‘ಕೆಟಿಎಂ’ಗೆ ಸ್ಯಾಂಡಲ್ವುಡ್ ಮಂದಿ ಸಾಥ್
Team Udayavani, Jan 11, 2023, 4:06 PM IST
“ದಿಯಾ’ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ನಟನೆಯ “ಕೆಟಿಎಂ’ ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ಸ್ಯಾಂಡಲ್ವುಡ್ನ 50 ಜನ ಸೆಲೆಬ್ರೆಟಿಗಳು “ಕೆಟಿಎಂ’ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
“ಅಥರ್ವ’ ಸಿನಿಮಾ ಖ್ಯಾತಿಯ ಅರುಣ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಎರಡನೇ ಸಿನಿಮಾ “ಕೆಟಿಎಂ’. ಚಿತ್ರೀಕರಣ ಕೆಲಸ ಮುಗಿಸಿ ಪೋಸ್ಟ್ ಪೊ›ಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿದ್ದು, ಇತ್ತೀಚೆಗೆ ಟೀಸರ್ ಬಿಡುಗಡೆ ಮಾಡಿದೆ. ವಿಕ್ರಮ್ ರವಿಚಂದ್ರನ್, ಶೃತಿ ಹರಿಹರನ್, ವಿಜಯ ರಾಘವೇಂದ್ರ, ದೀಪಿಕಾ ದಾಸ್, ಅನುಪಮಾ ಗೌಡ, ನವೀನ್ ಶಂಕರ್, ಮೇಘಾ ಶೆಟ್ಟಿ, ಸಿದ್ದು ಮೂಲಿಮನಿ, ಖುಷಿ ರವಿ, ಇಶಾನ್, ಶೈನ್ ಶೆಟ್ಟಿ ಸೇರಿದಂತೆ 50 ಸೆಲೆಬ್ರೆಟಿಗಳು ಡಿಜಿಟಲ್ ವೇದಿಕೆಯಲ್ಲಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ.
ಪ್ರೇಮ್ ಕಹಾನಿ ಹೊತ್ತ “ಕೆಟಿಎಂ’ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ ನಾಯಕ ನಟನಾಗಿ ನಟಿಸಿದ್ದು, ನಾಲ್ಕು ಶೇಡ್ ನಲ್ಲಿ ತೆರೆ ಮೇಲೆ ಕಾಣಸಿಗಲಿದ್ದಾರೆ. ಕಾಜಲ್ ಕುಂದರ್ ಹಾಗೂ ಸಂಜನಾ ಡೋಸ್ ಚಿತ್ರದಲ್ಲಿ ನಾಯಕಿಯರಾಗಿ ತೆರೆ ಹಂಚಿಕೊಂಡಿದ್ದಾರೆ.
ಉಷಾ ಭಂಡಾರಿ, ಪ್ರಕಾಶ್ ತುಮಿನಾಡು, ರಘು ರಮಣಕೊಪ್ಪ, ಶಾನಿಲ್ ಗುರು, ಬಾಬು ಹಿರಿಯಣಯ್ಯ, ದೇವ್ ದೇವಯ್ಯ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂತೋಷ್ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಮಹಾಸಿಂಹ ಮೂವೀಸ್ ಬ್ಯಾನರ್ನಡಿ ವಿನಯ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು