ಯೋ-ಯೋ ಟೆಸ್ಟ್‌  ಜತೆಗೆ “ಡೆಕ್ಸಾ’ ಕಡ್ಡಾಯ: ವರ್ಷಾರಂಭದ ಸಭೆ ನಡೆಸಿದ ಬಿಸಿಸಿಐ

ಫಿಟ್‌ನೆಸ್‌ಗೆ ಆದ್ಯತೆ ; 20 ಆಟಗಾರರ ಯಾದಿಯಿಂದ ವಿಶ್ವಕಪ್‌ಗೆ ಆಯ್ಕೆ

Team Udayavani, Jan 2, 2023, 8:15 AM IST

ಯೋ-ಯೋ ಟೆಸ್ಟ್‌  ಜತೆಗೆ “ಡೆಕ್ಸಾ’ ಕಡ್ಡಾಯ: ವರ್ಷಾರಂಭದ ಸಭೆ ನಡೆಸಿದ ಬಿಸಿಸಿಐ

ಮುಂಬಯಿ: ಹೊಸ ವರ್ಷದ ಮೊದಲ ದಿನದಂದು ನಡೆದ ಬಿಸಿಸಿಐ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಆಟಗಾರರ ಆಯ್ಕೆಗೆ ಮಾನದಂಡವಾಗಿರುವ ಯೋ-ಯೋ ಟೆಸ್ಟ್‌ ವಿಧಾನವನ್ನು ಮರಳಿ ಆಯೋಜಿಸು ವುದು, ಇದರೊಂದಿಗೆ “ಡೆಕ್ಸಾ’ವನ್ನೂ (ಮೂಳೆಗಳ ಸಾಂದ್ರತೆಯನ್ನು ಅಳೆಯುವ ವಿಶೇಷ ರೀತಿಯ ಎಕ್ಸ್‌-ರೇ, ಡ್ಯುಯೆಲ್‌ ಎನರ್ಜಿ ಎಕ್ಸ್‌-ರೇ ಎಬಾಪ್ಟಿಮೆಟ್ರಿ) ಕಡ್ಡಾಯಗೊಳಿಸಲಾಯಿತು.

2022ರಲ್ಲಿ ಭಾರತೀಯ ಕ್ರಿಕೆಟ್‌ ನಿರ್ವಹಣೆ ಹೇಳಿಕೊಳ್ಳುವಂಥ ಮಟ್ಟದಲ್ಲಿ ಇರದಿದ್ದುದ ರಿಂದ ಹಾಗೂ ಈ ವರ್ಷ ಭಾರತದ ಆತಿಥ್ಯದಲ್ಲೇ ಏಕದಿನ ವಿಶ್ವಕಪ್‌ ಪಂದ್ಯಾವಳಿ ನಡೆಯುವುದರಿಂದ ಈ ಸಭೆ ಹೆಚ್ಚಿನ ಮಹತ್ವ ಪಡೆದಿತ್ತು. ಆಟಗಾರರ ಲಭ್ಯತೆ ಹಾಗೂ ಅವರ ಫಿಟ್‌ನೆಸ್‌ ಕಾಯ್ದುಕೊಳ್ಳುವ ವಿಚಾರದ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚಿಸಲಾಯಿತು.

ಬಿಸಿಸಿಐ ಅಚ್ಯಕ್ಷ ರೋಜರ್‌ ಬಿನ್ನಿ, ಕಾರ್ಯದರ್ಶಿ ಜಯ್‌ ಶಾ, ನಾಯಕ ರೋಹಿತ್‌ ಶರ್ಮ, ಕೋಚ್‌ ರಾಹುಲ್‌ ದ್ರಾವಿಡ್‌, ಎನ್‌ಸಿಎ ಮುಖ್ಯಸ್ಥ ವಿವಿಎಸ್‌ ಲಕ್ಷ್ಮಣ್‌, ಆಯ್ಕೆ ಮಂಡಳಿ ಅಧ್ಯಕ್ಷ ಚೇತನ್‌ ಶರ್ಮ ಸಭೆಯಲ್ಲಿ ಹಾಜರಿದ್ದರು. ಇವರೆಲ್ಲ ಸೇರಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡರು.

ಫಿಟ್‌ನೆಸ್‌ ಬಹಳ ಮುಖ್ಯ
ಏಕದಿನ ವಿಶ್ವಕಪ್‌ಗಾಗಿ 20 ಕ್ರಿಕೆಟಿಗರನ್ನು ಆರಿಸಿ (ಶಾರ್ಟ್‌ ಲಿಸ್ಟ್‌), ಈ ವರ್ಷ ಆಡಲಾಗುವ ಸುಮಾರು 35 ಏಕದಿನ ಪಂದ್ಯಗಳಿಗೆ ಈ 20 ಕ್ರಿಕೆಟಿಗರನ್ನೇ ಆವರ್ತನ ಪದ್ಧತಿಯಂತೆ ಆಡಿಸುವುದು ಬಿಸಿಸಿಐ ಯೋಜನೆ. ಮೂರೂ ಮಾದರಿಗಳಲ್ಲಿ ಆಡಲಾಗುವ ಆಟಗಾರರ ಫಿಟ್‌ನೆಸ್‌ಗೆ ಹೆಚ್ಚಿನ ಗಮನ ಕೊಡಲು ಯೋಜನೆಗಳನ್ನು ರೂಪಿಸಲಾಯಿತು. ಆರಂಭದಲ್ಲೇ ಯೋ-ಯೋ ಮತ್ತು ಡೆಕ್ಸಾ ಟೆಸ್ಟ್‌ನಲ್ಲಿ ತೇರ್ಗಡೆಯಾದರೆ ನಡುವಲ್ಲಿ ಫಿಟ್‌ನೆಸ್‌ ಸಮಸ್ಯೆ ಎದುರಾಗದೆಂಬುದು ಮಂಡಳಿ ನಂಬಿಕೆ. ಹೀಗಾಗಿ ಆಟಗಾರರ ದೈಹಿಕ ಕ್ಷಮತೆಯ ಮೇಲ್ವಿಚಾರಣೆಗಾಗಿ ಐಪಿಎಲ್‌ ಫ್ರಾಂಚೈಸಿಗಳೊಂದಿಗೆ ಕೆಲಸ ಮಾಡುವಂತೆ ವಿವಿಎಸ್‌ ಲಕ್ಷ್ಮಣ್‌ ನೇತೃತ್ವದ ಎನ್‌ಸಿಎಗೆ ಬಿಸಿಸಿಐ ಸೂಚಿಸಿತು.

ಜಸ್‌ಪ್ರೀತ್‌ ಬುಮ್ರಾ, ದೀಪಕ್‌ ಚಹರ್‌, ರವೀಂದ್ರ ಜಡೇಜ ಮೊದಲಾದ ಕ್ರಿಕೆಟಿಗರು ಫಿಟ್‌ನೆಸ್‌ ಸಮಸ್ಯೆಯಿಂದಾಗಿ ಕಳೆದ ಅನೇಕ ತಿಂಗಳಿಂದ ಟೀಮ್‌ ಇಂಡಿಯಾದಿಂದ ಬೇರ್ಪಟ್ಟಿ ರುವುದನ್ನು ಇಲ್ಲಿ ಉಲ್ಲೇಖಿಸಬಹುದು. ಮುಂದೆ ಕ್ರಿಕೆಟಿಗರಿಗೆ ಇಂಥ ಸಮಸ್ಯೆ ಕಾಡದಂತೆ ನೋಡಿಕೊಳ್ಳಬೇಕಾದ ಮಹತ್ವದ ಹೊಣೆಗಾರಿಕೆ ಕುರಿತು ಚರ್ಚಿಸಲಾಯಿತು.

ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಲು ದೇಶಿ ಕ್ರಿಕೆಟ್‌ಗಳಲ್ಲಿ ಆಡಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುವುದು ಮುಖ್ಯ. ಕೇವಲ ಐಪಿಎಲ್‌ ಮಾತ್ರವೇ ಮಾನದಂಡವಲ್ಲ ಎಂಬುದನ್ನು ಸೂಚ್ಯವಾಗಿ ಹೇಳಲಾಯಿತು.

ಯೋ-ಯೋ ಗೊತ್ತು, ಡೆಕ್ಸಾ ಅಂದರೇನು?
ಕ್ರಿಕೆಟಿಗರ ಯೋ-ಯೋ ಟೆಸ್ಟ್‌ ಬಗ್ಗೆ ಈಗಾಗಲೇ ಅಲ್ಪಸ್ವಲ್ಪ ತಿಳಿದಿದೆ. ಇದು 23 ಹಂತಗಳ ಪರೀಕ್ಷೆ, ಕ್ರಿಕೆಟಿಗರಿಗೆ 5ನೇ ಹಂತದಿಂದ ಆರಂಭ, ಕ್ರಿಕೆಟಿಗ 20 ಪ್ಲಸ್‌ 20 ಮೀ. ದೂರವನ್ನು ನಿಗದಿತ ಅವಧಿಯಲ್ಲಿ ಪೂರೈಸುವುದು. ಹಂತಗಳ ಸಂಖ್ಯೆ ಹೆಚ್ಚಿದಂತೆ ದೂರವನ್ನು ಕ್ರಮಿಸುವ ಸಮಯ ಕಡಿಮೆಯಾಗುತ್ತದೆ. ಇಲ್ಲಿ ತೇರ್ಗಡೆಯಾಗಲು ಕನಿಷ್ಠ 16.1 ಅಂಕ ಅಗತ್ಯ. ಇದು ಯೋ-ಯೋ.

ಡೆಕ್ಸಾ ಅಂದರೆ ಮೂಳೆಗಳ ಸಾಂದ್ರತೆ ಯನ್ನು ಪತ್ತೆಹಚ್ಚುವ ವಿಧಾನ. ಆಟಗಾರರ ದೈಹಿಕ ಕ್ಷಮತೆಯನ್ನು ವೈಜ್ಞಾನಿಕವಾಗಿ, ಹೆಚ್ಚು ನಿಖರವಾಗಿ ಗುರುತಿಸಲು ಇದರಿಂದ ಸಾಧ್ಯ. ಇಲ್ಲಿ ನಡೆಸಲಾಗುವ ಎಕ್ಸ್‌-ರೇ ಪರೀಕ್ಷೆ ವೇಳೆ ಆಟಗಾರರ ಮೂಳೆಯ ಸಾಮರ್ಥ್ಯದ ಸ್ಪಷ್ಟ ಚಿತ್ರಣ ಲಭಿಸುತ್ತದೆ. ಮೂಳೆಯ ಸಾಮರ್ಥ್ಯ ಎಷ್ಟಿದೆ, ಗಟ್ಟಿಯಾಗಿದೆಯೇ ಅಥವಾ ಬಹಳ ಬೇಗ ಮುರಿಯಬಹುದೇ ಎಂಬುದರ ಜತೆಗೆ ದೇಹದಲ್ಲಿನ ಕೊಬ್ಬಿನ ಅಂಶವನ್ನೂ ಪತ್ತೆಹಚ್ಚಬಹುದು. ಇದು ಕೇವಲ 10 ನಿಮಿಷಗಳ ಪರೀಕ್ಷೆ.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.