ಯಳಂದೂರು: ಅತ್ಯಾಚಾರದಿಂದ 16 ವರ್ಷದ ಬಾಲಕಿ ಗರ್ಭಿಣಿ
Team Udayavani, Dec 16, 2022, 6:39 PM IST
ಯಳಂದೂರು: ತಾಲೂಕಿನ ಕೋಳಿಫಾರ್ಮ್ವೊಂದರಲ್ಲಿ ಕುಟುಂಬದ ಜತೆಗೆ ವಾಸವಿದ್ದ 16 ವರ್ಷದ ಬಾಲಕಿ ಮೇಲೆ 3 ತಿಂಗಳ ಹಿಂದೆ ಅತ್ಯಾಚಾರ ಎಸಗಿಲಾಗಿದ್ದು, ಆಕೆ ಈಗ ಗರ್ಭಿಣಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಿಹಾರ ಮೂಲದ ಕೂಲಿ ಕಾರ್ಮಿಕರು ತಿಂಗಳ ಹಿಂದೆ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿರುವ ಕೋಳಿಫಾರ್ಮ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇಲ್ಲಿನ ದಂಪತಿಗೆ ಐದು ಮಕ್ಕಳಿದ್ದು, ಈ ಬಾಲಕಿಯೇ ದೊಡ್ಡವಳು ಎಂದು ತಿಳಿದು ಬಂದಿದೆ.
ಈಕೆಗೆ ತೀವ್ರವಾದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇವರ ತಂದೆ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ತಪಾಸಣೆ ಸಮಯದಲ್ಲಿ ಈ ಬಾಲಕಿ 3 ತಿಂಗಳ ಗರ್ಭಿಣಿಯಾಗಿದ್ದಾಳೆ ಎಂಬುದು ಬೆಳಕಿಗೆ ಬಂದಿದೆ. ನಂತರ ಬಾಲಕಿಯನ್ನು ಚಾಮರಾಜನಗರ ಜಿಲ್ಲಾ ಮಹಿಳಾ ಸಾಂತ್ವನ ಕೇಂದ್ರಕ್ಕೆ ಮಾಹಿತಿ ನೀಡಿ ಕುಟುಂಬದ ಜತೆಗೆ ಆಪ್ತ ಸಮಾಲೋಚನೆ ನಡೆಸಲಾಗಿದೆ. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ