ಮಡಿಕೇರಿ: ದೇವಸ್ಥಾನಗಳ ಘಂಟೆಗಳೇ ಇವರ ಟಾರ್ಗೆಟ್! ಸೊತ್ತು ಸಹಿತ ನಾಲ್ವರ ಸೆರೆ

Team Udayavani, Jan 11, 2023, 6:30 AM IST

gante1

ಮಡಿಕೇರಿ: ಕೊಡಗು ಹಾಗೂ ನೆರೆಯ ಜಿಲ್ಲೆಗಳ ದೇವಾಲಯಗಳಲ್ಲಿನ ಘಂಟೆಗಳನ್ನು ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಕಳ್ಳರನ್ನು ಕೊಡಗು ಜಿಲ್ಲಾ ಪೊಲೀಸ್‌ ವಿಶೇಷ ತಂಡ ಬಂಧಿಸಿದೆ.

ಮೈಸೂರಿನ ಆರ್‌.ಎಸ್‌. ನಾಯ್ಡು ನಗರದ ಅಮ್ಜದ್‌ ಆಹಮ್ಮದ್‌ (37), ಅಜ್ಜು ಲೇಜೌಟ್‌ನ ಸಮಿವುಲ್ಲಾ (22), ಹೈದರ್‌ (36) ಹಾಗೂ ಕೆಸರೆ ನಗರದ ಜುಲ್ಪಿಕರ್‌ (36) ಬಂಧಿತರು.

ಕಳವು ಮಾಡಿದ ಸುಮಾರು 750 ಕೆ.ಜಿ. ತೂಕದ ವಿವಿಧ ಮಾದರಿಯ ಲೋಹದ ಘಂಟೆಗಳು ಹಾಗೂ ಕಾರು ಸೇರಿದಂತೆ ಒಟ್ಟು 10 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ ತಿಳಿಸಿದ್ದಾರೆ.

ಗೋಣಿಕೊಪ್ಪ ಪೊಲೀಸ್‌ ಠಾಣೆ ವ್ಯಾಪ್ತಿಯ ಮಾಯಮುಡಿ ಕಮಟೆ ಶ್ರೀ ಮಹದೇವ ದೇವಸ್ಥಾನ, ಪೊನ್ನಂಪೇಟೆ ಠಾಣೆ ವ್ಯಾಪ್ತಿಯ ನಿಟ್ಟೂರು ಕಾರ್ಮಾಡಿನ ಶ್ರೀ ಕಾಲಭೈರವೇಶ್ವರ ದೇವಸ್ಥಾನ, ಬಿಳೂರಿನ ಕಲ್ಲುಗುಡಿ ಶ್ರೀ ಈಶ್ವರ ದೇವಸ್ಥಾನ, ಬೆಸಗೂರಿನ ಶ್ರೀ ಮಹಾದೇವ ದೇವಸ್ಥಾನ ಮತ್ತು ಶ್ರೀ ದುರ್ಗಿ ದೇವಸ್ಥಾನ ಹಾಗೂ ಹಳ್ಳಿಗಟ್ಟಿನ ಭದ್ರಕಾಳಿ ದೇವಸ್ಥಾನ, ವೀರಾಜಪೇಟೆ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕರಡ ಮಲೆತಿರಿಕೆ ಈಶ್ವರ ದೇವಸ್ಥಾನ, ಕೆದಮಳ್ಳೂರಿನ ಶ್ರೀ ಮಹದೇವ ದೇವಸ್ಥಾನ, ನಾಪೋಕ್ಲು ಠಾಣೆ ವ್ಯಾಪ್ತಿಯ ಮಕ್ಕಿ ಶಾಸ್ತಾವು ದೇವಸ್ಥಾನಗಳಿಂದ

2022ನೇ ಸಾಲಿನ ಫೆಬ್ರವರಿಯಿಂದ ಅಕ್ಟೋಬರ್‌ ವರೆಗೆ ಸುಮಾರು 800 ಕೆ.ಜಿ. ತೂಕದ ಘಂಟೆಗಳು ಕಳ್ಳತನವಾದ ಬಗ್ಗೆ ಗೋಣಿಕೊಪ್ಪ ಪೊನ್ನಂಪೇಟೆ, ವೀರಾಜಪೇಟೆ ಗ್ರಾಮಾಂತರ ಹಾಗೂ ನಾಪೋಕ್ಲು ಠಾಣೆಗಳಲ್ಲಿ ಪ್ರತ್ಯೇಕವಾಗಿ ಒಟ್ಟು 18 ಪ್ರಕರಣಗಳು ದಾಖಲಾಗಿದ್ದವು.

ಪೊಲೀಸ್‌ ಅಧೀಕ್ಷಕ ಕ್ಯಾಪ್ಟನ್‌ ಎಂ.ಎ. ಅಯ್ಯಪ್ಪ, ವೀರಾಜಪೇಟೆ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕ ನಿರಂಜನ್‌ ರಾಜೇ ಆರಸ್‌ ಅವರ ಮಾರ್ಗದರ್ಶನದಲ್ಲಿ ವಿವಿಧ ವೃತ್ತಗಳ ಪ್ರಮುಖ ಪೊಲೀಸ್‌ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

3 ತಿಂಗಳ ಸತತ ಕಾರ್ಯಾಚರಣೆ
ಕಳವು ನಡೆದ ದೇವಸ್ಥಾನಗಳಿಂದ ಸಂಗ್ರಹಿಸಿದ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿಗಳು ಮೈಸೂರಿನವರೆಂದು ಪೊಲೀಸರಿಗೆ ದೃಢಪಟ್ಟಿತ್ತು. ಅದರಂತೆ ಪೊಲೀಸರ ತಂಡವು ಮೂರು ತಿಂಗಳ ಕಾಲ ಮೈಸೂರಿನಲ್ಲಿ ಠಿಕಾಣಿ ಹೂಡಿ ಆರೋಪಿಗಳ ಚಲನವಲನದ ಮೇಲೆ ಕಣ್ಣಿರಿಸಿ ಬಲೆಗೆ ಬೀಳಿಸಿದ್ದಾರೆ.

ಹೆಚ್ಚಾಗಿ ಹಳೆಯ ದೇವಸ್ಥಾನಗಳೇ ಕಳ್ಳರ ಗುರಿಯಾಗಿದ್ದವು. ಹಿಂದಿನ ಕಾಲದ ಘಂಟೆಗಳು ಹೆಚ್ಚು ಬೆಲೆಬಾಳುವವಾಗಿದ್ದು, ಅವುಗಳನ್ನು ಕರಗಿಸಿ ಮಾರಾಟ ಮಾಡುವ ಯೋಜನೆ ಅವರದಾಗಿತ್ತು. ಆದರೆ ಅದಕ್ಕೂ ಮುನ್ನ ಸೊತ್ತು ಸಹಿತ ಪೊಲೀಸರ ವಶವಾಗಿದ್ದಾರೆ.

ಟಾಪ್ ನ್ಯೂಸ್

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.