ರಾತ್ರಿ ವೇಳೆ ದಟ್ಟ ಅರಣ್ಯಗಳಲ್ಲಿ ರೈಲಿನ ವೇಗಕ್ಕೆ ವನ್ಯಪ್ರಾಣಿಗಳ ಸಾವು

ಉತ್ತರ ನೀಡುವಂತೆ ಅರಣ್ಯ ಇಲಾಖೆಗೆ ಹೈಕೋರ್ಟ್‌ ನಿರ್ದೇಶನ

Team Udayavani, Mar 22, 2023, 8:45 AM IST

ರಾತ್ರಿ ವೇಳೆ ದಟ್ಟ ಅರಣ್ಯಗಳಲ್ಲಿ ರೈಲಿನ ವೇಗಕ್ಕೆ ವನ್ಯಪ್ರಾಣಿಗಳ ಸಾವು

ಬೆಂಗಳೂರು: ಹೊಸಪೇಟೆ- ವಾಸ್ಕೊ ಹಾಗೂ ಲೋಂಡ-ಮಿರ್ಜಾ ರೈಲು ಮಾರ್ಗವಿರುವ ದಟ್ಟ ಅರಣ್ಯ ಪ್ರದೇಶಗಳಲ್ಲಿ ರಾತ್ರಿ ವೇಳೆ ಚಲಿಸುವ ರೈಲುಗಳ ವೇಗ ಕಡಿಮೆ ಮಾಡುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಅರಣ್ಯ ಇಲಾಖೆಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಈ ವಿಚಾರವಾಗಿ ಗಿರಿಧರ ಕುಲಕರ್ಣಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಹಾಗೂ ನ್ಯಾ| ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ವಾದ ಆಲಿಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಬೆಳಗಾವಿ, ಹಳಿಯಾಳ ಮತ್ತು ಧಾರವಾಡ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಿಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ವನ್ಯಜೀವಿಗಳನ್ನು ಸಂರಕ್ಷಿಸುವ ವಿಚಾರದಲ್ಲಿ ಸುಪ್ರೀಂಕೋರ್ಟ್‌ ಸ್ಪಷ್ಟ ಸೂಚನೆಗಳನ್ನು ನೀಡಿದೆ. ಅದು ಕೇವಲ ಅಸ್ಸಾಂ ಅಥವಾ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ದೇಶಕ್ಕೆ ಅನ್ವಯವಾಗಲಿವೆ. ದಟ್ಟ ಅರಣ್ಯ ಪ್ರದೇಶಗಳ ಮೂಲಕ ರಾತ್ರಿ ವೇಳೆ ಹಾದು ಹೋಗುವ ರೈಲುಗಳ ವೇಗದ ಮಿತಿ ಕಡಿತಗೊಳಿಸುವಂತೆ ಸುಪ್ರೀಂ ಕೋರ್ಟ್‌ ರೈಲ್ವೇ ಇಲಾಖೆಗೆ ಈಗಾಗಲೇ ನಿರ್ದೇಶನ ನೀಡಿದೆ. ಆದ್ದರಿಂದ ಸುಪ್ರೀಂಕೋರ್ಟ್‌ ಆದೇಶ ಪಾಲಿಸದ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಸಿಬಂದಿ ವಿರುದ್ಧ ಕಾನೂನು ರೀತಿ ಕ್ರಮ ಜರಗಿಸುವಂತೆಯೂ ಸ್ಪಷ್ಟ ನಿರ್ದೇಶನವಿದೆ ಎಂದು ನ್ಯಾಯಪೀಠ ಉಲ್ಲೇಖಿಸಿದೆ.

ಅರ್ಜಿದಾರರ ಆಕ್ಷೇಪ
ದಟ್ಟ ಅರಣ್ಯ ಪ್ರದೇಶಗಳಲ್ಲಿ ರಾತ್ರಿ ವೇಳೆ ರೈಲುಗಳು ವೇಗವಾಗಿ ಸಂಚರಿಸುವುದರಿಂದ ವನ್ಯಪ್ರಾಣಿಗಳಿಗೆ ತೊಂದರೆ ಆಗುತ್ತದೆ. ಅನೇಕ ಪ್ರಕರಣಗಳಲ್ಲಿ ವನ್ಯಪ್ರಾಣಿಗಳು ಪ್ರಾಣ ಕಳೆದುಕೊಂಡ ನಿದರ್ಶನಗಳಿವೆ. 2014 ರಿಂದ ಈವರೆಗೆ ಲಭ್ಯವಿರುವ ಮಾಹಿತಿಯಂತೆ ಬೆಳಗಾವಿ, ಧಾರವಾಡ, ದಾಂಡೇಲಿ ಹಾಗೂ ಹಳಿಯಾಳದ ಅರಣ್ಯ ಪ್ರದೇಶಗಳಲ್ಲಿ ರೈಲುಗಳು ಡಿಕ್ಕಿ ಹೊಡೆದ ಪರಿಣಾಮ 60ಕ್ಕೂ ಅಧಿಕ ಪ್ರಾಣಿಗಳು ಸಾವನ್ನಪ್ಪಿವೆ. ಇದರಲ್ಲಿ 2 ಆನೆ, 49 ಕಾಡುಕೋಣ ಸೇರಿ ಕರಡಿ, ಕಾಡುನಾಯಿ, ಕಾಡುಹಂದಿಗಳು, ಜಿಂಕೆಗಳು ಮೃತಪಟ್ಟಿವೆ. ರೈಲುಗಳು ವೇಗವಾಗಿ ಸಂಚರಿಸುವುದೇ ಈ ಅಪಘಾತಗಳಿಗೆ ಕಾರಣವಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಅರ್ಜಿದಾರರ ಮನವಿ
ವನ್ಯ ಜೀವಿಗಳಿಗೆ ಹಾನಿಯಾಗಬಾರದೆಂದೇ ಬೆಳಗಾವಿ-ಧಾರವಾಡ ಜಿÇÉೆಗಳ ನಡುವಿನ ರೈಲು ಮಾರ್ಗಕ್ಕೆ ಪರ್ಯಾಯವಾಗಿ ಕಿತ್ತೂರು ಮೂಲಕ ಹಾದು ಹೋಗುವ ಮಾರ್ಗವನ್ನು ರೂಪಿಸಲಾಗಿದೆ. ಆದೇ ರೀತಿ ಹೊಸಪೇಟೆ-ವಾಸ್ಕೋ ಮತ್ತು ಲೋಂಡಾ-ಮೀರಜ್‌ ಮಾರ್ಗಗಳಿಗೂ ಪರ್ಯಾಯ ಮಾರ್ಗ ರೂಪಿಸಲು ಕ್ರಮ ಕೈಗೊಳ್ಳಲು ರೈಲ್ವೇ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ದೇಶದ ಎಲ್ಲ ದಟ್ಟಾರಣ್ಯಗಳಲ್ಲಿ ರೈಲುಗಳ ವೇಗವನ್ನು ಕಡಿತಗೊಳಿಸಬೇಕೆಂದು 2013ರಲ್ಲಿ ರೈಲ್ವೆ ಇಲಾಖೆಗೆ ಆದೇಶ ನೀಡಿದ್ದು, ವೇಗ ಕಡಿಮೆ ಮಾಡದಿದ್ದರೆ ಚಾಲಕರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆದೇಶಿಸಿದೆ. ಆದರೆ ಆದೇಶ ಪಾಲನೆಯಾಗಿಲ್ಲ. ಹೊಸಪೇಟೆ-ವಾಸ್ಕೋ ಹಾಗೂ ಲೋಂಡಾ-ಮೀರಜ್‌ ಮಾರ್ಗದಲ್ಲಿ ರೈಲು ಡಿಕ್ಕಿ ಹೊಡೆದು ಪ್ರಾಣಿಗಳು ಸಾವನ್ನಪ್ಪದಂತೆ ಕ್ರಮ ಕೈಗೊಳ್ಳುವಂತೆ ಅರ್ಜಿದಾರರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ರೈಲ್ವೆ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ. ಈ ಮೂಲಕ ಅರಣ್ಯ ಇಲಾಖೆ ವನ್ಯ ಜೀವಿಗಳನ್ನು ಸಂರಕ್ಷಿಸಬೇಕೆನ್ನುವ ಸಂವಿಧಾನದ ವಿಧಿ 48(ಎ) ಹೇಳಿರುವ ಮೂಲಭೂತ ಕರ್ತವ್ಯವನ್ನು ಉಲ್ಲಂ ಸಿದೆ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.