ನಿರ್ಮಾಣ ಹಂತದ ವೈದ್ಯಕೀಯ ಕಾಲೇಜಿನ ಶೀಟ್ ಸೆಂಟ್ರಿಂಗ್ ಕುಸಿತ; 9 ಕಾರ್ಮಿಕರಿಗೆ ಗಾಯ, ಜಿಲ್ಲಾಧಿಕಾರಿ ಭೇಟಿ


Team Udayavani, Dec 25, 2022, 11:11 AM IST

5

ಚಿಕ್ಕಬಳ್ಳಾಪುರ: ಜಿಲ್ಲೆಯ ಬಹುನಿರೀಕ್ಷಿತ, ಆರೋಗ್ಯ ಸಚಿವರ ತವರು ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಾಮಗಾರಿ ವೇಳೆ ಶೀಟ್ ಸೆಂಟ್ರಿಂಗ್ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದು, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 9 ಮಂದಿ ಕಾರ್ಮಿಕರು ತೀವ್ರವಾಗಿ ಗಾಯಗೊಂಡು ಪ್ರಾಣಾಪಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಆರೂರು ಬಳಿ ನಿರ್ಮಾಣವಾಗುತ್ತಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಕಾಮಗಾರಿ ವೇಗವಾಗಿಯೇ ನಡೆಯುತ್ತಿದ್ದು, ಮೋಲ್ಡ್ ಹಾಕುವ ಸಲುವಾಗಿ ಶೀಟ್ ಸೆಂಟ್ರಿಂಗ್ ಕುಸಿದು ಬಿದ್ದು, ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆಯೆಂದು ದೂರು ಕೇಳಿ ಬಂದಿದೆ. ಸದ್ಯ 9 ಮಂದಿ ಕಾರ್ಮಿಕರು ಗಾಯಗೊಂಡು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಷಯ ತಿಳಿದ ಕೂಡಲೇ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿಎಲ್ ನಾಗೇಶ್ ಅವರು ತಾಲೂಕಿನ ಅರೂರು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ, ಬಳಿಕ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡಿರುವ ಕಾರ್ಮಿಕರ ಯೋಗಕ್ಷೇಮವನ್ನು ವಿಚಾರಿಸಿ ವೈದ್ಯರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಸರ್ಕಾರಿ ವೈದ್ಯಕೀಯ ಕಾಲೇಜಿನ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಮುಂದಿನ ವರ್ಷ ಫೆಬ್ರವರಿ ಒಳಗೆ ಅದನ್ನು ಉದ್ಘಾಟಿಸಲು ಯೋಜನೆಯನ್ನು ರೂಪಿಸಿದ್ದಾರೆ. ಈ ಹಿನ್ನೆಲೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಾಮಗಾರಿ ವೇಗ ಪಡೆದುಕೊಂಡಿದ್ದು, ಹಗಲಿರುಳು ಕಾರ್ಮಿಕರು ಕಟ್ಟಡದ ಕಾಮಗಾರಿ ಪೂರ್ಣಗೊಳಿಸಲು ಶ್ರಮ ವಹಿಸುತ್ತಿದ್ದಾರೆ. ಆದರೆ ಸೆಂಟ್ರಿಂಗ್ ಹೊಡೆಯುವಾಗ ಈ ದುರಂತ ಸಂಭವಿಸಿದೆ.

ತನಿಖೆಗೆ ಡೀಸಿ ಸೂಚನೆ: ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮಾತನಾಡಿ, ಸರ್ಕಾರಿ ವೈದ್ಯಕೀಯ ಕಾಲೇಜಿನ ಕೊನೆಯ ಹಂತದ ಸ್ಲಾಬ್ ಹಾಕುವ ವೇಳೆಯಲ್ಲಿ ಕುಸಿತದಿಂದ 9 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ದೇವರ ದಯೆಯಿಂದ ಅವರೆಲ್ಲಾ ಪ್ರಾಣಾಪಯದಿಂದ ಪಾರಾಗಿದ್ದಾರೆ. ಗಾಯಗೊಂಡವರನ್ನು ತುರ್ತಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಒದಗಿಸಲಾಗಿದೆ ಎಂದರು.

ಸುಧ್ಧಿಗಾರರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, ಘಟನೆ ಹೇಗೆ ಆಗಿದೆ ಎಂಬುದರ ಕುರಿತು ಎಂಜಿನಿಯರ್‌ಗಳು ತಾಂತ್ರಿಕವಾಗಿ ಪರಿಶೀಲನೆ ಮಾಡಿ ಹೇಳಬೇಕಾಗುತ್ತದೆ 20*30 ಮೀಟರ್ ಲೆಕ್ಚರ್ ಹಾಲ್ ಸ್ಟೀಲ್‌ಫ್ರೇಂ ಹಾಕಿ ಸ್ಲಾಬ್ ಹಾಕಿದ್ದಾರೆ. ಕಾಂಕ್ರೇಟ್ ಹಾಕುವ ವೇಳೆ ಭಾರಕ್ಕೆ ಕುಸಿತವಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಕುರಿತು ಪರಿಶೀಲನೆ ಮಾಡಲು ಆರೋಗ್ಯ ಇಲಾಖೆಯ ಎಂಜಿನಿಯರಿಂಗ್ ಶಾಖೆಯ ಅಧಿಕಾರಿಗಳು ಮತ್ತು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳಿಗೆ ಸೂಚನೆ ನೀಡಲಾಗಿದೆ. ತಾಂತ್ರಿಕವಾಗಿ ಸಣ್ಣಪುಟ್ಟ ದೋಷ ಇರಬಹುದು. ಆ ದೋಷವನ್ನು ಪರಿಶೀಲಿಸಿ ಸರಿಪಡಿಸಲು ನಿರ್ದೇಶನ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸರ್ಕಾರಿ ವೈದ್ಯಕೀಯ ಕಾಲೇಜಿನ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ರಾತ್ರಿ ವೇಳೆಯಲ್ಲಿ ಕಾಮಗಾರಿಯನ್ನು ನಡೆಸಲಾಗುತ್ತಿದೆ. ಅದಕ್ಕೆ ಕಾನೂನಿನಲ್ಲಿಯೂ ಅವಕಾಶ ಇದೆ. ನಾನು ಕೂಡ ಪದೇ ಪದೇ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ್ದೇನೆ. ಅಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಾಮಗಾರಿ ನಡೆಸಲಾಗುತ್ತಿದೆ. ಆ ಸ್ಥಳದಲ್ಲಿ ಸಾಕಷ್ಟು ಬೆಳಕಿದ್ದು, ಕಾರ್ಮಿಕರು ಹೆಲ್ಮೇಟ್ ಹಾಕಿಕೊಂಡು ಕೆಲಸ ಮಾಡುತ್ತಿದ್ದಾರೆ. ಈ ಘಟನೆ ನಡೆದಿರುವುದು ದುರಾದೃಷ್ಠಕರ, ಹೀಗಾಗಬಾರದಿತ್ತು ಎಂದ ಅವರು ತಾಂತ್ರಿಕವಾಗಿ ವರದಿ ಬರಲಿ ಆನಂತರ ನೋಡೋಣ ಎಂದರು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.