ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ

Team Udayavani, Mar 21, 2023, 8:58 PM IST

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬೀದರ್: ಕಳ್ಳತನ, ದರೋಡೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ‌ ಭಾಗಿಯಾಗಿದ್ದ ಆರೋಪಿಯ ಬಂಧನದ ವೇಳೆ ಪೊಲೀಸರ ಮೇಲೆ ಚಾಕುವಿನಿಂದ ದಾಳಿಗೆ ಯತ್ನಿಸಿದ ಘಟನೆ ನಗರದ ಚಿದ್ರಿ – ಮೈಲೂರು ರಿಂಗ್ ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಈ ವೇಳೆ ಸಿಪಿಐ ತಮ್ಮ ಆತ್ಮರಕ್ಷಣೆಗಾಗಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ನಗರದ ಇರಾನಿ ಗಲ್ಲಿಯ 25 ವರ್ಷದ ಯುವಕ‌ ಬಂಧಿತ ಆರೋಪಿಯಾಗಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ನಗರದ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಮಲ್ಲಿಕಾರ್ಜುನ ಯಾತನೂರ್ ಮತ್ತು ಸಿಪಿಐ ನಾಗೇಂದ್ರ ನೇತೃತ್ವದ ತಂಡ ಖಚಿತ ಮಾಹಿತಿ‌ ಮೇರೆಗೆ ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದರು.

ಕಾರ್ಯಾಚರಣೆ ವೇಳೆ ಅನುಮಾನಸ್ಪವಾಗಿ ಎರಡು ಬೈಕ್ ಗಳ ಮೇಲೆ ಬರುತ್ತಿದ್ದ ಯುವಕರನ್ನು ಪೊಲೀಸರು ತಡೆಯಲು ಮುಂದಾದಾಗ ಪೊಲೀಸರ ಮೇಲೆ ಬೈಕ್ ಗಳನ್ನು ಹರಿಸಲು ಯತ್ನಿಸಿದ್ದಲ್ಲದೇ ಚಾಕು ತೋರಿಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಈ ಸಂದರ್ಭ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ. ಆತನ ಬಂಧನಕ್ಕೂ ಪೊಲೀಸರು ಜಾಲ ಬೀಸಿದ್ದಾರೆ.

ಘಟನೆ ಕುರಿತಂತೆ ಮಾಧ್ಯಮದವರಿಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಲಂಗೋಟಿ, ರಾಬ್ರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನದ ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದೆ. ಪೊಲೀಸರಿಗೆ ಚಾಕು ತೋರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅತ್ಮರಕ್ಷಣೆಗಾಗಿ ಸಿಪಿಐ ಮಲ್ಲಿಕಾರ್ಜುನ ಯಾತನೂರ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಒಬ್ಬ ಆರೋಪಿಯನ್ನು ಬಂಧಿಸಿ ಆತನಿಂದ ಚಾಕು ಮತ್ತು ಬೈಕ್ ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಬಂಧಿತನ ವಿರುದ್ಧ 5 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಘಟನೆ ಕುರಿತಂತೆ ಗಾಂಧಿ ಗಂಜ್ ಠಾಣೆಯಲ್ಲಿ‌ಪ್ರಕರಣ ದಾಖಲು ಮಾಡಿಲೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮಾರ್ಚ್ 23ಕ್ಕೆ ಮೇಯರ್ ಚುನಾವಣೆ: ಬಿಜೆಪಿ, ಕಾಂಗ್ರೆಸ್,ಜೆಡಿಎಸ್… ಯಾರಿಗೆ ಯುಗಾದಿ?

ಟಾಪ್ ನ್ಯೂಸ್

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.