ರಾಜ್ಯದಲ್ಲಿ ಬಿಜೆಪಿಗೆ 150ಕ್ಕೂ ಹೆಚ್ಚು ಸ್ಥಾನ: ಧರ್ಮೇಂದ್ರ ಪ್ರಧಾನ್ ವಿಶ್ವಾಸ


Team Udayavani, Feb 23, 2023, 4:15 PM IST

ರಾಜ್ಯದಲ್ಲಿ ಬಿಜೆಪಿಗೆ 150ಕ್ಕೂ ಹೆಚ್ಚು ಸ್ಥಾನ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಶಾಸಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಸಚಿವ ಮತ್ತು ಕರ್ನಾಟಕದ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು ವಿಶ್ವಾಸದಿಂದ ನುಡಿದರು.

ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷವು ಉತ್ತಮ ಸಂಘಟನೆಯನ್ನು ಹೊಂದಿದೆ. ರೈತರು, ಮಹಿಳೆಯರು, ಎಸ್‍ಸಿ, ಎಸ್‍ಟಿ, ಒಬಿಸಿ ಸಮುದಾಯದ ಅಭಿವೃದ್ಧಿ, ಕರಾವಳಿ ಪ್ರದೇಶ ಸೇರಿ ರಾಜ್ಯದ ಅಭಿವೃದ್ಧಿಗೆ ಮಾಡಿದ ಕೆಲಸಗಳು ಮಾತ್ರವಲ್ಲದೆ ಮೋದಿಜಿ ಅವರ ನಾಯಕತ್ವದಿಂದ ನಮ್ಮ ಗೆಲುವು ಸುಲಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯವು ಹಲವು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ. ಇಲ್ಲಿನ ಜನರು ಪ್ರಧಾನಿ ನರೇಂದ್ರ ಮೋದಿಜಿ ಅವರ ಜೊತೆಗಿದ್ದಾರೆ ಎಂಬ ವಿಶ್ವಾಸ ನನಗಿದೆ. ಮೋದಿಜಿ ಅವರ ಸರಕಾರ, ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅವರ ಸರಕಾರಗಳು ಮಾಡಿದ ಸಾಧನೆಯ ಹಿನ್ನೆಲೆ ನಮಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಒಲೆಕ್ಟ್ರಾದಿಂದ ಅತ್ಯಾಧುನಿಕ ಹೈಡ್ರೋಜನ್ ಬಸ್ ನಿರ್ಮಾಣ; ಮಾಲಿನ್ಯ ಮುಕ್ತ ಸಾರಿಗೆಯತ್ತ ಹೆಜ್ಜೆ

ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಕೆಲವು ಬಾರಿ ರಾಜ್ಯಕ್ಕೆ ಭೇಟಿ ಕೊಟ್ಟಿದ್ದು, ಇನ್ನಷ್ಟು ಬಾರಿ ಬರಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಅವರೆಲ್ಲರೂ ಪಕ್ಷಕ್ಕಾಗಿ ಪ್ರಚಾರ ಮಾಡಲಿದ್ದಾರೆ. ಶೀಘ್ರದಲ್ಲೇ ಪ್ರಚಾರ ಯಾತ್ರೆಗಳನ್ನು ಆರಂಭಿಸಲಾಗುತ್ತದೆ. ಯಾತ್ರೆಯಲ್ಲಿ ಕೇಂದ್ರ ಮತ್ತು ರಾಜ್ಯದ ಹಿರಿಯ ನಾಯಕರು ಭಾಗವಹಿಸಿ ಸಾಧನೆಗಳನ್ನು ಜನರಿಗೆ ತಿಳಿಸಲಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸಚಿವ ಮತ್ತು ಕರ್ನಾಟಕದ ಚುನಾವಣಾ ಸಹ ಉಸ್ತುವಾರಿ ಮನ್‍ಸುಖ್ ಮಾಂಡವೀಯ ಮತ್ತು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ, ಸಂಸದ ಪಿ.ಸಿ.ಮೋಹನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್, ರಾಜ್ಯ ಮುಖ್ಯ ವಕ್ತಾರ ಮಹೇಶ್ ಎಂ.ಜಿ ಅವರು ಹಾಜರಿದ್ದರು.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.