![1-imek-22](https://www.udayavani.com/wp-content/uploads/2024/06/1-imek-22-415x236.jpg)
ನಿಟ್ಟೆ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ
Team Udayavani, Feb 13, 2023, 4:53 PM IST
![ನಿಟ್ಟೆ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ](https://www.udayavani.com/wp-content/uploads/2023/02/karkala-1-620x397.jpg)
ಕಾರ್ಕಳ: ನಿಟ್ಟೆ ಗ್ರಾಮದ ಕೆಮ್ಮಣ್ಣು ಮದನಾಡು ದರ್ಖಾಸು ನಿವಾಸಿ ಸಂಜೀವ ಪೂಜಾರಿ(78) ಮನೆಯ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13ರಂದು ನಡೆದಿದೆ.
6 ತಿಂಗಳ ಹಿಂದೆ ನಿಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತಲೆಗೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಮನೆಯಲ್ಲಿದ್ದರು. ಆಸ್ಪತ್ರೆಯಿಂದ ಬಿಡುಗಡೆಗೊಂಡು ಬಂದ ಬಳಿಕ ತಲೆಗೆ ಆದ ಗಾಯದಿಂದ ಮಾನಸಿಕವಾಗಿ ನೊಂದುಕೊಂಡಿದ್ದರು ಎನ್ನಲಾಗಿದ್ದು ಅದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![1-imek-22](https://www.udayavani.com/wp-content/uploads/2024/06/1-imek-22-415x236.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.