ಸಿದ್ದುಗೆ ಈಗ ಹಳೆ ಗಂಡನ ಪಾದವೇ ಗತಿ : ಸಂಸದ ಪ್ರತಾಪ್‌ ಸಿಂಹ 

Team Udayavani, Mar 27, 2023, 11:17 AM IST

tdy-10

ಮೈಸೂರು: ಕಾಂಗ್ರೆಸ್‌ ಪ್ರಶ್ನಾತೀತ ನಾಯಕ ನಾನೇ, ಮುಂದಿನ ಸಿಎಂ ನಾನೇ ಎನ್ನುವ ಸಿದ್ದರಾಮಯ್ಯಗೆ ಒಂದು ಕ್ಷೇತ್ರ ಹುಡುಕಿ ಕೊಳ್ಳಲಾಗಲಿಲ್ಲ. ಊರಿಗೊಬ್ಳೇ ನಾನೇ ಪದ್ಮಾವತಿ ಅಂತಾ ಸಿದ್ದರಾಮಯ್ಯ ಓಡಾಡುತ್ತಿದ್ದರು. ಈಗ ಕೊನೆಗೆ ಹಳೆ ಗಂಡನ ಪಾದವೇ ಗತಿ ಅಂತಾ ವರುಣಾಗೆ ಬಂದಿದ್ದಾರೆ ಎಂದು ಸಂಸದ ಪ್ರತಾಪ್‌ ಸಿಂಹ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ತಮ್ಮ ಮಗನ ನೆಲೆ ಕಳೆದು ವರುಣಾಗೆ ಬರುವ ಸ್ಥಿತಿ ಬಂದಿದೆ. ಎಲ್ಲೆ ನಿಂತರು ಸೋಲುತ್ತೇನೆ ಎಂಬ ಪುಕ್ಕಲತನದಿಂದ ವರುಣಾಗೆ ಬರುತ್ತಿದ್ದಾರೆ. ಕಳೆದ ಬಾರಿ ಸಣ್ಣ ಅಂತರದಿಂದ ಸಿದ್ದರಾಮಯ್ಯ ತಪ್ಪಿಸಿಕೊಂಡಿದ್ದರು. ಆದರೆ ಈ ಬಾರಿ ಅವರು ಎಲ್ಲೇ ನಿಂತರು ಸೋಲುತ್ತಾರೆ ಎಂದು ಭವಿಷ್ಯ ನುಡಿದರು.

ಹೈಕಮಾಂಡ್‌ ಟಿಕೆಟ್‌ ಕೊಟ್ಟರೆ ನಾನು ಕೋಲಾರದಲ್ಲಿ ಸ್ಪರ್ಧಿಸುತ್ತೇನೆಂದು ಸಿದ್ದರಾಮಯ್ಯ ಹೇಳುತ್ತಾರೆ. ಕ್ಷೇತ್ರ ಕೊಡಲು ಹೈಕಮಾಂಡ್‌ ರೆಡಿ ಇಲ್ಲವೆಂದ ಮೇಲೆ ಯಾವ ಧೈರ್ಯದ ಮೇಲೆ ಮುಂದಿನ ಸಿಎಂ ನಾನೇ ಎನ್ನುತ್ತಾರೆ ಎಂದು ಪ್ರಶ್ನಿಸಿದ ಅವರು, ಟಿಕೆಟ್‌ ಕೊಡದೆ ಇದ್ದ ಪಕ್ಷ ಅವರಿಗೆ ಸಿಎಂ ಸ್ಥಾನ ಕೊಡುತ್ತಾ? 2018 ರಲ್ಲೇ ಸಿದ್ದರಾಮಯ್ಯ ಅವರ ರಾಜಕೀಯ ಜೀವನ ಮುಗಿದು ಹೋಗಿದೆ ಎಂದು ಲೇವಡಿ ಮಾಡಿದರು.

ವಿಧಾನಸಭೆಗೆ ಪ್ರತಾಪ್‌ ಸಿಂಹ ಸ್ಪರ್ಧಿಸುತ್ತಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ, 2029 ರವರೆಗೂ ಮೋದಿ ಅವರ ಆಡಳಿತದಲ್ಲಿ ಸಂಸದನಾಗಿ ಕೆಲಸ ಮಾಡುತ್ತೇನೆ. ಎಂಟು ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುವ ಸಂಸದನ ಸ್ಥಾನ ಬಿಟ್ಟು ಒಂದು ವಿಧಾನಸಭಾ ಕ್ಷೇತ್ರ ಹುಡುಕಿಕೊಳ್ಳುವಷ್ಟು ದಡ್ಡನಾನಲ್ಲ ಎಂದರು.

ಸಂಘ ಪರಿವಾರದವರು ಮೀಸಲಾತಿ ತೆಗೆದುಹಾಕುತ್ತಾರೆ ಎಂದು ಕಾಂಗ್ರೆಸ್‌ ನವರು ಸುಳ್ಳು ಹೇಳುತ್ತಿದ್ದರು. ಬಿಜೆಪಿ ಹಿಂದುಳಿದ ಜಾತಿ ಜನಾಂಗದ ಪರವಾಗಿದ್ದೇವೆ. ನಾವು ಕೇವಲ ಭಾಷಣ ಮಾಡುವುದಲ್ಲ. ಎಲ್ಲಾ ಸಮುದಾಯದ ಬೇಡಿಕೆಗಳನ್ನು ಸ್ಪಂದಿಸುವ ಕೆಲಸ ಮಾಡಿದ್ದೇವೆ. ಹಾಗಾಗಿ ಎಲ್ಲಾ ಸಮುದಾಯದ ಪರವಾಗಿ ಸಿಎಂಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಎಲ್ಲಾ ಸಮಾಜಗಳಿಗೂ ನ್ಯಾಯಕೊಡುವ ಪಕ್ಷ ಬಿಜೆಪಿ. ಇದನ್ನು ಬಸವರಾಜ್‌ ಬೊಮ್ಮಾಯಿ ಸಾಬೀತು ಮಾಡಿದ್ದಾರೆ. ಸಂವಿಧಾನಕ್ಕೆ ವಿರುದ್ಧವಾಗಿ ಮುಸ್ಲಿಂರು ಶೇ.4ರಷ್ಟು ಮೀಸಲಾತಿ ಪಡೆದುಕೊಂಡಿದ್ದರು. ಇದು ಹಿಂದುಳಿದ ವರ್ಗಕ್ಕೆ ಸಲ್ಲಬೇಕಾದ ಮೀಸಲಾತಿಯನ್ನ ಅನಧಿಕೃತವಾಗಿ ಕೊಡಲಾಗಿತ್ತು. ಇದೀಗ ನ್ಯಾಯಯುತವಾಗಿ ಮುಸ್ಲಿಂರ ಮೀಸಲಾತಿ ತೆಗೆದು ಒಕ್ಕಲಿಗೆ, ವೀರಶೈವರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಬರೀ ಭಾಷಣ ಮಾಡುತ್ತಿದ್ದವರಿಗೆ ಈ ಮೀಸಲಾತಿ ನಿರ್ಧಾರ ಮೂಲಕ ಅವರ ಬಾಯಿ ಮುಚ್ಚಿಸಲಾಗಿದೆ ಎಂದು ಹೇಳಿದರು.

ಬಿಜೆಪಿ ನಗರಾಧ್ಯಕ್ಷ ಟಿ.ಎಸ್‌.ಶ್ರೀವತ್ಸ, ಮೇಯರ್‌ ಶಿವಕುಮಾರ್‌, ಕಾರ್ಯದರ್ಶಿ ಸೋಮಸುಂದರ್‌, ಕೇಬಲ್‌ ಮಹೇಶ್‌ ಇದ್ದರು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.