ಪ್ರವಾಹ ತಡೆಗೆ 185 ಕೆರೆಗಳಿಗೆ ಗೇಟ್‌

ಜಲಾಶಯಗಳ ಕ್ರಸ್ಟ್‌ ಗೇಟ್‌ ಮಾದರಿ ಕೆರೆಗಳಿಗೆ ಅಳವಡಿಕೆ

Team Udayavani, Dec 2, 2022, 10:23 AM IST

5

ಬೆಂಗಳೂರು: ಪ್ರಸಕ್ತ ವರ್ಷದ ಮಳೆಗಾಲದಲ್ಲಿ ನಗರದ ಹಲವು ಬಡಾವಣೆಗಳು ಪ್ರವಾಹಕ್ಕೆ ತುತ್ತಾಗಿ ಸಂಕಷ್ಟ ಎದುರಾಗಿತ್ತು. ಇನ್ನು ಮುಂದೆ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುವುದನ್ನು ತಡೆಯಲು ಕೆರೆಗಳಿಗೆ ಡ್ಯಾಂಗಳಲ್ಲಿನ ಕ್ರಸ್ಟ್‌ ಗೇಟ್‌ ಮಾದರಿಯ ಗೇಟ್‌ಗಳ ಅಳವಡಿಕೆಗೆ ಬಿಬಿಎಂಪಿ ಮುಂದಾಗಿದೆ.

ಪ್ರತಿ ಬಾರಿ ಮಳೆ ಬಂದಾಗಲು ಬೆಂಗಳೂರಿನ ಹಲವು ಬಡಾವಣೆಗಳು ಜಲಾವೃತವಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಈ ವರ್ಷ ಮಳೆಯ ಪ್ರಮಾಣ ಹೆಚ್ಚಾಗಿ ನಗರದ 60ಕ್ಕೂ ಹೆಚ್ಚಿನ ಬಡಾವಣೆಗಳು ಒಂದಿಲ್ಲೊಂದು ಬಾರಿ ಪ್ರವಾಹಕ್ಕೆ ತುತ್ತಾಗಿವೆ. ಹೀಗೆ ಪದೇ ಪದೆ ಪ್ರವಾಹ ಸೃಷ್ಟಿಯಾಗಲು ರಾಜಕಾಲುವೆಗಳ ನಿರ್ವಹಣೆಯ ಲೋಪ ಒಂದೆಡೆಯಾದರೆ, ಕೆರೆಗಳು ಭರ್ತಿಯಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದಿದ್ದು ಮತ್ತೂಂ ದು ಕಾರಣ ಎನ್ನಲಾಗುತ್ತಿದೆ. ಹೀಗಾಗಿ ಕೆರೆಗಳಿಂದ ಹರಿಯುವ ನೀರನ್ನು ನಿಯಂತ್ರಿಸುವ ಸಲುವಾಗಿ ನಗರದಲ್ಲಿನ 185 ಕೆರೆಗಳಿಗೆ ಗೇಟ್‌ಗಳನ್ನು ಅಳವಡಿಸಲು ಯೋಜನೆ ರೂಪಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 219 ಕೆರೆಗಳಿವೆ. ಅವುಗಳಲ್ಲಿ 100ಕ್ಕೂ ಹೆಚ್ಚಿನ ಕೆರೆಗಳ ಹೂಳು ತೆಗೆ ಯುವುದು, ಕೆರೆ ದಂಡೆಯನ್ನು ಸದೃಢಪಡಿಸುವುದು, ಕೆರೆ ಸುತ್ತ ಬೇಲೆ ಹಾಕುವುದು ಸೇರಿ ಇನ್ನಿತರ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಅಲ್ಲದೆ ಮುಂದಿನ ಕೆಲ ವರ್ಷಗಳಲ್ಲಿ ಎಲ್ಲ 219 ಕೆರೆಗಳ ಅಭಿವೃದ್ಧಿ ಮಾಡುವ ಗುರಿಯನ್ನು ಬಿಬಿಎಂಪಿ ಹೊಂದಿದೆ. ಅದಕ್ಕೂ ಮುನ್ನ 219 ಕೆರೆಗಳ ಪೈಕಿ 185 ಕೆರೆ ಗಳಿಂದ ರಾಜಕಾಲುವೆಗೆ ನೀರು ಹರಿಯುವುದನ್ನು ನಿಯಂತ್ರಿಸಲು ಗೇಟ್‌ಗಳನ್ನು ಅಳವಡಿಸಲಾಗುತ್ತಿದೆ.

ಮಳೆ ಬಂದಾಗ ಗೇಟ್‌ ಬಂದ್‌: ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ನಲ್ಲಿ ಮಳೆ ಬಂದಾಗ ನಗರದಲ್ಲಿನ 50ಕ್ಕೂ ಹೆಚ್ಚಿನ ಕೆರೆಗಳು ಭರ್ತಿಯಾಗಿ ಹೆಚ್ಚಿನ ಪ್ರಮಾಣದ ನೀರು ರಾಜಕಾಲುವೆಗೆ ಹರಿದಿತ್ತು. ಕೆರೆಗಳಿಂದ ಹರಿದ ನೀರಿನ ಮಟ್ಟವನ್ನು ರಾಜಕಾಲುವೆಗಳು ತಡೆಯಲಾಗದ ಕಾರಣ ನೀರು ಅಕ್ಕಪಕ್ಕದ ಬಡಾವಣೆಗಳಿಗೆ ಹರಿದಿತ್ತು. ಹೀಗಾಗಿ ಕೆರೆಗಳಿಂದ ರಾಜಕಾಲುವೆಗೆ ನೀರು ಹರಿಯುವ ಜಾಗದಲ್ಲಿ ಗೇಟ್‌ ಅಳವಡಿಸಲಾಗುತ್ತದೆ. ಮಳೆ ಬಂದಾಗ ಕೆರೆಯಲ್ಲಿ ಶೇಖರಣೆಯಾಗುವ ನೀರಿನ ಪ್ರಮಾಣ ಹೆಚ್ಚಾಗುವುದು ಕಂಡು ಬಂದಾಗ ನೀರು ಹೊರಗೆ ಹೋಗುವ ಗೇಟ್‌ನ್ನು ಬಂದ್‌ ಮಾಡಲಾಗುತ್ತದೆ. ಅದರಿಂದ ರಾಜಕಾಲುವೆಗಳ ಮೇಲೆ ಒತ್ತಡ ಹೆಚ್ಚುವುದು ನಿಲ್ಲುತ್ತದೆ.

ಮಳೆ ನಿಂತು ರಾಜಕಾಲುವೆಯಲ್ಲಿ ನೀರು ಹರಿಯುವ ಪ್ರಮಾಣ ಕಡಿಮೆಯಾದ ನಂತರ ಗೇಟ್‌ನ್ನು ತೆರೆಯಲಾಗುತ್ತದೆ. ಅದರಿಂದ ಕೆರೆಯ ನೀರು ರಾಜಕಾಲುವೆ ಮೂಲಕ ಹರಿದು ಖಾಲಿಯಾಗುತ್ತದೆ. ಮತ್ತೆ ಮಳೆ ಬಂದಾಗ ಕೆರೆಯಲ್ಲಿ ನೀರು ಶೇಖರಣೆ ಮಾಡುವುದಕ್ಕೆ ಸ್ಥಳಾವಕಾಶ ಇರುವಂತೆ ಮಾಡಲಾಗುತ್ತದೆ.

ಜನವರಿಯಿಂದ ಕಾಮಗಾರಿ ಆರಂಭ

ಬಿಬಿಎಂಪಿ ಕೆರೆ ವಿಭಾಗದ ಅಧಿಕಾರಿಗಳು ರೂಪಿಸಿರುವ ಯೋಜನೆಗೆ ಮುಖ್ಯ ಆಯುಕ್ತರು ಮತ್ತು ಆಡಳಿತಾಧಿಕಾರಿಯಿಂದ ಅನುಮೋದನೆ ದೊರೆತಿದೆ. ಯೋಜನೆಗಾಗಿ ಕೆರೆ ವಿಭಾಗಕ್ಕೆ ಈ ಬಾರಿ ನೀಡಿದ ಅನುದಾನದಲ್ಲಿ 35 ಕೋಟಿ ರೂ. ವ್ಯಯಿಸಲಾಗುತ್ತದೆ. ಅಲ್ಲದೆ ಟೆಂಡರ್‌ ಪ್ರಕ್ರಿಯೆ ನಡೆಸಿ ಗೇಟ್‌ ಅಳವಡಿಕೆಗೆ ಖಾಸಗಿ ಸಂಸ್ಥೆಯನ್ನು ನೇಮಿಸಲಾಗುತ್ತದೆ. ಇನ್ನೊಂದು ತಿಂಗಳಲ್ಲಿ ಟೆಂಡರ್‌ ಪ್ರಕ್ರಿಯೆ ನಡೆಯಲಿದ್ದು, ಜನವರಿಯಿಂದ ಗೇಟ್‌ ಅಳವಡಿಕೆ ಕಾರ್ಯ ಆರಂಭವಾಗಲಿದೆ. 2023ರ ಮಳೆಗಾಲ ಆರಂಭಕ್ಕೂ ಮುನ್ನ ಅಂದರೆ ಮೇ ತಿಂಗಳ ಅಂತ್ಯದೊಳಗೆ ನಿಗದಿಪಡಿಸಿರುವ 185 ಕೆರೆಗಳಲ್ಲೂ ಗೇಟ್‌ ಅಳವಡಿಸುವ ಕಾರ್ಯ ಪೂರ್ಣಗೊಳಿಸಲಾಗುತ್ತದೆ. ಅದರಿಂದ ಮುಂದಿನ ಮಳೆಗಾಲದಲ್ಲಿ ಕೆರೆಗಳಿಂದ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗುವುದನ್ನು ತಡೆಯಲು ನಿರ್ಧರಿಸಲಾಗಿದೆ.

ನಗರದಲ್ಲಿ ಸೃಷ್ಟಿಯಾಗುತ್ತಿರುವ ಪ್ರವಾಹ ಪರಿಸ್ಥಿತಿ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲಾಗುತ್ತಿದೆ. ಪ್ರಮುಖ ವಾಗಿ ಮಳೆ ಬಂದಾಗ ಕೆರೆಗಳಿಂದ ರಾಜಕಾಲುವೆಗೆ ಹರಿವ ನೀರಿನ ಪ್ರಮಾಣ ಹೆಚ್ಚಾಗುವುದರಿಂದಲೂ ಪ್ರವಾಹ ಸೃಷ್ಟಿಗೆ ಕಾರಣವಾಗಿದೆ. ಹೀಗಾಗಿ ಮಳೆ ಬಂದಾಗ ಕೆರೆಗಳಿಂದ ನೀರು ಹೊರಗೆ ಹರಿಯದಂತೆ ತಡೆಯಲು ಗೇಟ್‌ಗಳನ್ನು ಅಳವಡಿಸಲು ಯೋಜನೆ ರೂಪಿಸಲಾಗಿದೆ. ಶೀಘ್ರದಲ್ಲಿ ಅದನ್ನು ಜಾರಿ ಮಾಡಿ, ಮುಂದಿನ ವರ್ಷದಿಂದ ಪ್ರವಾಹ ನಿಯಂತ್ರಿಸಲಾಗುವುದು. ● ಶಶಿಕುಮಾರ್‌, ಬಿಬಿಎಂಪಿ ಮುಖ್ಯ ಎಂಜಿನಿಯರ್‌ (ಕೆರೆ ವಿಭಾಗ)

● ಗಿರೀಶ್‌ ಗರಗ

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.