ಬೆಳೆನಷ್ಟ ಪರಿಹಾರ ಘೋಷಿಸದಿದ್ದರೆ ಹೋರಾಟ

ಬೆಳೆಗಾರರ ಸಾಲಮನ್ನಾ ಮಾಡಬೇಕು

Team Udayavani, Dec 15, 2022, 6:44 PM IST

ಬೆಳೆನಷ್ಟ ಪರಿಹಾರ ಘೋಷಿಸದಿದ್ದರೆ ಹೋರಾಟ

ಚಿಕ್ಕಮಗಳೂರು: ಅಕಾಲಿಕ ಮಳೆಯಿಂದ ಬೆಳೆಹಾನಿಯಾಗಿದ್ದು, ಸರ್ಕಾರ ಶೀಘ್ರವೇ ಬೆಳೆನಷ್ಟ ಸಮೀಕ್ಷೆ ನಡೆಸಿ ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡಬೇಕು. ರೈತರ ಸಾಲಮನ್ನಾ ಮಾಡಬೇಕು ತಪ್ಪಿದಲ್ಲಿ ಕಾಂಗ್ರೆಸ್‌ನಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಕೆಪಿಸಿಸಿ ವಕ್ತಾರ ಎಚ್‌.ಎಚ್‌. ದೇವರಾಜ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಫಿ, ಅಡಕೆ, ಭತ್ತದ ಕಟಾವು ನಡೆಯುತ್ತಿದ್ದು, ಅಕಾಲಿಕ ಮಳೆಯಿಂದ ಬೆಳೆನಷ್ಟವಾಗಿದೆ. ಅದರಲ್ಲೂ ಕಾಫಿ ಬೆಳೆಗಾರರು ಭಾರೀ ಸಮಸ್ಯೆಗೆ ಸಿಲುಕಿದ್ದು, ಕಾರ್ಮಿಕರ ಕೊರತೆಯಿಂದ ಸಣ್ಣ ಮತ್ತು ಮಧ್ಯಮ ವರ್ಗದ ಬೆಳೆಗಾರರು ಬೆಳೆ ಕಟಾವು ಮಾಡಲು ಸಾಧ್ಯವಾಗುತ್ತಿಲ್ಲ. ಮಳೆಯಿಂದ ಬೆಳೆ ಕೊಯ್ಲು ಮಾಡಲು ಸಾಧ್ಯವಾಗದೆ ಕಾಫಿ ಮಣ್ಣು ಪಾಲಾಗುತ್ತಿದೆ. ಸಂಬಂಧಪಟ್ಟ ಇಲಾಖೆಗಳು ಬೆಳೆಗಾರರ ನೆರವಿಗೆ ಬರುತ್ತಿಲ್ಲ ಎಂದು ಆರೋಪಿಸಿದರು.

ಅಕಾಲಿಕ ಮಳೆ ಕಾಫಿ ಬೆಳೆಗಾರರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಬೆಳೆಗಾರರು ಸಂಕಷ್ಟದಲ್ಲಿದ್ದರು ಸಂಬಂಧಪಟ್ಟ ಇಲಾಖೆ ಮತ್ತು ಕಾಫಿ ಮಂಡಳಿ ಅಧಿಕಾರಿಗಳು ಬೆಳೆ ಹಾನಿ ಪ್ರದೇಶಗಳಿಗೆ ಭೇಟಿನೀಡಿ ಹಾನಿ ಸಮೀಕ್ಷೆ ಮಾಡದೆ ನಿರ್ಲಕ್ಷ್ಯವಹಿಸಿದ್ದಾರೆ ಎಂದು ದೂರಿದರು.

ಕಾಫಿ ಉದ್ಯಮ ಅವನತಿ ಹಾದಿ ಹಿಡಿದಿದ್ದು, ಬೆಳೆಗಾರರ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ ಕೇವಲ ಭರವಸೆ ನೀಡುತ್ತಾರೆ. ಪರಿಹಾರ ಸಿಗುತ್ತಿಲ್ಲ. ಕೇಂದ್ರ ಸರ್ಕಾರ ಕೂಡಲೇ ನಿಯೋಗವೊಂದನ್ನು ಕಾಫಿಬೆಳೆಯುವ ಜಿಲ್ಲೆಗಳಿಗೆ ಕಳಿಸಿ ನಷ್ಟ ಅಂದಾಜು ವರದಿ ಸಂಗ್ರಹಿಸಬೇಕು. ಬೆಳೆನಷ್ಟ ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡಬೇಕು. ಬೆಳೆಗಾರರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ. ಮಂಜೇಗೌಡ, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷ ನಯಾಜ್‌ ಅಹಮದ್‌, ನಗರ ಘಟಕದ ತನೋಜ್‌ಕುಮಾರ್‌, ಮುಖಂಡ ಕುರುವಂಗಿ ವೆಂಕಟೇಶ್‌ ಇದ್ದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಸಿ.ಟಿ. ರವಿಗೆ ರೈತರ ಸಮಸ್ಯೆ ಕಾಣುತ್ತಿಲ್ಲ. ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್‌ ಕಾಂಗ್ರೆಸ್‌ ಶಾಸಕ ರಾಜೇಗೌಡ ಅವರ ವಿರುದ್ಧ ಸುಳ್ಳು ಆರೋಪ ಮಾಡುವುದರಲ್ಲೇ ತಲ್ಲೀನರಾಗಿದ್ದಾರೆ. ಬಿಜೆಪಿಯವರಿಗೆ ಜನರ ಭಾವನೆ ಕೆರಳಿಸಿ ಗಲಭೆ ಸೃಷ್ಟಿಸುವುದು ಬೇಕೇ ಹೊರತು. ಜನರ ಬದುಕಿನ ವಿಚಾರ ಬೇಡವಾಗಿದೆ.
ಎಚ್‌.ಎಚ್‌. ದೇವರಾಜ್‌.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.