ಮೊದಲ ಪತ್ನಿ ಇರುವಾಗಲೇ ಪಾಕ್ ಮಹಿಳೆಯೊಂದಿಗೆ ಎರಡನೇ ಮದುವೆಯಾದ ದಾವೂದ್ ಇಬ್ರಾಹಿಂ
ದಾವೂದ್ ಸೋದರಳಿಯನಿಂದ ಎನ್ಐಎಗೆ ಮಾಹಿತಿ
Team Udayavani, Jan 17, 2023, 4:27 PM IST
ಮುಂಬಯಿ: ಮೊದಲ ಪತ್ನಿಯ ಜೊತೆ ಸಂಸಾರ ನಡೆಸುತ್ತಿರುವ ವೇಳೆಯೇ ಭೂಗತ ಪಟಾಕಿ ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿರುವ ಕುರಿತು ದಾವೂದ್ ಇಬ್ರಾಹಿಂ ಸೋದರಳಿಯ ಮಾಹಿತಿ ಬಿಚ್ಚಿಟ್ಟಿದ್ದಾನೆ.
ಈ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ ಮುಂದೆ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ಪುತ್ರ ಅಲಿಶಾ ಪಾರ್ಕರ್ ಹೇಳಿಕೆ ನೀಡಿದ್ದಾನೆ. ಅಲ್ಲದೆ ಪಾಕಿಸ್ತಾನದ ಪಠಾಣ್ ಮಹಿಳೆಯೊಂದಿಗೆ 2ನೇ ವಿವಾಹವಾಗಿದ್ದಾನೆಂದು ಎಂದು ಹೇಳಿದ್ದಾನೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಭಯೋತ್ಪಾದಕ ಜಾಲವನ್ನು ಬಹಿರಂಗಪಡಿಸುವ ವಿಚಾರವಾಗಿ ಎನ್ಐಎ ಅಧಿಕಾರಿಗಳು ಇತ್ತೀಚೆಗಷ್ಟೇ ಮುಂಬೈ ಸೇರಿದಂತೆ ಹಲವೆಡೆ ದಾಳಿ ನಡೆಸಿ ಹಲವರನ್ನು ಬಂಧಿಸಿತ್ತು. ದಾವೂದ್ ಇಬ್ರಾಹಿಂ ಭೂಗತ ಜಾಲದ ಬಗ್ಗೆ ಎನ್ಐಎ ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದೆ.
ಈ ನಡುವೆ ಎನ್ಐಎ ಅಧಿಕಾರಿಗಳಿಗೆ ಮಾಹಿತಿ ನೀಡಿರುವ ದಾವೂದ್ನ ಸಹೋದರಿ ಹಸೀನಾ ಪಾರ್ಕರ್ ಪುತ್ರ ಅಲಿಶಾ ಪಾರ್ಕರ್, ಮೊದಲ ಪತ್ನಿಗೆ ವಿಚ್ಛೇದನ ನೀಡಿರುವ ಬಗ್ಗೆ ದಾವೂದ್ ಸುಳ್ಳು ಹೇಳಿದ್ದು, ಈ ನಡುವೆ ಪಾಕಿಸ್ತಾನದ ಮಹಿಳೆಯೊಂದಿಗೆ 2ನೇ ಮದುವೆಯಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ದಾವೂದ್ ಕರಾಚಿಯಲ್ಲಿ ವಾಸವಿರುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮಂಗಳೂರು ವಿ.ವಿ.ಯಲ್ಲಿ ಅಂಧ ಅತಿಥಿ ಉಪನ್ಯಾಸಕ; ಸಾಧನೆಗೆ ಅಡ್ಡಿಯಾಗದ ಅಂಧತ್ವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ