ಭ್ರಷ್ಟಾಚಾರ ನಿಯಂತ್ರಿಸಿದ್ರೆ ಆರ್ಥಿಕ ಸುಧಾರಣೆ ಸಾಧ್ಯ

Team Udayavani, Jan 16, 2023, 4:42 PM IST

tdy-19

ಮುಳಬಾಗಿಲು: ಭ್ರಷ್ಟಾಚಾರ ನಿಯಂತ್ರಿಸಿದರೆ ಮಾತ್ರ ದೇಶದ ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳಲಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಎನ್‌. ಸಂತೋಷ್‌ ಹೆಗ್ಡೆ ಹೇಳಿದರು.

ನಗರದ ಅಮರಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಏರ್ಪ ಡಿಸಿದ್ದ ಸಂಕ್ರಾಂತಿ ನೃತ್ಯ ಸಿರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಸಕ್ತ ಸನ್ನಿವೇಶದಲ್ಲಿ ದೇಶದಲ್ಲಿ ಭ್ರಷ್ಟಾ ಚಾರ ತಾಂಡವವಾಡುತ್ತಿದೆ. ಅದನ್ನು ನಿಯಂತ್ರಿಸಿದರೆ ಮಾತ್ರ ದೇಶದ ಆರ್ಥಿಕ ಸ್ಥಿತಿ ಉತ್ತಮಗೊಳ್ಳಲಿದೆ. ಆದರೆ, ನಿರುದ್ಯೋಗ ಹೆಚ್ಚಾಗಿದ್ದು, ಇಂದಿನ ಭ್ರಷ್ಟಾಚಾರ ಮತ್ತು ಅಪ್ರಾಮಾಣಿಕತೆಯಿಂದ ಉತ್ತಮ ವಿದ್ಯೆ ನೀಡುವುದು ಕಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮೌಲ್ಯಯುತ ಸಮಾಜ ನಿರ್ಮಿಸಿ: ಇಂತಹ ಸನ್ನಿವೇಶ ದಲ್ಲಿ ವೃತ್ತಿ ತರಬೇತಿಗೆ ಇಂತಹ ಕಾಲೇಜುಗಳು ಅಗತ್ಯವಾಗಿದೆ. ಉತ್ತಮ ಶಿಕ್ಷಣ ಪಡೆದ ವಿದ್ಯಾ ರ್ಥಿಗಳು ದುರಾಸೆ ಮತ್ತು ಅಪ್ರಾಮಾಣಿಕತೆಯ ಸಮಾಜವನ್ನು ಬದಲಿಸಲು ಗಟ್ಟಿಯಾಗಿ ನಿಲ್ಲುವ ಮೂಲಕ ಮೌಲ್ಯಯುತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಹಿಂದೆ ಜನರು ಪ್ರಾಮಾಣಿಕರಾಗಿದ್ದರು: ದೇಶ ದುರಾಸೆಯ ಹಿಂದೆ ಓಡುತ್ತಿದೆ, ಶಿಕ್ಷಕರು ಶಾಲಾ ಹಂತದಲ್ಲಿ ಮಕ್ಕಳಿಗೆ ನೈತಿಕ ಮೌಲ್ಯ, ಶಾಂತಿ ಸೌಹಾರ್ದ ಮತ್ತು ನೆಮ್ಮದಿ ಜೀವನ ರೂಢಿಸಿ ಕೊಳ್ಳುವುದನ್ನು ಕಲಿಯಬೇಕು, ಹಿಂದೆ ಜನರು ಪ್ರಾಮಾಣಿಕರಾಗಿದ್ದರು. ಮತ್ತೂಬ್ಬ ಪ್ರಾಮಾಣಿಕ ರನ್ನು ಗುರುತಿಸಿ ಅಭಿನಂದಿಸುತ್ತಿದ್ದರು. ಆದರೆ, ಪ್ರಸ್ತುತ ಜನರು ಮಾನವೀಯತೆ ಮರೆಯುತ್ತಿದ್ದಾರೆ. ಶ್ರೀಮಂತರಾಗಬೇಕೆಂಬ ದುರಾಸೆಯಿಂದ ಒಬ್ಬರನ್ನು ತುಳಿದು ಅಥವಾ ಇನ್ನೊಬ್ಬರಿಗೆ ಮೋಸ ಮಾಡಿ ಶ್ರೀಮಂತಿಕೆ ಮತ್ತು ಅಧಿಕಾರ ಪಡೆದು ಅಪ್ರಮಾಣಿಕರಾಗಿದ್ದಾರೆ ಎಂದು ವಿಷಾದಿಸಿದರು.

ಜೈಲಿಗೆ ಹೋಗಿ ಬಂದ್ರೆ ಹಾರ ಹಾಕ್ತಾರೆ: ಹಿಂದೆ ಕಾರಣಾಂತರಗಳಿಂದ ಜೈಲಿಗೆ ಹೋಗಿ ಬಂದವರ ಕುಟುಂಬವನ್ನು ಜನರು ಕೀಳಾಗಿ ನೋಡುತ್ತಿದ್ದರು. ಆದರೆ, ಪ್ರಸ್ತುತ ಜೈಲಿಗೆ ಹೋಗಿ ಬರುವವರಿಗೆ ಹಾರ ತುರಾಯಿ ಹಾಕಿ, ಜೈಕಾರ ಹಾಕಿ ಅಭಿನಂದಿ ಸುತ್ತಿದ್ದಾರೆಂದು ವಿಷಾದಿಸಿದರು. ಇಂತಹ ಸಮಾಜ ವನ್ನು ಬದಲಾಯಿಸಲು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಮೇರು ವ್ಯಕ್ತಿಗಳಾಗಬೇಕೆಂದರು.

ಸಂಸ್ಥೆ ಪ್ರಾರಂಭಿಸಿ 24 ವರ್ಷ: ಅಮರಜ್ಯೋತಿ ವಿದ್ಯಾಸಂಸ್ಥೆ ಅಧ್ಯಕ್ಷ ಕಾಡೇನಹಳ್ಳಿ ನಾಗರಾಜ್‌ ಮಾತನಾಡಿ, ತಾಲೂಕಿನ ಜನತೆಗೆ ಉತ್ತಮ ವಿದ್ಯೆ ನೀಡುವ ನಿಟ್ಟಿನಲ್ಲಿ ಸಂಸ್ಥೆಯನ್ನು ಪ್ರಾರಂಭಿಸಿ 24 ವರ್ಷ ಆಗಿದೆ. ಪ್ರಾಥಮಿಕ ಹಂತದಿಂದ ಪದವಿವ ರೆಗೂ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಾಕಷ್ಟು ಮೈಲಿಗಲ್ಲು ಸಾಧಿಸಲಾಗಿದೆ. ಇಷ್ಟು ವರ್ಷಗಳಿಂದ ವಿದ್ಯಾಸಂಸ್ಥೆ ಬೆಳೆಯಲು ಪ್ರೋತ್ಸಾಹ ನೀಡಿದ ಸಾರ್ವಜನಿಕರು, ಅಧಿಕಾರಿಗಳು, ಉಪನ್ಯಾ ಸಕರು, ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ವಕೀಲರ ಸಂಘದ ಮಾಜಿ ಅಧ್ಯಕ್ಷ ರಂಗನಾಥ್‌, ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿ ಸಮೃದ್ಧಿ ಮಂಜುನಾಥ್‌, ಅಮರಜ್ಯೋತಿ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಆರ್‌.ಅಶೋಕ್‌ಕುಮಾರ್‌, ಬಿಇಒ ಗಂಗರಾಮಯ್ಯ, ಪ್ರಾಂಶುಪಾಲ ಸತ್ಯ ಮಯ್ಯ, ಮುಖ್ಯ ಶಿಕ್ಷಕರಾದ ಚಂಗಾರೆಡ್ಡಿ, ಮುನಿ ನಾರಾಯಣಪ್ಪ, ಪಿ.ಎಸ್‌.ವರದರಾಜಪ್ಪ, ಎಂ. ಗೊಲ್ಲಹಳ್ಳಿ ಪ್ರಭಾಕರ್‌, ರೆಸಾರ್ಟ್‌ ಚಂದ್ರಹಾಸ್‌, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.