ಗದಗ: ಅನ್ನ-ಜ್ಞಾನ ದಾಸೋಹ ನಾಡಲ್ಲಿ ಜಾತ್ರಾ ಮಹೋತ್ಸವ

ನಿರ್ವಿಘ್ನವಾಗಿ ನಡೆಯುವಂತೆ ಮಾಡಿ ನಾಡಿನೆಲ್ಲೆಡೆ ಹೆಸರಾದರು.

Team Udayavani, Jan 11, 2023, 6:29 PM IST

ಗದಗ: ಅನ್ನ-ಜ್ಞಾನ ದಾಸೋಹ ನಾಡಲ್ಲಿ ಜಾತ್ರಾ ಮಹೋತ್ಸವ

ಲಕ್ಷ್ಮೇಶ್ವರ: ಸಮೀಪದ ಹೂವಿನ ಶಿಗ್ಲಿಯಲ್ಲಿ ಜ. 13ರಿಂದ 15ರ ವರೆಗೆ ನಾಡಿನ ಹರಗುರು ಚರಮೂರ್ತಿಗಳ ಸಮ್ಮುಖದಲ್ಲಿ ಅನ್ನದಾಸೋಹ, ಜ್ಞಾನ ದಾಸೋಹದ ಜಾತ್ರಾ ಮಹೋತ್ಸವ ಮತ್ತು ಲಿಂ| ಶ್ರೀಗಳ ಪುಣ್ಯಸ್ಮರಣೋತ್ಸವ ಆಚರಿಸಲಾಗುತ್ತಿದೆ. “ಖಡಕ್‌ ರೊಟ್ಟಿ ಮತ್ತು ಕರಿಂಡಿ’ ಪ್ರಸಾದವೇ ಈ ಜಾತ್ರೆ ವೈಶಿಷ್ಟ್ಯವಾಗಿದೆ.

ಜಾತ್ರೆಗೆ ಹೂವಿನ ಶಿಗ್ಲಿ ಸೇರಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಶ್ರೀಮಠಕ್ಕೆ ರೊಟ್ಟಿ ಸೇರಿ ಇತರೆ ಆಹಾರ ಧಾನ್ಯಗಳನ್ನು ಸಮರ್ಪಿಸುತ್ತಾರೆ. ಹೂವಿನ ಶಿಗ್ಲಿಯ ವಿರಕ್ತಮಠದ 44ನೇ ಜಾತ್ರಾ ಮಹೋತ್ಸವ, ಲಿಂ| ನಿರಂಜನ ಸ್ವಾಮಿಗಳ 13ನೇ ಪುಣ್ಯ ಸ್ಮರಣೋತ್ಸವ ನಿಮಿತ್ತ ಪುರಾಣ ಪ್ರವಚನ, ಲಿಂಗದೀಕ್ಷೆ, ಸಾಮೂಹಿಕ ವಿವಾಹ, ತುಲಾಭಾರ ಸೇವೆ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

ಮಠದ ಇತಿಹಾಸ: ಲಿಂ| ನಿರಂಜನ ಸ್ವಾಮಿಗಳು ಬಸವನಾಡು ಬೀದರ ಜಿಲ್ಲೆ ಔರಾದ್‌ ತಾಲೂಕಿನ ಸೋನಾಳ ಗ್ರಾಮದಿಂದ 1996ರಲ್ಲಿ ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಆಗಮಿಸಿದ್ದರು. ಈ ವೇಳೆ ಅವರಿಗೆ ಸ್ವಪ್ನವೊಂದು ಬಿದ್ದು ಹೂವಿನ ಶಿಗ್ಲಿಯಲ್ಲಿನ ಪಾಳು ಬಿದ್ದಿರುವ ಮಠವನ್ನು ಉದ್ಧರಿಸು ಎಂಬ ವಾಣಿಯನ್ವಯ ಇಲ್ಲಿಗೆ ಆಗಮಿಸಿದ್ದರು. ಕಲ್ಲು ಮುಳ್ಳುಗಳಿಂದ ಕೂಡಿದ ಪೂಜೆ ಪುನಸ್ಕಾರಗಳಿಲ್ಲದ ಕೇವಲ ಎರಡಂಕಣದ ಶಿಥಿಲಾವಸ್ಥೆಯ ಗುಡಿಯಲ್ಲಿ ನೆಲೆನಿಂತ ಶ್ರೀಗಳು ತಮ್ಮ ಸಂಕಲ್ಪ ಶಕ್ತಿಯಿಂದ ಪಾಳುಬಿದ್ದ ಮಠವನ್ನು ಜೀರ್ಣೋದ್ದಾರಗೊಳಿಸಿದರು. ಈ ಕ್ಷೇತ್ರದಲ್ಲಿ ನಿತ್ಯ ಧರ್ಮ, ಸಂಸ್ಕೃತಿ, ಸಾಹಿತ್ಯ, ಶಿಕ್ಷಣ, ಪೂಜೆ, ಬಸವತತ್ವ ಪ್ರಚಾರ, ಯೋಗ, ಆಯುರ್ವೇದ ಶಾಸ್ತ್ರಗಳ ಮೂಲಕ ಕ್ಷೇತ್ರವನ್ನು ಬೆಳೆಸಿದರು. ಆಯುರ್ವೇದ ಔಷಧಿ ಸಿದ್ಧಪಡಿಸಿ ಮಾರಕ ರೋಗಗಳಿಗೆ ದಿವ್ಯ ಔಷಧಿ ನೀಡಿ ರೋಗಿಗಳ ಪಾಲಿಗೆ ಸಂಜೀವಿನಿಯಾಗಿದ್ದರು.

ತುಮಕೂರಿನ ಸಿದ್ಧಗಂಗಾಮಠದ ಶಿವಕುಮಾರ ಸ್ವಾಮಿಗಳ ನೆಚ್ಚಿನ ಶಿಷ್ಯರಾಗಿದ್ದ ಲಿಂ| ನಿರಂಜನ ಶ್ರೀಗಳು ಅವರಂತೆ ಗ್ರಾಮೀಣ ಪ್ರದೇಶಗಳ ಬಡ, ಅನಾಥ ಮಕ್ಕಳಿಗೆ ತ್ರಿವಿಧ ದಾಸೋಹ ಸೇವೆ ಮೂಲಕ ಗುರುಕುಲ ಶಿಕ್ಷಣ ಆರಂಭಿಸಿ ಬಡ ಮಕ್ಕಳ ಆಶಾಕಿರಣವೇ ಆಗಿದ್ದರು. ಹೂವಿನ ಶಿಗ್ಲಿ ಅಷ್ಟೇ ಅಲ್ಲದೆ ಹುಟ್ಟೂರು ಸೋನಾಳ, ಆಂಧ್ರದ ನಾಗನೂರ, ಶಿರಹಟ್ಟಿ ತಾಲೂಕಿನ ಕೊಂಚಿಗೇರಿ, ಹಾವೇರಿ ತಾಲೂಕಿನ ಸೋಮನಕಟ್ಟಿಯಲ್ಲಿ ಶಾಖಾಮಠ ಸ್ಥಾಪಿಸಿ ಎಲ್ಲೆಡೆ ಸಮಾಜಮುಖೀ ಕಾರ್ಯಗಳು ನಿರ್ವಿಘ್ನವಾಗಿ ನಡೆಯುವಂತೆ ಮಾಡಿ ನಾಡಿನೆಲ್ಲೆಡೆ ಹೆಸರಾದರು. ಪ್ರತಿವರ್ಷ ಮಕರ ಸಂಕ್ರಮಣ ಕಾಲದಲ್ಲಿ ನಾಡಿನ ಹರಗುರುಚರ ಮೂರ್ತಿಗಳ ಸಮ್ಮುಖದಲ್ಲಿ ಕ್ಷೇತ್ರದಲ್ಲಿ ಜಾತ್ರಾಮಹೋತ್ಸವ ನಿಮಿತ್ತ ವಿವಿಧ ಸಾಮಾಜಿಕ, ಧಾರ್ಮಿಕ, ಸಾಂಪ್ರದಾಯಿಕ ಹಬ್ಬಗಳನ್ನು ಆಚರಿಸುತ್ತಿದ್ದರು.

ನಿರಂಜನ ಸ್ವಾಮಿಗಳು 2011ರಲ್ಲಿ ಲಿಂಗೈಕ್ಯರಾದ ಬಳಿಕ ಶ್ರೀಮಠದ ಸಂಪೂರ್ಣ ಜವಾಬ್ದಾರಿ ಹೊತ್ತ ಹಾವೇರಿ ತಾಲೂಕಿನ ಮರೋಳ ಗ್ರಾಮದ ಚನ್ನವೀರ ಶ್ರೀಗಳು ಶ್ರೀಮಠ ಮತ್ತು ಗುರುಕುಲವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಈಗ ಗುರುಕುಲದಲ್ಲಿ ಬಡ, ಅನಾಥರು ಸೇರಿ 400ಕ್ಕೂ ಹೆಚ್ಚು ಮಕ್ಕಳು ಓದುತ್ತಿದ್ದು, ಅವರಿಗೆ ಶಿಕ್ಷಣದ ಜತೆಗೆ ಧರ್ಮ, ಸಂಸ್ಕೃತಿ, ಸಂಸ್ಕಾರ ಮತ್ತು ವೇದಾಧ್ಯಯನ ನೀಡಿ ಲಿಂ| ಶ್ರೀಗಳ ಮಾರ್ಗದಲ್ಲಿ
ಮಠವನ್ನು ವಿಶಿಷ್ಟ ಜಾಗೃತ ಕೇಂದ್ರವನ್ನಾಗಿಸುವತ್ತ ಸಾಗಿದ್ದಾರೆ. ಅವರು ತಮ್ಮ ಪ್ರವಚನದ ಮೂಲಕ ನಾಡಿನಾದ್ಯಂತ ಭಕ್ತ ಸಂಕುಲದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಿತ್ಯ ನೂರಾರು ವಿದ್ಯಾರ್ಥಿಗಳಿಗೆ ಅನ್ನದಾಸೋಹದ ಜತೆ ಶಿಕ್ಷಣ ದಾಸೋಹ ಸಾಂಗವಾಗಿ ಸಾಗುವಲ್ಲಿ ಶ್ರೀಗಳ ಆಣತಿಯಂತೆ ನಡೆದು ಸಹಾಯ-ಸಹಕಾರ ನೀಡುತ್ತಾ ಬಂದಿರುವ ಗ್ರಾಮಸ್ಥರ ಮತ್ತು ಭಕ್ತರ ಸೇವಾ ಕಾರ್ಯವೂ ಅಷ್ಟೇ ಪ್ರಸಂಶನೀಯಯವಾಗಿದೆ.

*ಮುಕ್ತಾ ಆದಿ

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.