ಪುತ್ತೂರು: ಬಿಜೆಪಿ ಜವಬ್ದಾರಿಯಿಂದ ಕಾರ್ಯಕರ್ತನಿಗೆ ಮುಕ್ತಿ; ಜಾಲತಾಣದಲ್ಲಿ ಕಿಡಿ

ಪಕ್ಷದ ಪ್ರಕಟಣೆಯ ವಿರುದ್ಧ ಆಕ್ರೋಶ

Team Udayavani, Feb 26, 2023, 8:53 PM IST

1-abjp

ಪುತ್ತೂರು : ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55ರ ಬಿ ಎಲ್‍ಎ 2 ರ ಜವಾಬ್ದಾರಿಯಿಂದ ಬನ್ನೂರು ನಿವಾಸಿ ಮನೀಶ್ ಕುಲಾಲ್ ಅವರನ್ನು ವಜಾಗೊಳಿಸಿರುವುದಾಗಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮನೀಶ್ ಕುಲಾಲ್ ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸಿರುವುದನ್ನು ಗಮನಿಸಿ ಶಿಸ್ತು ಕ್ರಮದ ಅನುಸಾರವಾಗಿ ತತ್‍ಕ್ಷಣ ಜಾರಿಗೆ ಬರುವಂತೆ ಜವಾಬ್ದಾರಿಯಿಂದ ವಜಾಗೊಳಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಈ ನಡೆಯೀಗ ಮತ್ತೆ ಚರ್ಚೆಗೆ ಈಡು ಮಾಡಿದೆ.

ವಾಗ್ವಾದ ಕಾರಣ?
ಪುತ್ತೂರಿಗೆ ಫೆ. 11 ರಂದು ಆಗಮಿಸಿದ ಅಮಿತ್ ಶಾ ಸ್ವಾಗತ ಕೋರಿ ಅಳವಡಿಸಿದ ಫ್ಲೆಕ್ಸ್ ಸಂಬಂಧಿತವಾಗಿ ಶಾಸಕರು ಮಳೆಗಾಲದಲ್ಲಿ ಅಣಬೆ ಹುಟ್ಟುವುದು ಸಹಜ ಎಂಬ ಹೇಳಿಕೆ ನೀಡಿದ್ದರು. ಇದು ಅರುಣ್ ಕುಮಾರ್ ಪುತ್ತಿಲ ಅವರನ್ನೇ ಗುರಿಯಾಗಿಸಿ ನೀಡಿದ ಹೇಳಿಕೆ ಎಂಬ ಪುತ್ತಿಲ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರ ಪುತ್ತಿಲ ಬೆಂಬಲಿಗರು ಮತ್ತು ಪಕ್ಷದ ಮುಖಂಡರ ನಡುವಿನ ತಿಕ್ಕಾಟಕ್ಕೆ ಕಾರಣವಾಗಿತ್ತು. ನಗರದಲ್ಲಿ ಅಮಿತ್ ಶಾ ಅವರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ ಜಾಥಾದಲ್ಲಿ ಈ ವಿವಾದ ಸ್ಫೋಟಗೊಂಡು ಉಭಯ ಬಣಗಳ ನಡುವೆ ಪರಸ್ಪರ ವಾಗ್ವಾದಕ್ಕೆ ಕಾರಣವಾಗಿತ್ತು. ಇದೇ ವಾಗ್ವಾದವೇ ಮನೀಶ್ ಅವರ ವಜಾಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಜಾಲ ತಾಣದಲ್ಲಿ ಮತ್ತೆ ಆಕ್ರೋಶ
ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಪುತ್ತಿಲ ಫಾರ್ ಪುತ್ತೂರು ಅಭಿಯಾನದ ಮುಂಚೂಣಿಯಲ್ಲಿ ಮನೀಶ್ ಕುಲಾಲ್ ಗುರುತಿಸಿಕೊಂಡಿದ್ದರು. ವಾಟ್ಸ್ ಆ್ಯಪ್ ಗ್ರೂಪ್‍ಗಳಲ್ಲಿ, ಟ್ವಿಟರ್ ಹಾಗೂ ಫೇಸ್ ಬುಕ್ ನಲ್ಲಿ ಪುತ್ತಿಲ ಪರವಾಗಿ ಕಳೆದೊಂದು ತಿಂಗಳಿನಿಂದ ನಿರಂತರವಾಗಿ ಅಭಿಯಾನ ನಡೆಸಲಾಗುತ್ತಿದೆ. ತಿಂಗಳ ಹಿಂದೆ ಟ್ವಿಟರ್ ನಲ್ಲಿ ಪುತ್ತಿಲ ಫಾರ್ ಪುತ್ತೂರು ಅಭಿಯಾನ ನಡೆಸಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ಗಮನ ಸೆಳೆಯುವ ಪ್ರಯತ್ನ ನಡೆಸಲಾಗಿತ್ತು. ಇದೀಗ ಮನೀಶ್ ಅವರ ವಜಾಕ್ಕೆ ವಾಟ್ಸ್ ಆ್ಯಪ್ ಗ್ರೂಪ್ ಗಳಲ್ಲಿ ಪುತ್ತಿಲ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತನ್ನನ್ನು ವಜಾಗೊಳಿಸಿದರೂ ತಾನು ಕೊನೆಯವರೆಗೂ ಬಿಜೆಪಿ ಕಾರ್ಯಕರ್ತನಾಗಿಯೇ ಇರುತ್ತೇನೆ ಎಂದು ಮನೀಶ್ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.