3 ಅಪರಾಧಗಳು “ಕ್ರಿಮಿನಲ್‌ ಪಟ್ಟಿ’ಯಿಂದ ಹೊರಕ್ಕೆ; ಬೇಳೆಕಾಳುಗಳ ಸಿಪ್ಪೆಗಳಿಗೆ ಇನ್ನು ತೆರಿಗೆಯಿಲ್ಲ

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಮಹತ್ವದ ನಿರ್ಧಾರ

Team Udayavani, Dec 18, 2022, 6:50 AM IST

3 ಅಪರಾಧಗಳು “ಕ್ರಿಮಿನಲ್‌ ಪಟ್ಟಿ’ಯಿಂದ ಹೊರಕ್ಕೆ; ಬೇಳೆಕಾಳುಗಳ ಸಿಪ್ಪೆಗಳಿಗೆ ಇನ್ನು ತೆರಿಗೆಯಿಲ್ಲ

ನವದೆಹಲಿ:ಮೂರು ಅಪರಾಧಗಳನ್ನು “ಕ್ರಿಮಿನಲ್‌ ಅಪರಾಧ ಪಟ್ಟಿ’ಯಿಂದ ಹೊರಗಿಡುವುದು, ತೆರಿಗೆ ಕಾನೂನಿನಡಿ ವಿಚಾರಣೆಗೆ ಒಳಪಡುವ ವಂಚನೆಯ ಮೊತ್ತದ ಮಿತಿಯನ್ನು 2 ಕೋಟಿ ರೂ.ಗೆ ಏರಿಸುವುದು, ಕೆಲವು ವಸ್ತುಗಳ ಮೇಲಿನ ಜಿಎಸ್‌ಟಿ ಸ್ಲ್ಯಾಬ್ ಇಳಿಕೆ…

ಇವು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್‌ ನೇತೃತ್ವದಲ್ಲಿ ಶನಿವಾರ ನಡೆದ 48ನೇ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಸಭೆಯಲ್ಲಿ ಕೈಗೊಂಡ ನಿರ್ಧಾರಗಳು.

ಶನಿವಾರದ ಸಭೆಯಲ್ಲಿ ಯಾವುದೇ ಸರಕು ಅಥವಾ ಸೇವೆಯ ತೆರಿಗೆಯನ್ನು ಹೆಚ್ಚಳ ಮಾಡಿಲ್ಲ. ಆದರೆ, ಬೇಳೆಕಾಳುಗಳ ಸಿಪ್ಪೆಯ ಮೇಲಿನ ಜಿಎಸ್‌ಟಿಯನ್ನು ತೆಗೆದುಹಾಕಲಾಗಿದೆ. ಇಥೈಲ್‌ ಆಲ್ಕೋಹಾಲ್‌ ಮೇಲಿನ ಜಿಎಸ್‌ಟಿಯನ್ನು ಶೇ.5ರ ಸ್ಲ್ಯಾಬ್ ಗೆ ಇಳಿಸಲಾಗಿದೆ.

ಎಸ್‌ಯುವಿಗಳು, 1500ಸಿಸಿಗಿಂತ ಹೆಚ್ಚು ಸಾಮರ್ಥ್ಯದ ಎಂಜಿನ್‌ ಹೊಂದಿರುವಂಥವುಗಳು, 4 ಸಾವಿರ ಎಂಎಂಗಿಂತ ಉದ್ದನೆಯ ವಾಹನಗಳು ಮತ್ತು 160 ಎಂ.ಎಂ. ಮತ್ತು ಅದಕ್ಕಿಂತ ಹೆಚ್ಚಿನ ಗ್ರೌಂಡ್‌ ಕ್ಲಿಯರೆನ್ಸ್‌ ಇರುವ ಕಾರುಗಳಿಗೆ ಶೇ.22ರ ಪರಿಹಾರ ಸೆಸ್‌ ಅನ್ವಯವಾಗಲಿದೆ.

ಇದೇ ವೇಳೆ, ಈವರೆಗೆ ತೆರಿಗೆ ವಂಚನೆ ಮೊತ್ತ 1 ಕೋಟಿ ರೂ. ದಾಟಿದರೆ ಮಾತ್ರವೇ ಜಿಎಸ್‌ಟಿ ಕಾಯ್ದೆಯಡಿ ಆ ವ್ಯಕ್ತಿಯ ವಿರುದ್ಧ ತನಿಖೆ ನಡೆಸಲಾಗುತ್ತಿತ್ತು. ಈ 1 ಕೋಟಿ ರೂ.ಗಳ ಮಿತಿಯನ್ನು ಈಗ 2 ಕೋಟಿ ರೂ.ಗಳಿಗೆ ಏರಿಸಲಾಗಿದೆ. ಆದರೆ, ಇದು ಸರಕು, ಸೇವೆಗಳ ಪೂರೈಕೆಯಾಗದಿದ್ದರೂ ಇನ್‌ವಾಯ್ಸ ವಿತರಣೆ ಮಾಡುವಂತಹ ಅಪರಾಧಗಳಿಗೆ ಅನ್ವಯವಾಗುವುದಿಲ್ಲ ಎಂದು ಕಂದಾಯ ಕಾರ್ಯದರ್ಶಿ ಸಂಜಯ್‌ ಮಲ್ಹೋತ್ರಾ ಹೇಳಿದ್ದಾರೆ.

ತೆರಿಗೆಯಲ್ಲಿ ಬದಲಾವಣೆ
ಮಹತ್ವದ ತೀರ್ಮಾನವೆಂಬಂತೆ, ಬೇಳೆಕಾಳುಗಳ ಸಿಪ್ಪೆಯನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಈವರೆಗೆ ಇಂಥ ಸಿಪ್ಪೆಗಳ ಮೇಲೆ ಶೇ.5ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಶನಿವಾರದ ಸಭೆಯಲ್ಲಿ ಇದನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಹಾಗಾಗಿ, ಇನ್ನು ಮುಂದೆ ಧಾನ್ಯಗಳ ಸಿಪ್ಪೆಗಳಿಗೆ ತೆರಿಗೆ ಇರುವುದಿಲ್ಲ. ಇದೇ ವೇಳೆ, ಪೆಟ್ರೋಲ್‌(ಮೋಟಾರ್‌ ಸ್ಪಿರಿಟ್‌)ನೊಂದಿಗೆ ಸಮ್ಮಿಳಿತಗೊಳಿಸಲು ತೈಲ ಶುದ್ಧೀಕರಣ ಘಟಕಗಳಿಗೆ ಸರಬರಾಜು ಮಾಡಲಾಗುವ ಇಥೈಲ್‌ ಆಲ್ಕೋಹಾಲ್‌ ಮೇಲಿನ ಜಿಎಸ್‌ಟಿಯನ್ನು ಈವರೆಗಿದ್ದ ಶೇ.18ರಿಂದ ಶೇ.5ಕ್ಕೆ ಇಳಿಸಲಾಗಿದೆ.

ಯಾವುದು ಇನ್ನು ಕ್ರಿಮಿನಲ್‌ ಅಪರಾಧವಲ್ಲ?
1. ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವುದು
2. ಭೌತಿಕ ಸಾಕ್ಷ್ಯಗಳನ್ನು ಉದ್ದೇಶಪೂರ್ವಕವಾಗಿ ತಿರುಚುವುದು
3. ಮಾಹಿತಿ ಒದಗಿಸುವಲ್ಲಿ ವಿಫ‌ಲರಾಗುವುದು

ಟಾಪ್ ನ್ಯೂಸ್

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.