ಚಾಲಕರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ

Team Udayavani, Jan 31, 2023, 10:18 AM IST

ಚಾಲಕರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ

ಆನೇಕಲ್‌: ರಷ್ಯಾ ಮತ್ತು ಉಕ್ರೇನ್‌ ದೇಶಗಳ ನಡುವಿನ ಯುದ್ಧದಲ್ಲಿ ಮೃತಪಟ್ಟವರ ಸಂಖ್ಯೆಗಿಂತದೇಶದಲ್ಲಿ ರಸ್ತೆ ಅಪಘಾತಗಳಿಂದ ಮೃತ ಪಟ್ಟವರಸಂಖ್ಯೆ ಹೆಚ್ಚಿರುವುದು ಆತಂಕಕಾರಿ ವಿಚಾರ ಎಂದು ಕೇಂದ್ರ ವಲಯದ ಆರಕ್ಷಕ ಮಹಾನಿರೀಕ್ಷಕ ( ಐಜಿಪಿ) ಡಾ.ಬಿ.ಆರ್‌.ರವಿಕಾಂತೇಗೌಡ ಹೇಳಿದರು.

ತಾಲೂಕಿನ ಬನ್ನೇರುಘಟ್ಟ ಪೊಲೀಸ್‌ ಠಾಣೆ ವ್ಯಾಪ್ತಿಯ ಎಎಂಸಿ ವಿದ್ಯಾಸಂಸ್ಥೆಯಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ನಡೆದ 34ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪದಲ್ಲಿ ಮಾತನಾಡಿದರು.

ಭಾರತದ ರಸ್ತೆಗಳಲ್ಲಿ ಸಂಭವಿಸುತ್ತಿರುವ ಅಪಘಾತಗಳಿಗೆ ವಾಹನ ಚಾಲಕರ ನಿರ್ಲಕ್ಷ್ಯವೇಕಾರಣ. ರಸ್ತೆ ಸುರಕ್ಷೆ ಜೀವನದ ಸುರಕ್ಷೆ ಎಂಬ ಮಾತಿದೆ ಅದನ್ನು ನಾವು ಪಾಲಿಸಬೇಕು ಎಂದು ಹೇಳಿದರು.

ನಿಯಮ ಪಾಲಿಸಿ: ಆಟೋ ಚಾಲಕರು ಖಾಕಿ ಬಟ್ಟೆ ತೊಡುವುದರಿಂದ ಪೊಲೀಸ್‌ ಇಲಾಖೆಗೆ ಅವರ ಬಗ್ಗೆ ಕಾಳಜಿ ಇದೆ. ಶೇ.90 ರಷ್ಟು ಆಟೋ ಚಾಲಕರು ತುಂಬಾ ಒಳ್ಳೆಯವರಿದ್ದಾರೆ. ಕೇವಲ ಶೇ.10ರಷ್ಟುಆಟೋ ಚಾಲಕರಿಂದ ಇಡೀ ಆಟೋ ಸಮುದಾಯಕ್ಕೆ ಕಳಂಕ ಬರುತ್ತದೆ. ಒಳ್ಳೆ ಚಾಲಕರ ಬಗ್ಗೆ ಗೌರವ ಇದೆ.ಹೀಗಾಗಿ ಆಟೋ ಚಾಲಕರಲ್ಲಿ ಮನವಿ ಮಾಡುವುದುಎಂದರೆ ಎಷ್ಟೇ ಒತ್ತಡ ಇದ್ದರೂ ರಸ್ತೆ ಸುರಕ್ಷತೆನಿಯಮಗಳನ್ನು ಪಾಲನೆ ಮಾಡಬೇಕು ಎಂದು ಹೇಳಿದರು.

ಆಟೋ ಚಾಲಕರೂ ಪೊಲೀಸರಂತೆ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಸಾರ್ವಜನಿಕರೊಂದಿಗೆಇನ್ನಷ್ಟು ಉತ್ತಮ ನಡವಳಿಕೆ ತೋರುವುದರ ಜತೆಗೆಸುರಕ್ಷತೆ ಪಾಲಿಸಿ ನಿಮ್ಮ ಕುಟುಂಬಕ್ಕೆ ಆಧಾರವಾಗಿರಿ ಎಂದು ತಿಳಿಸಿದರು.

ಆಧಾರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನಬಾಳದಂಡಿ ಮಾತನಾಡಿ, ಆಟೋ ಸೇವೆ ಸಮಾಜಕ್ಕೆಅತ್ಯವಶ್ಯಕತೆ ಇದೆ. ಆಟೋ ಚಾಲಕರ ಮೇಲೆ ಒಂದುಇಡೀ ಕುಟುಂಬ ಅವಲಂಭಿತವಾಗಿರುತ್ತದೆ. ಹಾಗಾಗಿಆಟೋ ಚಾಲಕರು ತಮ್ಮ ಚಾಲನೆಯಲ್ಲಿ ರಸ್ತೆನಿಯಮಗಳನ್ನು ಪಾಲಿಸಿ ನಿಮ್ಮ ಕುಟುಂಬಗಳಜೀವನಕ್ಕೆ ಆಧಾರವಾಗಿ ಇರಬೇಕು ಎಂದು ತಿಳಿಸಿದರು.

ನಿಮ್ಮ ದುಡಿಮೆ ಅವಧಿಯಲ್ಲಿ ಇಲ್ಲಿ ಕರೆಸಿ ನಿಮಗೆ ಒಂದಷ್ಟು ಮಾಹಿತಿ ನೀಡುತ್ತಿದ್ದೇವೆ ಎಂದರೆ ರಸ್ತೆ ಸುರಕ್ಷತೆ ವಿಚಾರ ಎಷ್ಟು ಮುಖ್ಯ ಎಂಬುದು ತಿಳಿಯಬೇಕಿದೆ ಎಂದರು.

ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧೀಕ್ಷಕರಾದ ಎಂ.ಎಲ್‌. ಪುರುಷೋತ್ತಮ್‌ , ಉಪ ಪೊಲೀಸ್‌ ಅಧೀಕ್ಷಕ ಲಕ್ಷ್ಮೀನಾರಾಯಣ, ಎಎಂಸಿ ಕಾಲೇಜಿನ ಪ್ರಾಂಶುಪಾಲರಾದ ಗಿರೀಶ್‌ ಮತ್ತಿತರರು ಉಪಸ್ಥಿತರಿದ್ದರು.

ನೋವಿನ ಸಂಗತಿ :

ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಮನೆಯಿಂದ ಹೊರ ಬರುವ ಜನರಲ್ಲಿ ಪ್ರತಿ ದಿನ 4ಜನ ಅಪಘಾತಗಳಿಂದ ಮೃತ ಪಡುತ್ತಿದ್ದಾರೆ.ಇದಕ್ಕೆ ಅಂಕಿ ಅಂಶಗಳು ಸಾಕ್ಷಿಯಾಗಿರುವುದುನೋವಿನ ಸಂಗತಿ. ರಸ್ತೆ ಸುರಕ್ಷೆ ಒಂದುಕುಟುಂಬದ ರಕ್ಷೆ ಎಂಬುದನ್ನು ಎಲ್ಲಾ ಚಾಲಕರುಮನಗಾಣಲು ಸಪ್ತಾಹ ಆಯೋಜಿಸಲಾಗಿದೆಎಂದು ಕೇಂದ್ರ ವಲಯದ ಆರಕ್ಷಕ ಮಹಾನಿರೀಕ್ಷಕ ( ಐಜಿಪಿ) ಡಾ.ಬಿ.ಆರ್‌. ರವಿಕಾಂತೇಗೌಡ ತಿಳಿಸಿದರು.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.