ಸುಬ್ರಹ್ಮಣ್ಯ: ಹಲ್ಲೆ ಪ್ರಕರಣ; ಇಬ್ಬರ ಬಂಧನ
Team Udayavani, Jan 9, 2023, 12:16 AM IST
ಸುಬ್ರಹ್ಮಣ್ಯ : ಜಾಲತಾಣದಲ್ಲಿ ಪರಿಚಯವಾದ ಸುಬ್ರಹ್ಮಣ್ಯದ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಭೇಟಿಯಾಗಲು ಬಂದ ಕಲ್ಲುಗುಂಡಿಯ ಹಫೀದ್ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಬಂಧಿತರು. ಜ. 5ರಂದು ಘಟನೆ ನಡೆದಿತ್ತು.
10-12 ಜನ ಅಪರಿಚಿತರ ತಂಡವು ತನ್ನನ್ನು ಕುಮಾರಧಾರಾ ಬಳಿಯ ಕಟ್ಟಡದಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿತ್ತು ಎಂದು ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದ ಹಫೀದ್ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದ. ಇದೇ ಘಟನೆಗೆ ಸಂಬಂಧಿಸಿ ವಿದ್ಯಾರ್ಥಿನಿಯ ತಂದೆಯು ಹಫೀದ್ ವಿರುದ್ಧ ಪುತ್ರಿಯ ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ ಬಗ್ಗೆ ದೂರು ನೀಡಿದ್ದರು. ಹಫೀದ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಪೊಲೀಸರು ಅಮಾಯಕರ ಮೇಲೆ ಕೇಸು ಹಾಕುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಶನಿವಾರ ಸುಬ್ರಹ್ಮಣ್ಯ ಠಾಣೆಯ ಮುಂಭಾಗ ಪ್ರತಿಭಟನೆಗೆ ಕರೆ ನೀಡಿದ್ದವು. ಆದರೆ ಸಂಜೆವರೆಗೂ ಪ್ರತಿಭಟನೆ ನಡೆದಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ