ಯಾವುದೇ ಕ್ಷಣದಲ್ಲಾದರೂ ವೇಳಾಪಟ್ಟಿ ಘೋಷಣೆ; ಸನ್ನದ್ಧರಾಗಿರಲು ಸೂಚನೆ

ಸಕಲ ಸಿದ್ಧತೆಗೆ ಜಿಲ್ಲಾಡಳಿತಕ್ಕೆ ಸೂಚನೆ

Team Udayavani, Mar 25, 2023, 7:05 AM IST

ಯಾವುದೇ ಕ್ಷಣದಲ್ಲಾದರೂ ವೇಳಾಪಟ್ಟಿ ಘೋಷಣೆ; ಸನ್ನದ್ಧರಾಗಿರಲು ಸೂಚನೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದ್ದು, ಯಾವುದೇ ಕ್ಷಣದಲ್ಲಾದರೂ ಕೇಂದ್ರ ಚುನಾವಣ ಆಯೋಗ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆಯಿದ್ದು, ಸಕಲ ರೀತಿಯಲ್ಲೂ ಸನ್ನದ್ಧರಾಗಿರುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಸೂಚಿಸಿದೆ.

ಕೇಂದ್ರ ಚುನಾವಣ ಆಯೋಗವು ಯಾವುದೇ ಕ್ಷಣದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ವೇಳಾಪಟ್ಟಿ ಘೋಷಿಸುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಮಾದರಿ ಚುನಾವಣ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಿದ್ಧವಾಗಿರುವಂತೆ ಮುಖ್ಯ ಚುನಾವಣ ಅಧಿಕಾರಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರಿಗೆ ಸೂಚಿಸಿದ್ದಾರೆ. ರಾಜ್ಯ ವಿಧಾನಸಭೆಗೆ ಎಪ್ರಿಲ್‌ ಅಥವಾ ಮೇಯಲ್ಲಿ ಚುನಾವಣೆ ನಡೆಯಲಿದೆ.

ಮಾದರಿ ಚುನಾವಣೆ ನೀತಿ ಸಂಹಿತೆ ಅನುಷ್ಠಾನಕ್ಕೆ ಅಗತ್ಯ ಇರುವ ಎಲ್ಲ ಪೂರ್ವ ತಯಾರಿಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯ ಚುನಾವಣ ಅಧಿಕಾರಿ ತಿಳಿಸಿದ್ದಾರೆ.

ವೇಳಾಪಟ್ಟಿ ಘೋಷಣೆಗೂ ಮುನ್ನ ಕೆಲವು ಮಹತ್ವದ ಚಟುವಟಿಕೆಗಳು ಬಾಕಿ ಉಳಿದಿದ್ದು, ಅವುಗಳನ್ನು ತತ್‌ಕ್ಷಣವೇ ಪೂರ್ಣಗೊಳಿಸುವಂತೆ ತುರ್ತು ಸೂಚನೆ ಹೊರಡಿಸಿದ್ದಾರೆ.

ಜಿಲ್ಲಾ ಚುನಾವಣ ಅಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳು ಮಾದರಿ ಚುನಾವಣೆ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಿದ್ಧತೆ ಮಾಡಿಕೊಳ್ಳಬೇಕು. ತಮ್ಮ ತಮ್ಮ ಜಿಲ್ಲೆಗಳ ವ್ಯಾಪ್ತಿಯಲ್ಲಿ ಈಗಾಗಲೇ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಫ್ಲೆಕ್ಸ್‌ಗಳು, ಪೋಸ್ಟರ್‌ಗಳನ್ನು ತೆರವುಗೊಳಿಸಬೇಕು ಎಂದು ಮುಖ್ಯ ಚುನಾವಣ ಅಧಿಕಾರಿ ತಿಳಿಸಿದ್ದಾರೆ.

ನೀತಿ ಸಂಹಿತೆ ಅನ್ವಯಗೊಳಿಸಲು ಅಗತ್ಯವಿರುವ ಎಲ್ಲಾ ಮಾಹಿತಿಗಳ ಕೈಪಿಡಿಗಳನ್ನು ಮುಖ್ಯ ಚುನಾವಣ ಅಧಿಕಾರಿ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದಾರೆ. ಚುನಾವಣೆ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸ್‌ ಭದ್ರತೆ ಹೆಚ್ಚಳ, ಮತದಾರರಿಗೆ ಆಮಿಷ ನೀಡದಂತೆ ಎಚ್ಚರಿಕೆ ವಹಿಸುವುದು, ಅಕ್ರಮವಾಗಿ ಹಣ, ಮದ್ಯ, ಉಡುಗೊರೆಗಳನ್ನು ಸಾಗಿಸುವುದಕ್ಕೆ ಕಡಿವಾಣ ಹಾಕುವುದು, ಸರಕಾರಿ ಕಚೇರಿಗಳಲ್ಲಿ ರಾಜಕೀಯ ಪಕ್ಷಗಳ ಸಭೆ ಸಮಾರಂಭ ನಡೆಸದಂತೆ ನೋಡಿಕೊಳ್ಳಬೇಕು ಹಾಗೂ ಅವುಗಳಿಗೆ ಅವಕಾಶವನ್ನೂ ನೀಡಬಾರದು. ಅಭ್ಯರ್ಥಿಗಳ ಖರ್ಚು ಮತ್ತು ವೆಚ್ಚಗಳ ಕುರಿತು ನಿಗಾ ಇಡುವುದು. ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ವಹಿಸುವುದು ಸೇರಿ ನೀತಿ ಸಂಹಿತೆಯ ಅಂಶಗಳನ್ನು ಅನುಷ್ಠಾನಕ್ಕೆ ತರಲು ಈಗಿನಿಂದಲೇ ಜಿಲ್ಲಾ ಚುನಾವಣಾಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ಸೂಚನೆ ನೀಡಿದೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.