ಮೈಸೂರಿನಲ್ಲಿ ಕೋವಿಡ್‌ ಟೆಸ್ಟ್‌  ಹೆಚ್ಚಿಸಲು ಕ್ರಮ 


Team Udayavani, Dec 24, 2022, 3:47 PM IST

ಮೈಸೂರಿನಲ್ಲಿ ಕೋವಿಡ್‌ ಟೆಸ್ಟ್‌  ಹೆಚ್ಚಿಸಲು ಕ್ರಮ 

ಮೈಸೂರು: ಕೋವಿಡ್‌ ಮಾರ್ಗಸೂಚಿ ಜಾರಿ ಹಿನ್ನೆಲೆ ಯಲ್ಲಿ ಶುಕ್ರವಾರ ಅಧಿಕಾರಿ ಗಳ ಸಭೆ ಮಾಡಿದ್ದೇವೆ. ಕೋವಿಡ್‌ ಪರೀಕ್ಷೆ ಹೆಚ್ಚಿಸಲು ಸೂಚಿಸಲಾಗಿದೆ. ಮೈಸೂರು ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್‌ ಸೋಂಕಿತರಿಗೆ ಒಟ್ಟು ಒಂದು ನೂರು ಹಾಸಿಗೆ, ತಾಲೂಕು ಆಸ್ಪತ್ರೆಯಲ್ಲಿ ಐದು ಹಾಸಿಗೆ ಗಳನ್ನು ಕಾಯ್ದಿರಿಸಲು ಸೂಚಿಸ ಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಶುಕ್ರ ವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮೈಸೂರು ಜಿಲ್ಲೆಯಲ್ಲಿ ಕೋವಿಡ್‌ ಮೊದಲ ಡೋಸ್‌ ಹಾಗೂ ಎರಡನೇ ಡೋಸ್‌ 27 ಲಕ್ಷ ಜನ ಪಡೆದಿದ್ದಾರೆ. ಮೂರನೇ ಡೋಸ್‌ ಅನ್ನು 6 ಲಕ್ಷ ಜನ ಪಡೆದಿದ್ದಾರೆ. ಯಾರೂ ಭಯ ಬೀಳದೇ ಮುನ್ನೆಚ್ಚರಿಕೆ ವಹಿಸ ಬೇಕು. ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಜನರು ಮಾಸ್ಕ್ ಹಾಕಲು ಮನವಿ ಮಾಡಿದ್ದೇವೆ. ಸದ್ಯಕ್ಕೆ ಯಾವುದಕ್ಕೂ ನಿರ್ಬಂಧ ಮಾಡಲಾಗಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಕೋವಿಡ್‌ ಪರೀಕ್ಷೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಮುಂಜಾಗ್ರತಾ ಲಸಿಕೆ ಪಡೆ ಯಲು ಮನವಿ ಮಾಡುತ್ತೇವೆ. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಪಾಲಿಸಬೇಕು. ಆಸ್ಪತ್ರೆಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೋವಿಡ್‌ ಲಸಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸೂಚಿಸ ಲಾಗಿದೆ ಎಂದು ಅವರು ತಿಳಿಸಿದರು.

ಕೊರೊನಾ ತಡೆಯಲು ಮಾರ್ಗಸೂಚಿಗಳ ಜಾರಿ :

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌-19 ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಕೆಲವು ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಹಲವು ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲೆಯಲ್ಲಿನ ಕೋವಿಡ್‌ ಪರಿಸಿœತಿಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಕ್ರಮಗಳ ಕುರಿತು ಅವರು ಮಾತನಾಡಿದರು. ಕೋವಿಡ್‌ ಪರೀಕ್ಷೆ ಪ್ರಮಾಣ ಹೆಚ್ಚಿಸುವುದು, ಎಲ್ಲ ತೀವ್ರ ನೆಗಡಿ, ಕೆಮ್ಮು, ಜ್ವರ ಪ್ರಕರಣಗಳನ್ನು ಪರೀಕ್ಷೆ ಮಾಡುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ವಿಮಾನ ನಿಲ್ದಾಣಗಳಲ್ಲಿ ವಿದೇಶದಿಂದ ಆಗಮಿಸುವ ಪ್ರಯಾಣಿಕ ರಲ್ಲಿ ಶೇ.2ರಷ್ಟು ಪ್ರಯಾಣಿಕರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸುವುದು, ತಾಲೂಕು, ಜಿಲ್ಲಾ ಆಸ್ಪತ್ರೆಗಳಲ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ ಕೆಲ ಹಾಸಿಗೆಗಳನ್ನು ಮೀಸಲಿಡಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಪಬ್‌, ಬಾರ್‌, ರೆಸ್ಟೋರಂಟ್, ಚಲನಚಿತ್ರ ಮಂದಿರಗಳು, ಶಾಪಿಂಗ್‌ ಮಾಲ್‌, ಕಚೇರಿಗಳು, ಬಸ್‌, ರೈಲು, ವಿಮಾನ ಪ್ರಯಾಣ ಸಂದರ್ಭಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅರ್ಹರೆಲ್ಲರೂ ಕೋವಿಡ್‌ -19 ಲಸಿಕೆಯ ಮುನ್ನೆಚ್ಚರಿಕಾ ಡೋಸ್‌ ಗಳನ್ನು ಶೀಘ್ರವಾಗಿ ಪಡೆದುಕೊಳ್ಳಬೇಕು. ಹೆಚ್ಚಿನ ಜನರು ಗುಂಪು ಗೂಡುವಿಕೆ ಯನ್ನು ತಡೆಯಬೇಕು ಎಂದು ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸೂಚಿಸಿದರು.

ಟಾಪ್ ನ್ಯೂಸ್

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.