ವಿಧಾನ-ಕದನ 2023: ಸುಗಮ ಸಂಚಾರಕ್ಕೆ ಬೇಕಿದೆ ಪೂರಕ ವ್ಯವಸ್ಥೆ

Team Udayavani, Mar 31, 2023, 6:22 AM IST

traffic

ಮಂಗಳೂರು: ಅಭಿವೃದ್ಧಿ ಹೊಂದುತ್ತಿರುವ ಬಂದರು ನಗರಿ ಮಂಗಳೂರಿನಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿರುವುದರಿಂದ ಇಲ್ಲಿ ಸುಗಮ ವಾಹನ ಸಂಚಾರಕ್ಕೆ ಪೂರಕ ವ್ಯವಸ್ಥೆಗಳು ಬೇಕು ಎಂಬ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಬೆಂಗಳೂರಿನಲ್ಲಿ ಮೆಟ್ರೋ ರೈಲು ಆರಂಭಗೊಂಡಾಗ ಮಂಗಳೂರಿನಂತಹ ನಗರಗಳಲ್ಲಿ ಮೆಟ್ರೋ ಲೈಟ್‌ ರೈಲು ಯೋಜನೆ ಪ್ರಸ್ತಾವಗೊಂಡಿತ್ತು.

ಬೆಂಗಳೂರಿನಲ್ಲಿರುವ ಮೆಟ್ರೋ ರೈಲಿನ ಮಾದರಿಯಲ್ಲಿ ಕಡಿಮೆ ವೆಚ್ಚದ ಮೆಟ್ರೋ ಲೈಟ್‌ ರೈಲುಗಳು ಮಂಗಳೂರಿಗೆ ಸೂಕ್ತ ಎಂಬ ಹಿನ್ನೆಲೆಯಲ್ಲಿ ಈ ಹಿಂದೊಮ್ಮೆ ರಾಜ್ಯ ಮುಂಗಡ ಪತ್ರದಲ್ಲಿಯೂ ಪ್ರಸ್ತಾವನೆ ಮಾಡಲಾಗಿತ್ತು. ಅನಂತರ ಕೇಂದ್ರ ಸರಕಾರ ದೇಶದ ಮಧ್ಯಮ ಮತ್ತು ಸಣ್ಣ ನಗರಗಳಲ್ಲಿ ಮೆಟ್ರೋ ಲೈಟ್‌ ರೈಲು ವ್ಯವಸ್ಥೆ ಅನುಷ್ಠಾನಗೊಳಿಸುವ ಯೋಜನೆ ರೂಪಿಸಿತ್ತು.

ಸ್ಕೈಬಸ್‌, ಮೋನೋ ರೈಲು
ಸ್ಕೈ ಬಸ್‌ ಯೋಜನೆಯೂ ಚರ್ಚೆಗೆ ಬಂದಿತ್ತು. ಆದರೆ ಅದು ಗೋವಾದಲ್ಲಿ ವಿಫಲ ವಾಗಿದೆ ಎಂಬ ಅಂಶಗಳ ಹಿನ್ನೆಲೆಯಲ್ಲಿ ನಿರ್ಲಕ್ಷಿಸಲ್ಪಟ್ಟಿತ್ತು. ಆ ಬಳಿಕ 2008ರ ಬಜೆಟ್‌ನಲ್ಲಿ ಮೋನೋ ರೈಲು ಪ್ರಸ್ತಾವನೆ ಮಾಡಲಾಗಿತ್ತು. ಸಾಧ್ಯತಾ ವರದಿ ತಯಾರಿಸಲು 1 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಅಶ್ವಾಸನೆ ದೊರೆತರೂ ಅದು ಕಾರ್ಯಗತಗೊಂಡಿಲ್ಲ . ಇವೆಲ್ಲದರ ನಡುವೆ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ , ಧಾರವಾಡಗಳಲ್ಲಿ ಮೋನೋ ರೈಲು ಯೋಜನೆಯನ್ನು ಕೈಗೆತ್ತಿಕೊಳ್ಳಲು ಮಲೇಷ್ಯಾದ ಸಂಸ್ಥೆಯೊಂದು ಆಸಕ್ತಿ ವಹಿಸಿತ್ತು. ಮಂಗಳೂರಿನಲ್ಲಿ 30 ಕಿ.ಮೀ. ವರೆಗೆ ಮೋನೋರೈಲು ಜಾಲ ಕಲ್ಪಿಸುವ ಬಗ್ಗೆ ಕಂಪೆನಿ ಪ್ರಸ್ತಾವನೆ ಮಾಡಿತ್ತು. ಈ ಬಗ್ಗೆ ರಾಜ್ಯ ಸರಕಾರದೊಂದಿಗೆ ಮಾತುಕತೆ ನಡೆದಿದ್ದ ಬಗ್ಗೆಯೂ ವರದಿಯಾಗಿತ್ತು.

ಏನಿದು ಮೆಟ್ರೋ ಲೈಟ್‌ ರೈಲು?
ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿ ವಾಲಯ ಮೆಟ್ರೋಲೈಟ್‌ ರೈಲು ಸಂಚಾರ ಯೋಜನೆ ರೂಪಿಸಿತ್ತು. ಮೆಟ್ರೋಲೈಟ್‌ ರೈಲಿನಲ್ಲಿ ಮೂರು ಬೋಗಿಗಳು ಇರುತ್ತವೆ. ಇದರಲ್ಲಿ 300 ಮಂದಿ ಪ್ರಯಾಣಿಸಬಹುದಾಗಿದೆ. ಪ್ರಸ್ತುತ ಇರುವ ರಸ್ತೆಗಳ ಮಧ್ಯೆ ಇರುವ ಸ್ಥಳಾವಕಾಶವನ್ನು ಉಪಯೋಗಿಸಿಕೊಂಡು ಮಾರ್ಗ ನಿರ್ಮಿಸಬಹುದಾಗಿದೆ. ಅಗತ್ಯ ಬಿದ್ದರೆ ಮೆಟ್ರೋಲೈಟ್‌ ಮಾರ್ಗಕ್ಕೆ ಬೇಲಿ ಹಾಕಿಕೊಳ್ಳ ಬಹುದು. ಈ ರೈಲು ಗಂಟೆಗೆ 60 ಕಿ.ಮೀ. ವೇಗದಲ್ಲಿ ಚಲಿಸಬಲ್ಲದು. ರೈಲಿನೊಳಗೆ ಸಿಗ್ನಲ್‌ ವ್ಯವಸ್ಥೆ ವೈಫಲ್ಯ ಅನುಭವಿಸಿದರೂ 25 ಕಿ.ಮೀ. ಚಲಿಸಬಲ್ಲದು ಎಂದು ಮಾನದಂಡದಲ್ಲಿ ವಿವರಿಸಲಾಗಿದೆ. ಸಾಮಾನ್ಯವಾಗಿ ಪ್ರಸ್ತುತ ಮಹಾನಗರಗಳಲ್ಲಿ ಇರುವ ಮೆಟ್ರೋ ರೈಲು ವ್ಯವಸ್ಥೆಗಳಿಗೆ ಹೋಲಿಸಿದರೆ ಇವುಗಳ ವೆಚ್ಚ ಶೇ.40 ರಷ್ಟು ಕಡಿಮೆ ಎಂದು ಅಂದಾಜಿಸಲಾಗಿದೆ. ಆದ್ದರಿಂದ ಸಣ್ಣ ನಗರಗಳು ಹಾಗೂ ಪಟ್ಟಣಗಳಿಗೆ ಮೆಟ್ರೋ ಲೈಟ್‌ ವ್ಯವಸ್ಥೆ ಆರ್ಥಿಕವಾಗಿ ಕಾರ್ಯಸಾಧುವಾಗಬಲ್ಲದು ಎಂಬುದು ಕೇಂದ್ರ ಸರಕಾರದ ಲೆಕ್ಕಾಚಾರವಾಗಿತ್ತು.

~ ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.