ಪೇಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯ ತಪ್ಪಿ ಬಿದ್ದು, ಗಂಭೀರಗಾಯಗೊಂಡ ವ್ಯಕ್ತಿ ಸಾವು
Team Udayavani, Apr 1, 2023, 12:40 PM IST
ಬಂಟ್ವಾಳ: ಪೇಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯ ತಪ್ಪಿ ಬಿದ್ದ ಗಂಭೀರವಾಗಿವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸೋರ್ನಾಡು ಎಂಬಲ್ಲಿ ನಡೆದಿದೆ.
ಜಕ್ರಿಬೆಟ್ಟು ಪಲ್ಲಿಕಂಡ ನಿವಾಸಿ ಪ್ರಸಿಲ್ಲಾ ವೇಗಸ್ ಅವರ ಪತಿ ರಾಬರ್ಟ್ ವೇಗಸ್ (51) ಮೃತಪಟ್ಟ ವ್ಯಕ್ತಿ.
ವಿಜಯ್ ಎಂಬ ಪೇಂಟಿಂಗ್ ಗುತ್ತಿಗೆದಾರನ ಜೊತೆ ರಾಬರ್ಟ್ ವೇಗಸ್ ಅವರು ಪೇಂಟಿಂಗ್ ಕೆಲಸಕ್ಕೆ ಇದ್ದು, ಸೋರ್ನಾಡು ಎಂಬಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಸುಮಾರು 1 ಗಂಟೆ ವೇಳೆಗೆ ಆಕಸ್ಮಿಕವಾಗಿ ಮೇಲಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಇವರನ್ನು ಚಿಕಿತ್ಸೆ ಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಗಂಭೀರವಾಗಿ ಗಾಯಗೊಂಡ ರಾಬರ್ಟ್ ಅವರು ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ವೇಳೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು