ಸೈಂಟಿಫಿಕ್ ಸಸ್ಪೆನ್ಸ್- ಥ್ರಿಲ್ಲರ್ ‘ಬೀಗ’ ಟ್ರೇಲರ್ ರಿಲೀಸ್

Team Udayavani, Feb 24, 2023, 2:47 PM IST

ಸೈಂಟಿಫಿಕ್ ಸಸ್ಪೆನ್ಸ್- ಥ್ರಿಲ್ಲರ್ ‘ಬೀಗ’ ಟ್ರೇಲರ್ ರಿಲೀಸ್

ಸೈಂಟಿಫಿಕ್‌ ಮಿಸ್ಟರಿ ಜೊತೆಗೆ ಸಸ್ಪೆನ್ಸ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ಬೀಗ’ ಸಿನಿಮಾದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಈ ಹಿಂದೆ “ಅಗ್ರಜ’ ಮತ್ತು “ಲೀ’ ಸಿನಿಮಾಗಳನ್ನು ನಿರ್ದೇಶಿಸಿದ್ದ ಹೆಚ್‌. ಎಂ ಶ್ರೀನಂದನ್‌ ನಿರ್ದೇಶನದ ಮೂರನೇ ಸಿನಿಮಾ ಇದಾಗಿದ್ದು, “ವಿಎಂಆರ್‌ ಪೊ›ಡಕ್ಷನ್‌’ ಬ್ಯಾನರ್‌ ನಲ್ಲಿ ರಮೇಶ್‌ ಮುನಿಹನುಮಪ್ಪ, ಹೆಚ್‌. ಎಂ ಶ್ರೀನಂದನ್‌ ಹಾಗೂ ಕೃಷ್ಣ ಎಲ್‌ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಟ್ರೇಲರ್‌ ಬಿಡುಗಡೆ ಬಳಿಕ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಹೆಚ್‌. ಎಂ ಶ್ರೀನಂದನ್‌, “ಇದೊಂದು ವೈಜ್ಞಾನಿಕ ಹಿನ್ನೆಲೆ ಇಟ್ಟುಕೊಂಡು ಮಾಡಿರುವ ಸಿನಿಮಾ. ಯಾರೂ ವಾಸವಿರದ ಮನೆಯೊಂದರ “ಬೀಗ’ ತೆಗೆದ ನಂತರ ಅಲ್ಲಿ ಏನೇನು ನಡೆಯುತ್ತದೆ ಎಂಬುದು ಸಿನಿಮಾದ ಕಥೆಯ ಒಂದು ಎಳೆ. ಹೆಣ್ಣುಮಗುವೊಂದು ರಸ್ತೆಯಲ್ಲಿ ಬಂದಾಗ ಅದನ್ನು ಮಗು ಎಂದೂ ನೋಡದೆ ಕೆಲವರು ಹೇಗೆ ವರ್ತಿಸುತ್ತಾರೆ ಎನ್ನುವುದನ್ನೂ ಸಿನಿಮಾದಲ್ಲಿ ತೋರಿಸಿದ್ದೇವೆ. ಆ ಥರದ ಮನಸ್ಥಿತಿ ಇದ್ದವರು ಈ ಸಿನಿಮಾ ನೋಡಿ ಬದಲಾಗಬೇಕು ಎನ್ನುವುದು ನಮ್ಮ ಆಶಯ’ ಎಂದರು.

“ಬೀಗ’ ಸಿನಿಮಾದಲ್ಲಿ ನ ರವಿಶಂಕರ್‌ ಸಸ್ಪೆಂಡ್‌ ಆಗಿರುವ ಪೋಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ “ಮೊಗ್ಗಿನ ಮನಸು’ ಖ್ಯಾತಿಯ ಯುವನಟ ಜೆ. ಡಿ ಆಕಾಶ್‌, ಸೈಯದ್‌ ಇರ್ಫಾನ್‌, ಶ್ರೀನಂದನ್‌ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದು, ಉತ್ತರ ಭಾರತ ಮೂಲದ ಸಹಾರ ಸಿನಿಮಾದಲ್ಲಿ ನಾಯಕಿಯಾಗಿದ್ದಾರೆ. ಸುಮಿತಾ ಬಜಾಜ್‌, ಸುಚೇಂದ್ರ ಪ್ರಸಾದ್‌, ಕುಮಾರ್‌ ಅರಸೇಗೌಡ, ಮೈಸೂರು ರಮಾನಂದ, ಬೇಬಿ ಶರಣ್ಯ ಮೊದಲಾದವರು “ಬೀಗ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಬೆಂಗಳೂರು ಸುತ್ತಮುತ್ತ “ಬೀಗ’ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಸಿನಿಮಾದಲ್ಲಿ ನಾಲ್ಕು ಸಾಹಸ ದೃಶ್ಯಗಳು ಹಾಗೂ ಐದು ಹಾಡುಗಳಿವೆ. ಚಿತ್ರಕ್ಕೆ ಎಂ.ಬಿ ಹಳ್ಳಿಕಟ್ಟೆ, ವೀನಸ್‌ ನಾಗರಾಜಮೂರ್ತಿ ಛಾಯಾಗ್ರಹಣ, ವೆಂಕಿ ಯುಡಿವಿ ಸಂಕಲನ, ಶ್ರೀಗುರು ಸಂಗೀತ ಸಂಯೋಜನೆಯಿದೆ. ಅಂದಹಾಗೆ ಈ ಸಿನಿಮಾ ತೆಲುಗಿನಲ್ಲಿ “ಕರಾಳ’ ಹೆಸರಲ್ಲಿ ತೆರೆ ಕಾಣುತ್ತಿದೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.