ಕರ್ತವ್ಯ ಪಾಲನೆ ಪ್ರತಿಯೊಬ್ಬರ ಜವಾಬ್ದಾರಿ; ಪ್ರವೀಣ್‌ ನಾಯಕ್‌

ದೌರ್ಜನ್ಯಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳು ಪೋಕ್ಸೋ ಅಡಿಯಲ್ಲಿ ಬರುತ್ತವೆ.

Team Udayavani, Dec 1, 2022, 6:17 PM IST

ಕರ್ತವ್ಯ ಪಾಲನೆ ಪ್ರತಿಯೊಬ್ಬರ ಜವಾಬ್ದಾರಿ; ಪ್ರವೀಣ್‌ ನಾಯಕ್‌

ದಾವಣಗೆರೆ: ಮೂಲಭೂತ ಕರ್ತವ್ಯಗಳ ಪಾಲನೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಕಾನೂನು ಸೇವಾ ಸದಸ್ಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್‌ ನಾಯಕ್‌ ಹೇಳಿದರು.

ಭಾರತ ಸಂವಿಧಾನ ಸಪ್ತಾಹದ ಅಂಗವಾಗಿ ಬುಧವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ನ್ಯೂ ಡೆಲ್ಲಿ ಪಬ್ಲಿಕ್‌ ಸ್ಕೂಲ್‌ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ಅಡಿ ಮೂಲಭೂತ ಹಕ್ಕುಗಳ ಬಗ್ಗೆ ಹೋರಾಟ ಮಾಡುತ್ತೇವೆ. ಆದರೆ ಈ ಹಂತದಲ್ಲಿ ಮೂಲಭೂತ ಕರ್ತವ್ಯಗಳನ್ನೇ ಮರೆಯುತ್ತಿದ್ದೇವೆ. ಸಂವಿಧಾನದ ಬಗ್ಗೆ ತಿಳಿದುಕೊಳ್ಳಬೇಕು. ಸುಪ್ರೀಂ ಕೋರ್ಟ್‌
ನಿರ್ದೇಶನದಂತೆ ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳ ಪಾಲನೆ ಮಾಡಬೇಕು ಎಂದರು.

ಶಾಲಾ-ಕಾಲೇಜುಗಳಲ್ಲಿ ಆಂಗ್ಲ ಭಾಷೆಯ ಜೊತೆಗೆ ಕನ್ನಡ ಮಾಧ್ಯಮವನ್ನು ಕಡ್ಡಾಯವಾಗಿ ಕಲಿಸಬೇಕು. ಕನ್ನಡದಲ್ಲೇ ಮಾತನಾಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಪೋಷಕರು ಮನೆಗಳಲ್ಲೂ ಮಕ್ಕಳೊಂದಿಗೆ ಆಂಗ್ಲ ಭಾಷೆಯಲ್ಲಿ ಮಾತನಾಡುತ್ತಾರೆ. ಕನ್ನಡಿಗರಾದ ನಾವು ಕನ್ನಡದಲ್ಲೇ ಮಾತನಾಡೋಣ, ವ್ಯವಹರಿಸೋಣ, ಬರೆಯೋಣ. ಎಲ್ಲವನ್ನೂ ಕನ್ನಡದಲ್ಲಿ ಮಾಡುವ ಮೂಲಕ ಕನ್ನಡವನ್ನು ಉಳಿಸಿ, ಬೆಳೆಸಬೇಕಿದೆ. ಬೇರೆ ಭಾಷೆಗಳ ಬಗ್ಗೆ ದುರಾಭಿಮಾನ ಬೇಡ ಎಂದು ಸಲಹೆ ನೀಡಿದರು.

ಹಿರಿಯ ನ್ಯಾಯವಾದಿ ಎಲ್‌.ಎಚ್‌. ಅರುಣ್‌ ಕುಮಾರ್‌ ಮಾತನಾಡಿ, ಸಂವಿಧಾನದ ಅಂಗವಾಗಿ ಏರ್ಪಡಿಸಿರುವ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧಿಗಳು ಮನೋಭಾವದಿಂದ ಭಾಗವಹಿಸಬೇಕು. ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಸ್ಪರ್ಧಾತ್ಮಕ ಯುಗದಲ್ಲಿ ಮೂಲಭೂತ
ಹಕ್ಕುಗಳ ಜೊತೆಗೆ ಮೂಲಭೂತ ಕರ್ತವ್ಯ, ಸಂವಿಧಾನದ ಬಗ್ಗೆ ಅರಿತುಕೊಂಡರೆ ಸಹೋದರತೆ, ಏಕತೆ ಮೂಡುತ್ತದೆ ಎಂದು ತಿಳಿಸಿದರು.

ಎಲ್ಲ ಭಾಷೆಗಳಲ್ಲೂ ಏಕತೆಯನ್ನು ಕಾಣುವ ಭಾರತ ಹಲವು ಭಾಷೆ ಒಳಗೊಂಡಿದೆ. ನಾವೆಲ್ಲರೂ ಭಾರತೀಯರೇ. ಮೂಲ ಗ್ರಂಥ ಸಂವಿಧಾನ ಎಂದು ಹೇಳಿಕೊಳ್ಳಬೇಕೆ ವಿನಃ ಆಯಾ ಜಾತಿ ಧರ್ಮದ ಅನುಸಾರದಲ್ಲಿ ಗ್ರಂಥಗಳನ್ನು ಹೇಳಬಾರದು. ಅವುಗಳನ್ನು ಸಮುದಾಯಕ್ಕೆ ಸೀಮಿತವಾಗಿಟ್ಟು ಕೊಳ್ಳಬೇಕು ಎಂದರು.

ಮುಖ್ಯ ಶಿಕ್ಷಕಿ ಬಿ.ಎಸ್‌. ಪೂರ್ಣಿಮಾ ಅಧ್ಯಕ್ಷತೆ ವಹಿಸಿದ್ದರು. ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿ ಕಾರಿ ಟಿ. ಅಂಬಣ್ಣ, ಶಿಕ್ಷಣ ಸಂಯೋಜಕ ಡಿ. ನಾಗರಾಜ್‌, ಕೆ.ಜಿ. ರವಿಕುಮಾರ್‌, ಶಾಲಾ ಕಾರ್ಯದರ್ಶಿ ಸಂತೋಷ್‌ಕುಮಾರ್‌, ಸಹನಾ ಸಂತೋಷ್‌ಕುಮಾರ್‌ ಇತರರು ಇದ್ದರು.

ಹಿಂಜರಿಕೆ ಬಿಟ್ಟು ಹೇಳಿಕೆ ನೀಡಿ
ಪೋಕ್ಸೋ ಎಂದರೆ ಕೇವಲ ಬಾಲಕಿಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳಲ್ಲ. 18 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳು ಪೋಕ್ಸೋ ಅಡಿಯಲ್ಲಿ ಬರುತ್ತವೆ. ಸಂತ್ರಸ್ತರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಉಚಿತವಾಗಿ ಕಾನೂನು ನೆರವು ನೀಡಲಾಗುತ್ತದೆ. ಮಕ್ಕಳ ಸ್ನೇಹಿ ನ್ಯಾಯಾಲಯಗಳನ್ನು ರೂಪಿಸಲಾಗಿದೆ.

ಮಕ್ಕಳಿಗೆ ಗುಪ್ತವಾಗಿ ವಿಚಾರಣೆ ಮಾಡಲಾಗುತ್ತಿದೆ. ಮಕ್ಕಳು ಯಾವುದೇ ರೀತಿಯ ದೌರ್ಜನ್ಯಗಳಾದಾಗ ಮುಕ್ತವಾಗಿ ನ್ಯಾಯಾಲಯ ಇಲ್ಲವೇ ಪೊಲೀಸ್‌ ಠಾಣೆಗೆ
ಹಾಜರಾಗಿ ದೂರು ಅಥವಾ ಹೇಳಿಕೆ ನೀಡಬೇಕು. ಯಾವುದೇ ಭಯ ಬೇಡ ಎಂದು ಕಾನೂನು ಸೇವಾ ಸದಸ್ಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್‌ ನಾಯಕ್‌ ತಿಳಿಸಿದರು.

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.