಾಗೆಲ್ಲಾ ಬಡವರಿಗೆ ಒಳ್ಳೆಯ ಯೋಜನೆಗಳನ್ನು ನೀಡಲಾಗಿದೆ.

ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ದೇವಸ್ಥಾನಗಳಿಗೆ ಸುಣ್ಣ ಬಣ್ಣ ಬಳಿಯಲು, ಭಕ್ತ ಮತ್ತು ಭಗವಂತನನ್ನು ಹತ್ತಿರವಾಗಿಸಲು “ಆರಾಧನಾ’ ಎನ್ನುವ ಯೋಜನೆ ರೂಪಿಸಲಾಗಿತ್ತು. ಇಂದಿರಾ ಗಾಂಧಿ ಬಡವರಿಗೆ ಭೂಮಿ ಕೊಡಿಸಿದರು, ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದ್ದಾರೆ. ರಾಜೀವ್‌ ಗಾಂಧಿ ಮೊಬೈಲ್‌, ಟಿವಿ ವಿಚಾರದಲ್ಲಿ ಕ್ರಾಂತಿಯನ್ನೇ ಮಾಡಿದ್ದಾರೆ. ಮನಮೋಹನ್‌ ಸಿಂಗ್‌ ಅವ ಧಿಯಲ್ಲಿ ದೇಶಕ್ಕೆ ಆಹಾರ ಭದ್ರತಾ ಕಾಯ್ದೆ, ನರೇಗಾದಂತಹ ಯೋಜನೆ ರೂಪಿಸಿ ಜನರಿಗೆ ಉದ್ಯೋಗ ನೀಡಿದ್ದಾರೆ. ಬಿಜೆಪಿ ಇಂತಹ ಒಂದಾದರೂ ಯೋಜನೆ ಕೊಟ್ಟಿದೆಯಾ? ಚಿತ್ರದುರ್ಗ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್‌ ಪಕ್ಷ ಆರಕ್ಕೆ ಆರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದರು. ಎಐಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಾಜೇಶ್‌ ನಿಲೋಟಿ ಮಾತನಾಡಿ, ಕಾಂಗ್ರೆಸ್‌ ಸಂವಿಧಾನವನ್ನು ಉಳಿಸುವ ಕೆಲಸ ಮಾಡುತ್ತಿದೆ.

ಆದರೆ ಬಿಜೆಪಿ, ಆರೆಸ್ಸೆಸ್‌ನವರು ಸಂವಿಧಾನ ಮುಗಿಸಲು ಹೊರಟಿದ್ದಾರೆ. ಬಿಜೆಪಿ ವಿರುದ್ಧ ದೇಶದ ಜನರನ್ನು ಜಾಗೃತಗೊಳಿಸಲು, ಸಂವಿಧಾನ ಉಳಿಸಲು ರಾಹುಲ್‌ ಗಾಂಧಿ  ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿಯ ಅಪಪ್ರಚಾರಗಳಿಗೆ ನಾವು ಹೆದರುವುದಿಲ್ಲ.ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರವನ್ನು ಅ ಧಿಕಾರಕ್ಕೆ ತರಬೇಕು. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಜತೆಗೆ ಇಡೀ ದೇಶದ ಕಾಂಗ್ರೆಸ್‌ ಕಾರ್ಯಕರ್ತರು ಇರುತ್ತಾರೆ ಎಂದರು.

ಬಿಜೆಪಿ ಮಂದಿರ, ಮಸೀದಿ, ಹಿಂದುತ್ವದ ಹೆಸರಿನಲ್ಲಿ ರಾಜಕಾರಣ ಮಾಡಿ ಜಾತಿ-ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುತ್ತಿದೆ. ಈ ಚುನಾವಣೆಯಲ್ಲಿ ಮನುವಾದಿಗಳಿಗೆ ಉತ್ತರ ಕೊಡಲು ಸಿದ್ಧತೆ ಮಾಡಿಕೊಳ್ಳಬೇಕು. ಮನುವಾದಕ್ಕೆ ಪರ್ಯಾಯ ಅಂಬೇಡ್ಕರ್‌ ವಿಚಾರಗಳು ಮಾತ್ರ ಎಂದು ಪ್ರತಿಪಾದಿಸಿದರು.

ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಸಂವಿಧಾನದ ಪ್ರಸ್ತಾವನೆ ಓದಿದರು. ರಾಜ್ಯಸಭೆ ಮಾಜಿ ಸದಸ್ಯ ಎಚ್‌. ಹನುಮಂತಪ್ಪ, ಕೆಪಿಸಿಸಿ ಎಸ್‌ಸಿ ಘಟಕದ ಅಧ್ಯಕ್ಷ ಧರ್ಮಸೇನಾ, ಸಚಿನ್‌ ಮಿಗಾ, ಮಾಜಿ ಸಚಿವ ಎಚ್‌. ಆಂಜನೇಯ, ಮಾಜಿ ಸಂಸದ ಬಿ.ಎನ್‌. ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ.ಕೆ. ತಾಜ್‌ಪೀರ್‌, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಮಾಜಿ ಶಾಸಕರಾದ ಬಿ.ಜಿ. ಗೋವಿಂದಪ್ಪ, ಎ.ವಿ. ಉಮಾಪತಿ, ಎಸ್‌. ತಿಪ್ಪೇಸ್ವಾಮಿ, ಮಾಜಿ ಸಚಿವ ಡಿ.ಸುಧಾಕರ್‌, ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್‌.ಮಂಜುನಾಥ್‌, ಡಾ| ಯೋಗೀಶ್‌ಬಾಬು, ಹನುಮಲಿ ಷಣ್ಮುಖಪ್ಪ ಮತ್ತಿತರರು ಇದ್ದರು.

ಬಿಜೆಪಿ ಕ್ಷಮೆಯಾಚನೆ ಯಾತ್ರೆ ಮಾಡಲಿ: ಸಲೀಂ ಮದಕರಿಪುರದಲ್ಲಿ “ಸಂವಿಧಾನ ಬಚಾವೋ’ ಪಾದಯಾತ್ರೆಗೆ ಚಾಲನೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌ ಮಾತನಾಡಿ, ಬಿಜೆಪಿಯ ಭ್ರಷ್ಟ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಅತಿವೃಷ್ಟಿ ಮತ್ತಿತರ ಸಮಸ್ಯೆಗಳಿಂದ ಜನ ನೊಂದಿದ್ದಾರೆ. ರೈತರಿಗೆ ಸಹಾಯ ಮಾಡದ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಮತದಾರರ ನೆನಪಾಗುತ್ತಿದೆ. ಜನ ಸಂಕಲ್ಪ ಯಾತ್ರೆ ಬದಲು ಕ್ಷಮೆಯಾಚನೆ ಯಾತ್ರೆ ಮಾಡಬೇಕಿದೆ.

ರಾಜ್ಯದಲ್ಲಿ ಜನ ಬದಲಾವಣೆ ಬಯಸುತ್ತಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುವ ಷಡ್ಯಂತ್ರ ರೂಪಿಸಿದೆ. ಬಿಜೆಪಿ ಸಂಸದ ಅನಂತಕುಮಾರ್‌ ಹೆಗಡೆ ಈ ಕುರಿತು ಬಹಿರಂಗ ಹೇಳಿಕೆ ನೀಡಿದ್ದಾರೆ. ಆದರೆ ಕಾಂಗ್ರೆಸ್‌ ಸಂವಿಧಾನ ಉಳಿಸಲು ಬದ್ಧವಾಗಿದೆ ಎಂದರು.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.