ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಲಿ: ಸಿದ್ದರಾಮಯ್ಯ

Team Udayavani, Dec 28, 2022, 8:51 PM IST

ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಲಿ: ಸಿದ್ದರಾಮಯ್ಯ

ಸುವರ್ಣ ವಿಧಾನಸೌಧ: ಅತಿವೃಷ್ಟಿ, ಅನಾವೃಷ್ಟಿ, ಹವಾಮಾನ ವೈಪರಿತ್ಯ, ಬೆಲೆ ಕುಸಿತ ಮತ್ತಿತರ ಕಾರಣದಿಂದ ರೈತಾಪಿ ವರ್ಗ ತೀವ್ರ ಸಂಕಷ್ಟ ಎದುರಿಸುತ್ತಿದೆ. ಸರ್ಕಾರ ಕೂಡಲೇ ಅವರ ನೆರವಿಗೆ ಧಾವಿಸಬೇಕು. ಢೋಂಗಿತನ, ರೈತ ವಿರೋಧಿ ನೀತಿ ಬಿಟ್ಟು ರೈತ ಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ರಾಜ್ಯಾದ್ಯಂತ ಅತಿವೃಷ್ಟಿ, ಅನಾವೃಷ್ಟಿ, ಹವಾಮಾನ ವೈಪರಿತ್ಯದಿಂದ, ಕಳಪೆ ಬೀಜ, ಗೊಬ್ಬರ, ನಿಷೇಧಿತ ಕೀಟ ನಾಶಕಗಳ ಮಾರಾಟ, ಮಾರುಕಟ್ಟೆಯಲ್ಲಿ ದರಗಳ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ನಿಯಮ 69ರಡಿ ವಿಷಯ ಪ್ರಸ್ತಾಪಿಸಿ ಮಾತನಾಡಿದರು.

ರೈತ ತಾನು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಸಿಗದೆ ಕಂಗಾಲಾಗಿದ್ದಾನೆ. ಬದುಕು ದುಸ್ತರವಾಗಿದೆ. ರೈತರ ಆದಾಯ ದ್ವಿಗುಣ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಆದರೆ, ಅದು ಆಗಿಲ್ಲ. ಬದಲಿಗೆ ರೈತರ ಆದಾಯ ವೇಗವಾಗಿ ಕುಸಿಯುತ್ತಿದೆ ಎಂದರು.

ರಾಜ್ಯದಲ್ಲಿ 15 ಲಕ್ಷ ಹೆಕ್ಟೇರ್‌ನಲ್ಲಿ ಕಬ್ಬು ಬೆಳೆಯಲಾಗುತ್ತದೆ. 25 ಲಕ್ಷ ರೈತರು ಇದರ ಮೇಲೆ ಅಲಂಬಿತರಾಗಿದ್ದಾರೆ. ವರ್ಷಕ್ಕೆ 6.5 ಕೋಟಿ ಟನ್‌ ಕಬ್ಬು ಉತ್ಪಾದನೆ ಆಗುತ್ತದೆ. ಟನ್‌ಗೆ 2,700ರಿಂದ 3,050 ರೂ. ಈಗ ನೀಡಲಾಗುತ್ತಿದೆ. ಇದರಿಂದ 1 ಎಕರೆಗೆ ರೈತ 12 ಸಾವಿರ ರೂ. ಕಳೆದುಕೊಳ್ಳುತ್ತಿದ್ದಾನೆ. ಪ್ರತಿ ಟನ್‌ಗೆ 3,500 ರೂ. ಕೊಡಬೇಕು, ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಅವರೊಂದಿಗೆ ಚರ್ಚಿಸಿ ಪರಿಹಾರ ದೊರಕಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ 5.7 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಆಡಕೆ ಬೆಳೆಯಲಾಗುತ್ತದೆ. 10-11 ಲಕ್ಷ ಟನ್‌ ಉತ್ಪಾದನೆ ಆಗುತ್ತದೆ. 10 ಲಕ್ಷ ರೈತರು ಅವಲಂಬಿತರಾಗಿದ್ದಾರೆ. ಭೂತಾನ್‌, ಬರ್ಮಾ, ವಿಯೇಟ್ನಾಂ, ಶ್ರೀಲಂಕಾದಿಂದ ಅಡಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಅದರಲ್ಲೂ ಬರ್ಮಾದಿಂದ ಕದ್ದು ಅಡಕೆ ಬರುತ್ತಿದೆ. ಇದನ್ನು ತಡೆಯಬೇಕು. ಅಡಕೆ ಬೆಳೆಗಾರರಿಗೆ ನನ್ನ ಅವಧಿಯಲ್ಲಿ 80 ಕೋಟಿ ರೂ. ಪರಿಹಾರ ನೀಡಿದ್ದೆ. ಇವತ್ತು ಕ್ವಿಂಟಾಲ್‌ಗೆ 15 ಸಾವಿರ ಕೋಟಿ ರೂ. ಆಗಿದೆ. ಒಟ್ಟು 15 ಸಾವಿರ ಕೋಟಿ ರೂ. ನಷ್ಟ ಆಗುತ್ತದೆ. ಆದ್ದರಿಂದ ತಕ್ಷಣ ಪರಿಹಾರ ನೀಡಬೇಕು. ರೋಗಕ್ಕೆ ಔಷಧಿ ಕಂಡು ಹಿಡಿಯಬೇಕು. ವಿದೇಶದಿಂದ ಆಡಕೆ ಬರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಚರ್ಮಗಂಟು ರೋಗದಿಂದ ನಿತ್ಯ 6.66 ಕೋಟಿ ರೂ. ನಷ್ಟ
ಸುವರ್ಣ ವಿಧಾನಸೌಧ:
ಚರ್ಮ ಗಂಟು ರೋಗದಿಂದ ಪ್ರತಿ ದಿನ 2 ಲಕ್ಷ ಲೀಟರ್‌ ಹಾಲು ಉತ್ಪಾದನೆ ಕಡಿಮೆ ಆಗುತ್ತಿದೆ. ಇದರಿಂದ ದಿನಕ್ಕೆ ಅಂದಾಜು 6.66 ಕೋಟಿ ರೂ. ನಷ್ಟ ಆಗುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭೆಯಲ್ಲಿ ರೈತರ ಸಮಸ್ಯೆಗಳ ಕುರಿತ ಚರ್ಚೆಯಲ್ಲಿ ಮಾತನಾಡಿ, ರಾಜ್ಯದಲ್ಲಿ 25 ಲಕ್ಷ ಮಂದಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ಜೂನ್‌-ಜುಲೈ ತಿಂಗಳಲ್ಲಿ ದಿನಕ್ಕೆ 94 ಲಕ್ಷ ಲೀಟರ್‌ ಹಾಲು ಉತ್ಪಾದನೆ ಆಗುತ್ತಿತ್ತು. ಈಗ 76 ಲಕ್ಷ ಲೀಟರ್‌ ಆಗಿದೆ. ಅದರಂತೆ 18 ಲಕ್ಷ ಲೀಟರ್‌ ಹಾಲಿನ ಉತ್ಪಾದನೆ ಕಡಿಮೆ ಆಗಿದೆ. ಚರ್ಮಗಂಟು ರೋಗದಿಂದ 25 ಸಾವಿರ ರಾಸುಗಳ ಸಾವನ್ನಪ್ಪಿವೆ. ಚರ್ಮಗಂಟು ರೋಗದ ಪರಿಣಾಮ ಪ್ರತಿ ದಿನ 2 ಲಕ್ಷ ಲೀಟರ್‌ ಕಡಿಮೆ ಆಗುತ್ತಿದೆ. ಇದರಿಂದ ರೈತರಿಗೆ 6.66 ಕೋಟಿ ನಷ್ಟ ಆಗುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.