ಮೇಲ್ದರ್ಜೆಗೇರದ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ

45 ಕೀ.ಮೀ. ದೂರ ವ್ಯಾಪ್ತಿಯ ಕುಂದಾಪುರಕ್ಕೆ ಸಾಗಬೇಕಾದ ಅನಿವಾರ್ಯತೆ ಎದುರಾಗಿದೆ

Team Udayavani, Mar 27, 2023, 6:03 PM IST

ಮೇಲ್ದರ್ಜೆಗೇರದ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ

ಕೊಲ್ಲೂರು: 5 ಗ್ರಾಮ ನಿವಾಸಿಗಳು ಅವಲಂಬಿಸಿರುವ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಕೊಲ್ಲೂರು, ಜಡ್ಕಲ್‌, ಮುದೂರು, ಅರೆಶಿರೂರು, ಗೋಳಿಹೊಳೆ, ಯಳಜಿತ್‌, ಪರಿಸರದ ಗ್ರಾಮಸ್ಥರು ಚಿಕಿತ್ಸೆಗಾಗಿ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನೇ ಅವಲಂಬಿಸಬೇಕಾಗಿದೆ. ವೈದ್ಯರಿದ್ದರೂ ವಿವಿಧ ವಿಭಾಗಗಳ ಸೌಕರ್ಯ ಕೊರತೆಯಿಂದಾಗಿ ರೋಗಿಗಳ ಚಿಕಿತ್ಸೆ ಮೇಲೆ ಪರಿಣಾಮ ಬೀರಿದೆ.

ತುರ್ತು ಚಿಕಿತ್ಸೆಗೆ ರಾತ್ರಿ ಹೊತ್ತಿನಲ್ಲಿ ಗೋಳು
ಕೊಲ್ಲೂರು ದೇಗುಲಕ್ಕೆ ವಿವಿಧ ರಾಜ್ಯಗಳ ನಾನಾ ಭಾಗದಿಂದ ಆಗಮಿಸುವ ಭಕ್ತರು ಸಹಿತ ಸ್ಥಳೀಯರಿಗೆ ಸಂಜೆಯ ಅನಂತರ ತುರ್ತು ಚಿಕಿತ್ಸೆಗೆ ವೈದ್ಯರ ಕೊರತೆಯಿಂದಾಗಿ ಸುಮಾರು 45 ಕೀ.ಮೀ. ದೂರ ವ್ಯಾಪ್ತಿಯ ಕುಂದಾಪುರಕ್ಕೆ ಸಾಗಬೇಕಾದ ಅನಿವಾರ್ಯತೆ ಎದುರಾಗಿದೆ. ಸ್ಥಳೀಯವಾಗಿ ರಾತ್ರಿ ಹೊತ್ತಿನಲ್ಲಿ ರೋಗಿಗಳಿಗೆ ಚಿಕಿತ್ಸೆಗಾಗಿ ಯಾವುದೇ ವೈದ್ಯರ ಸೇವೆ ಇಲ್ಲದಿರುವುದು ಈ ಭಾಗದ ಜನರಿಗೆ ನುಂಗಲಾರದ ತುತ್ತಾಗಿದೆ.

24×7 ಸೇವೆಗೆ ಆಗ್ರಹ
ಬಹಳಷ್ಟು ವರ್ಷಗಳಿಂದ ಇಲ್ಲಿನ ನಿವಾಸಿಗಳು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ 24×7 ಸೇವೆಗಾಗಿ ಆಗ್ರಹಿಸಿದ್ದರೂ ಇಲಾಖೆ ಈವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ರೋಗಿಗಳ ತುರ್ತು ಚಿಕಿತ್ಸೆಯ ಮೇಲೆ ಪರಿಣಾಮ ಬೀರಿದೆ. ಕೊಲ್ಲೂರು ದೇಗುಲ, ಗ್ರಾ.ಪಂ. ಆಡಳಿತ ಸೇರಿ ಸೇವಾ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಗ್ರಾಮಸ್ಥರ ಬೇಡಿಕೆ ಈಡೇರಿಸಿದಲ್ಲಿ ಅನುಕೂಲವಾದೀತು.

ಆ್ಯಂಬುಲೆನ್ಸ್‌ ಕೊರತೆ
ಲಕ್ಷಾಂತರ ಭಕ್ತರ ಧ್ಯಾನ ಕೇಂದ್ರವಾದ ಕೊಲ್ಲೂರು ಸದಾ ಜನನಿಬಿಡ ಪ್ರದೇಶವಾಗಿದ್ದು, ನಾನಾ ಕಾರಣಗಳಿಂದ ಅಸ್ವಸ್ಥರಾಗುವ ಮಂದಿಗೆ ದೂರದ ಕುಂದಾಪುರದ ಆಸ್ಪತ್ರೆಗಳಿಗೆ ಸಾಗಿಸಲು 108 ಆ್ಯಂಬುಲೆನ್ಸ್‌ ಕೊರತೆಯಿಂದಾಗಿ ಖಾಸಗಿ ವಾಹನಗಳನ್ನು ಅವಲಂಬಿಸಿ, ದುಬಾರಿ ವೆಚ್ಚ ಭರಿಸಿ ಸಾಗಬೇಕಾದ ಪರಿಸ್ಥಿತಿ ಇದೆ. ಕೊಲ್ಲೂರು ಹಾಗೂ ವಂಡ್ಸೆ ಪರಿಸರದಲ್ಲಿ ತುರ್ತು ಅಗತ್ಯತೆಗೆ ಆ್ಯಂಬುಲೆನ್ಸ್‌ ಸೇವೆ ಒದಗಿಸುವ ಬಗ್ಗೆ ಸರಕಾರ ಕ್ರಮ ಕೈಗೊಳ್ಳಬೇಕೆಂದು
ಜನರು ಆಗ್ರಹಿಸಿದ್ದಾರೆ.

ಈಗಾಗಲೇ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲ ಅಗತ್ಯತೆ ಬಗ್ಗೆ ಇಲಾಖೆಯ ಅ ಧಿಕಾರಿಗಳ ಗಮನಕ್ಕೆ ತರಲಾಗಿದೆ. ಆ್ಯಂಬುಲೆನ್ಸ್‌ ಸೇವೆ ಬಗ್ಗೆ ಕೂಡ ಕ್ರಮಕೈಗೊಳ್ಳಲಾಗುವುದು.
– ಬಿ.ಎಂ.ಸುಕುಮಾರ್‌ ಶೆಟ್ಟಿ, ಶಾಸಕರು

ಕೊಲ್ಲೂರು ಗ್ರಾಮ ನಿವಾಸಿಗಳಿಗೆ ತುರ್ತು ಅಗತ್ಯವಿರುವ ಪೂರ್ಣ ಕಾಲಿಕ ಆ್ಯಂಬುಲೆನ್ಸ್‌ ಸೇವೆ ಅಗತ್ಯವಿದೆ. 2018 ರಲ್ಲಿ ಒದಗಿಸಲಾಗಿದ್ದ ಆ್ಯಂಬುಲೆನ್ಸ್‌ ಸೇವೆ ರದ್ದುಗೊಂಡಿದೆ. ಆ ನಿಟ್ಟಿನಲ್ಲಿ ಇಲಾಖೆ, ಸರಕಾರ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ.
– ರಮೇಶ ಗಾಣಿಗ ಕೊಲ್ಲೂರು,
ತಾ.ಪಂ. ಮಾಜಿ ಸದಸ್ಯರು.

ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.