ಕಾಂಗ್ರೆಸ್ ಉನ್ನತ ಸಮಿತಿಗೆ ಚುನಾವಣೆಯಿಲ್ಲ, ನೇರ ಆಯ್ಕೆ: ಖರ್ಗೆಯವರದ್ದೇ ನಿರ್ಧಾರ
Team Udayavani, Feb 24, 2023, 2:58 PM IST
ರಾಯ್ಪುರ : ಕಾಂಗ್ರೆಸ್ನ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯ ಸದಸ್ಯರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ನಾಮನಿರ್ದೇಶನ ಮಾಡುತ್ತಾರೆ, ಚುನಾವಣೆಯ ಮೂಲಕ ಆಯ್ಕೆ ಮಾಡಲಾಗುವುದಿಲ್ಲ ಎಂದು ಸಂವಹನಗಳ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಶುಕ್ರವಾರ ಹೇಳಿದ್ದಾರೆ.
ಎಲ್ಲಾ ಸಿಡಬ್ಲ್ಯೂಸಿ (ಕಾಂಗ್ರೆಸ್ ಕಾರ್ಯಕಾರಿ ಸಮಿತಿ) ಸದಸ್ಯರನ್ನು ನಾಮನಿರ್ದೇಶನ ಮಾಡಲು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಲು ಕಾಂಗ್ರೆಸ್ ಉಸ್ತುವಾರಿ ಸಮಿತಿಯು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಛತ್ತೀಸ್ಗಢದ ರಾಯ್ಪುರದಲ್ಲಿ ನಡೆದ ಕಾಂಗ್ರೆಸ್ನ 85ನೇ ಸರ್ವಸದಸ್ಯ ಅಧಿವೇಶನದ ಭಾಗವಾಗಿ ನಡೆದ ಸಭೆಯಲ್ಲಿ ಅಜಯ್ ಮಾಕನ್, ಅಭಿಷೇಕ್ ಮನು ಸಿಂಘ್ವಿ ಮತ್ತು ದಿಗ್ವಿಜಯ ಸಿಂಗ್ ಅವರಂತಹ ನಾಯಕರು ಚುನಾವಣೆಗೆ ಒಲವು ತೋರಿದ್ದರಿಂದ ಈ ನಿರ್ಧಾರವು ಸರ್ವಾನುಮತದಿಂದ ಆಗಿಲ್ಲ ಎಂದು ಮೂಲಗಳು ತಿಳಿಸಿವೆ. 2024 ರ ರಾಷ್ಟ್ರೀಯ ಚುನಾವಣೆಯ ನಂತರವೂ ಚುನಾವಣೆಗಳನ್ನು ನಡೆಸಬಹುದು ಎಂದು ಸಿಂಘ್ವಿ ಸಲಹೆ ನೀಡಿದರು.
ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಸಂಪೂರ್ಣ ನಂಬಿಕೆಯಿದ್ದು, ಅವರ ಕೈಗಳನ್ನು ಬಲಪಡಿಸಲು ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಬಯಸಿದ್ದೇವೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಮತ್ತು ಪ್ರಿಯಾಂಕಾ ಅವರು ಖರ್ಗೆ ಅವರಿಗೆ ಮುಕ್ತ ಹಸ್ತವನ್ನು ನೀಡಲು ಬಯಸಿದ್ದರಿಂದ ಪ್ರಮುಖ ಸಭೆಯಿಂದ ಹೊರಗುಳಿದಿದ್ದು, ಯಾವುದೇ ರೀತಿಯಲ್ಲಿ ನಿರ್ಧಾರಗಳ ಮೇಲೆ ಪ್ರಭಾವ ಬೀರಬಾರದು ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ