ಈ ಬಾರಿ ಐಪಿಎಲ್‌ ಮಾದರಿ ಹೇಗಿದೆ? : ಅಂಕಿ ಸಂಖ್ಯೆಗಳು

Team Udayavani, Mar 31, 2023, 7:11 AM IST

tata ipl 2023

10: ಭಾಗವಹಿಸುವ ಒಟ್ಟು ತಂಡಗಳು

74: ನಡೆಯುವ ಒಟ್ಟು ಪಂದ್ಯಗಳು

12: ಒಟ್ಟು 12 ಮೈದಾನಗಳಲ್ಲಿ ಪಂದ್ಯಗಳು ನಡೆಯುತ್ತವೆ

2: ಮಾ.31ರಿಂದ ಮೇ 29ರವರೆಗೆ ಹತ್ತಿರಹತ್ತಿರ ಎರಡು ತಿಂಗಳು ಕೂಟ ನಡೆಯಲಿದೆ. ನಿರ್ದಿಷ್ಟವಾಗಿ ಹೇಳುವುದಾದರೆ 52 ದಿನಗಳ ಕಾಲ ಪಂದ್ಯಗಳು ನಡೆಯಲಿವೆ.

ಪಂದ್ಯಗಳ ಮಾದರಿ ಹೇಗಿರುತ್ತದೆ?
ಈ ಬಾರಿ 10 ತಂಡಗಳನ್ನು ತಲಾ 5 ತಂಡಗಳ ಎರಡು ಗುಂಪುಗಳಾಗಿ ವಿಭಜಿಸಲಾಗಿದೆ. ಗುಂಪು ಹಂತದಲ್ಲಿ ತಂಡವೊಂದು ತನ್ನದೇ ಗುಂಪಿನ ಉಳಿದ 4 ತಂಡಗಳ ವಿರುದ್ಧ ತಲಾ 2 ಪಂದ್ಯಗಳನ್ನು ಆಡುತ್ತದೆ. ಅಲ್ಲಿಗೆ ತಂಡವೊಂದು 8 ಪಂದ್ಯಗಳನ್ನು ಆಡಿದಂತಾಗುತ್ತದೆ. ಅನಂತರ ಎರಡೂ ಗುಂಪುಗಳ ತಂಡಗಳ ನಡುವೆ ಪಂದ್ಯಗಳು ಆರಂಭವಾಗುತ್ತವೆ. ಅರ್ಥಾತ್‌ ಮೊದಲ ಗುಂಪಿನ ಒಂದು ತಂಡ, ಇನ್ನೊಂದು ಗುಂಪಿನ ತಂಡವೊಂದರ ವಿರುದ್ಧ ತಲಾ 2 ಪಂದ್ಯಗಳನ್ನು ಆಡುತ್ತದೆ. ಇತರ ನಾಲ್ಕು ತಂಡಗಳ ವಿರುದ್ಧ ತಲಾ 1 ಪಂದ್ಯವಾಡುತ್ತದೆ.

ಇದೇ ಮಾದರಿ ಇತರ ತಂಡಗಳಿಗೂ ಅನ್ವಯವಾಗುತ್ತದೆ. ಅಲ್ಲಿಗೆ ತಂಡವೊಂದು ಲೀಗ್‌ ಹಂತದಲ್ಲಿ 14 ಪಂದ್ಯಗಳನ್ನಾಡಿದಂತಾಗುತ್ತದೆ. ಪ್ಲೇಆಫ್ ಹಂತ ಎಂದಿನಂತೆಯೇ ಇರುತ್ತದೆ. ಅಗ್ರ 2 ಸ್ಥಾನಗಳನ್ನು ಪಡೆದ ತಂಡಗಳು ಮೊದಲ ಅರ್ಹತಾ ಪಂದ್ಯದಲ್ಲಾಡುತ್ತವೆ. ಗೆದ್ದ ತಂಡ ನೇರವಾಗಿ ಫೈನಲ್‌ಗೇರಲಿದೆ. ಸೋತ ತಂಡ 2ನೇ ಅರ್ಹತಾ ಪಂದ್ಯದಲ್ಲಾಡುತ್ತದೆ. 3 ಮತ್ತು 4ನೇ ಸ್ಥಾನ ಪಡೆದ ತಂಡಗಳು ನಿರ್ಗಮನ ಪಂದ್ಯದಲ್ಲಾಡುತ್ತವೆ. ಇಲ್ಲಿ ಗೆದ್ದ ತಂಡ 2ನೇ ಅರ್ಹತಾ ಪಂದ್ಯದಲ್ಲಿ ಆಡುತ್ತದೆ. 2ನೇ ಅರ್ಹತಾ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ಗೇರುತ್ತದೆ.
ವಿಶೇಷ ಹೊಸ ನಿಯಮಗಳು

ಇಂಪ್ಯಾಕ್ಟ್ ಪ್ಲೇಯರ್‌: ಆಸ್ಟ್ರೇಲಿಯದ ಬಿಗ್‌ಬಾಶ್‌ ಟಿ20 ಲೀಗ್‌ನಿಂದ ಪ್ರಭಾವಿತಗೊಂಡು ಐಪಿಎಲ್‌ನಲ್ಲೂ ಈ ಬಾರಿಯಿಂದ ಇಂಪ್ಯಾಕ್ಟ್ ಪ್ಲೇಯರ್‌ ನಿಯಮವನ್ನು ಅಳವಡಿಸಲಾಗಿದೆ. ತಂಡವೊಂದು ಆಡುತ್ತಿರುವಾಗ ಪರಿಸ್ಥಿತಿಗೆ ಅನುಗುಣವಾಗಿ ಒಬ್ಬ ಬದಲಿ ಆಟಗಾರನನ್ನು ಕಣಕ್ಕಿಳಿಸಬಹುದು. ಅರ್ಥಾತ್‌ 11ರ ಬಳಗದಿಂದ ಹೊರಗಿರುವ ವ್ಯಕ್ತಿಯನ್ನು ಒಳಕ್ಕೆಳೆದುಕೊಳ್ಳಬಹುದು. ಇನಿಂಗ್ಸ್‌ ಆರಂಭಕ್ಕೂ ಮುನ್ನ, ಒಂದು ಓವರ್‌ ಮುಗಿದ ಮೇಲೆ, ವಿಕೆಟ್‌ ಬಿದ್ದಾಗ, ಓವರ್‌ಗಳ ನಡುವಿನ ವಿರಾಮದಲ್ಲಿ ಬದಲಿಯನ್ನು ಪಡೆಯಬಹುದು. ಒಟ್ಟಾರೆ ಒಬ್ಬ ಬದಲಿ ಆಟಗಾರನನ್ನು ಪಡೆದುಕೊಳ್ಳುವುದಕ್ಕೆ ಮಾತ್ರ ಅವಕಾಶವಿದೆ.

* ಟಾಸ್‌ ವೇಳೆ ತಂಡದ ಅಂತಿಮಪಟ್ಟಿ ಕೊಡಬೇಕಾಗಿಲ್ಲ

* ಇದೊಂದು ಅತ್ಯಂತ ಮಹತ್ವದ ಬದಲಾವಣೆ. ಇದೀಗ ತಂಡಗಳ ನಾಯಕರು ಟಾಸ್‌ ಹಾರಿಸುವಾಗ 11 ಆಟಗಾರರ ಅಂತಿಮಪಟ್ಟಿಯನ್ನು ನೀಡಬೇಕಾಗಿಲ್ಲ. ಟಾಸ್‌ ಫ‌ಲಿತಾಂಶ ನೋಡಿಕೊಂಡು ಆಗ 11ರ ಪಟ್ಟಿಯನ್ನು ಅಂತಿಮಗೊಳಿಸಬಹುದು.

ವೈಡ್‌, ನೋಬಾಲ್‌ಗ‌ಳೂ ಡಿಆರ್‌ಎಸ್‌ ವ್ಯಾಪ್ತಿಗೆ
ತಂಡಗಳಿಗೆ ಇನ್ನೊಂದು ವಿಶೇಷ ಅವಕಾಶ ಸಿಕ್ಕಿದೆ. ಅಂಪಾಯರ್‌ಗಳು ನೀಡಿದ ವೈಡ್‌, ನೋಬಾಲ್‌ ಕರೆಗಳನ್ನು ಡಿಆರ್‌ಎಸ್‌ ಮೂಲಕ ಈಗ ಪ್ರಶ್ನಿಸಬಹುದು. ಇದು ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ವಿಶೇಷ ಪರಿಣಾಮ ಬೀರಿತ್ತು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.