ಚುನಾವಣೆ ಹೆಸರಲ್ಲಿ ಲೂಟಿಗಳಿದ ಸೈಬರ್‌ ವಂಚಕರು!

ಚುನಾವಣಾ ಸ್ಫರ್ಧಿಗಳು, ಮತದಾರರೇ ಸೈಬರ್‌ ಕಳ್ಳರ ಟಾರ್ಗೆಟ್‌

Team Udayavani, Apr 5, 2023, 6:32 AM IST

ಚುನಾವಣೆ ಹೆಸರಲ್ಲಿ ಆಮಿಷಗಳೊಡ್ಡಿ ಲೂಟಿಗಳಿದ ಸೈಬರ್‌ ವಂಚಕರು!

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರುತ್ತಿರುವುದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್‌ ವಂಚಕರು ಮತದಾರರ ಮಾಹಿತಿ ಕಳಿಸುವುದಾಗಿ ಚುನಾವಣಾ ಸ್ಪರ್ಧಿಗಳಿಂದ ಲಕ್ಷ-ಲಕ್ಷ ಪೀಕಲು ಮುಂದಾದರೆ, ಮತ್ತೊಂದೆಡೆ ಮತದಾರರಿಗೂ ವಿವಿಧ ಪಕ್ಷಗಳ ಹೆಸರಿನಲ್ಲಿ ಲಿಂಕ್‌ ಕಳಿಸಿ ಬ್ಯಾಂಕ್‌ ಖಾತೆಗೆ ಕನ್ನ ಹಾಕಲು ಸಂಚು ರೂಪಿಸಿದ್ದಾರೆ ಎಚ್ಚರ!

ಕರ್ನಾಟಕದ ವಿವಿಧ ಕ್ಷೇತ್ರಗಳ ಚುನಾವಣಾ ಸ್ಪರ್ಧಿಗಳು ಹಾಗೂ ಮತದಾರರೇ ಸದ್ಯಕ್ಕೆ ಸೈಬರ್‌ ಕಳ್ಳರ ಟಾರ್ಗೆಟ್‌. ಚುನಾವಣೆ ಹೊಸ್ತಿಲಲ್ಲಿ ವಿವಿಧ ಆಮಿಷವೊಡ್ಡಿ ಲಕ್ಷ-ಲಕ್ಷ ಪೀಕಲು ಹೊಸ ತಂತ್ರಗಾರಿಕೆ ಕಂಡುಕೊಂಡಿದ್ದಾರೆ. ಇದುವರೆಗೆ ಬ್ಯಾಂಕ್‌ ಸಿಬ್ಬಂದಿ ಹೆಸರಲ್ಲಿ ಓಟಿಪಿ ಪಡೆದು ಖಾತೆಗೆ ಕನ್ನ, ಸೇನಾ ಸಿಬ್ಬಂದಿ, ಬೆಸ್ಕಾಂ ಸಿಬ್ಬಂದಿ ಸೋಗಿನಲ್ಲಿ ವಂಚನೆ, ನೌಕ್ರಿ, ಮ್ಯಾಟ್ರಿಮೊನಿ, ಉಡುಗೊರೆ ಇತ್ಯಾದಿ ಹೆಸರಲ್ಲಿ ದುಡ್ಡು ಲಪಟಾಯಿಸುತ್ತಿದ್ದ ಸೈಬರ್‌ ಕಳ್ಳರಿಗೆ ಕರ್ನಾಟಕ ಚುನಾವಣೆ ವರವಾಗಿ ಪರಿಣಮಿಸಿದೆ. ಈ ಬೆಳವಣಿಗೆ ಬೆನ್ನಲ್ಲೆ ಚುನಾವಣಾ ಹೆಸರಿನ ವಂಚನೆ ಬಗ್ಗೆ ಸೈಬರ್‌ ಕಳ್ಳರ ಗಾಳಕ್ಕೆ ಬೀಳದಂತೆ ಎಚ್ಚರಿಕೆ ವಹಿಸಲು ಸೈಬರ್‌ ಕ್ರೈಂ ಪೊಲೀಸರು ಸಾರ್ವಜನಿಕರಿಗೆ ಸೂಚಿಸಿದ್ದಾರೆ.

ಸೈಬರ್‌ ಕಳ್ಳರ ವಿರುದ್ಧ ಎಫ್ಐಆರ್‌:
ಆನ್‌ಲೈನ್‌ನಲ್ಲಿ ದುಡ್ಡು ಹಾಕಿ ಹಾಗೂ ನಿಮ್ಮ ಕ್ಷೇತ್ರದ ಮತದಾರರ ಮಾಹಿತಿ, ಮೊಬೈಲ್‌ ನಂಬರ್‌ ಪಡೆಯಿರಿ ಎಂಬುದಾಗಿ ಬೆಂಗಳೂರಿನ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವ ಸಂಭವನೀಯ ಅಭ್ಯರ್ಥಿಗಳಿಗೆ ಸಂದೇಶ ಕಳಿಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬಸವನಗುಡಿ ವಿಧಾನಸಭಾ ಕ್ಷೇತ್ರದ ಚುನಾವಣಾ ನೋಂದಣಿ ಅಧಿಕಾರಿ ಸೂರ್ಯಕುಮಾರಿ ಕೊಟ್ಟ ದೂರಿನ ಆಧಾರದ ಮೇರೆಗೆ ದಕ್ಷಿಣ ಸಿಇಎನ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ಈ ಸಾಲಿನ ಚುನಾವಣೆಯಲ್ಲಿ ಬಹುಮತದೊಂದಿಗೆ ಜಯಗಳಿಸಿ. ವಾಟ್ಸ್‌ಆ್ಯಪ್‌, ಎಸ್‌ಎಂಎಸ್‌, ವಾಯ್ಸ ಕರೆ ಮೂಲಕ ಮತದಾರರಿಗೆ ನಿಮ್ಮ ಚುನಾವಣಾ ಪ್ರಣಾಳಿಕೆಗಳ ಬಗ್ಗೆ ಪ್ರಚಾರ ಮಾಡಿ. ನಿಮ್ಮ ಕ್ಷೇತ್ರದಲ್ಲಿರುವ ಎಲ್ಲ ಮತದಾರರ ಮೊಬೈಲ್‌ ನಂಬರ್‌ ಸಮೇತ ಮಾಹಿತಿ ನೀಡುತ್ತೇವೆ. ಇದಕ್ಕೆ ನೀವು 25 ಸಾವಿರ ರೂ. ಪಾವತಿಸಬೇಕು ಎಂಬ ಸಂದೇಶ ಹಾಗೂ ಕೆಲ ಲಿಂಕ್‌ಗಳನ್ನು ಸೈಬರ್‌ ಕಳ್ಳರು ಕಳುಹಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ಉಲ್ಲೇಖೀಸಲಾಗಿದೆ.

ಮತದಾರರ ಗೌಪ್ಯ ಹಾಗೂ ವೈಯಕ್ತಿಕ ಮಾಹಿತಿ ದುರ್ಬಳಕೆ ಮತ್ತು ಚುನಾವಣೆಗೆ ಸ್ಪರ್ಧಿಸುವ ಸಂಭವನೀಯ ಅಭ್ಯರ್ಥಿಗಳಿಗೆ ಮೋಸವೆಸಗಿ ಹಣ ಗಳಿಸುವ ಹಾಗೂ ವಂಚಿಸುವ ಸಂಭವವಿರುತ್ತದೆ. ಈ ಮಾದರಿಯ ಸಂದೇಶ ಹಾಗೂ ಲಿಂಕ್‌ಗಳನ್ನು ಸೃಷ್ಟಿಸಿ ಹರಡಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖೀಸಲಾಗಿದೆ. ಇದೀಗ ಸೈಬರ್‌ ಕ್ರೈಂ ಪೊಲೀಸರು ಈ ಸಂದೇಶ ಹರಿಯಬಿಟ್ಟ ಸೈಬರ್‌ ಕಳ್ಳರಿಗೆ ಶೋಧ ಮುಂದುವರಿಸಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ಇದೇ ಮಾದರಿಯಲ್ಲಿ ಹಲವು ಜನರಿಗೆ ಸಂದೇಶ ಕಳಿಸಿ ವಂಚಿಸಲು ಸೈಬರ್‌ ಚೋರರು ಮುಂದಾಗಿರುವ ಬಗ್ಗೆ ಪೊಲೀಸರುಗೆ ಸುಳಿವು ಸಿಕ್ಕಿದೆ.

ನಕಲಿ ಸಂದೇಶ ಕಳುಹಿಸಿ ವಂಚನೆ
ಜಾರ್ಖಂಡ್‌, ದೆಹಲಿ, ಪಶ್ಚಿಮ ಬಂಗಾಳ, ರಾಜಸ್ಥಾನ ಸೇರಿದಂತೆ ಉತ್ತರ ಭಾರತದಲ್ಲಿ ಸಕ್ರಿಯವಾಗಿರುವ ಸೈಬರ್‌ ಕಳ್ಳರ ಗ್ಯಾಂಗ್‌ಗಳು ದೇಶದ ವಿವಿಧ ರಾಜ್ಯಗಳ ಚುನಾವಣೆ ಬೆಳವಣಿಗೆ ಗಮನಿಸಿಕೊಂಡು ಅಮಾಯಕರಿಂದ ದುಡ್ಡು ಲಪಟಾಯಿಸಲು ಸಂಚು ರೂಪಿಸಿದ್ದಾರೆ. ಸದ್ಯ ಕರ್ನಾಟಕದ ಅಮಾಯಕ ಜನರೇ ಸೈಬರ್‌ ಕಳ್ಳರ ಟಾರ್ಗೆಟ್‌. ಮತದಾರರ ಮೊಬೈಲ್‌ಗೆ ವಿವಿಧ ಪಕ್ಷಗಳ ಹೆಸರಿನಲ್ಲಿ ನಕಲಿ ಸಂದೇಶ ಕಳುಹಿಸಿ ದುಡ್ಡು ಕೊಡುವುದಾಗಿ ಆಮಿಷವೊಡ್ಡುವ ಸಾಧ್ಯತೆಗಳಿವೆ. ಸೈಬರ್‌ ಕಳ್ಳರ ಮಾತಿನ ಮೋಡಿಗೆ ಮರುಳಾಗಿ ಅವರು ಕಳುಹಿಸುವ ಲಿಂಕ್‌ ಕ್ಲಿಕ್‌ ಮಾಡುವುದು, ಒಟಿಪಿ, ಬ್ಯಾಂಕ್‌ ಸೇರಿದಂತೆ ಇನ್ನೀತರ ಗೌಪ್ಯ ಮಾಹಿತಿ ನೀಡಿದರೆ ನಿಮ್ಮ ಬ್ಯಾಂಕ್‌ ಖಾತೆಯಲ್ಲಿರುವ ದುಡ್ಡು ಕ್ಷಣ ಮಾತ್ರದಲ್ಲೇ ಸೈಬರ್‌ ವಂಚಕರ ಖಜಾನೆ ಸೇರುವುದು ಗ್ಯಾರೆಂಟಿ.

ಸೈಬರ್‌ ಕಳ್ಳರ ಬಗ್ಗೆ ಪೊಲೀಸರು ಸದಾ ನಿಗಾ ವಹಿಸುತ್ತಿದ್ದಾರೆ. ಸಾರ್ವಜನಿಕರು ತಮ್ಮ ವೈಯಕ್ತಿಕ ಮಾಹಿತಿಗಳನ್ನು ಅಪರಿಚಿತರ ಜೊತೆಗೆ ಹಂಚಿಕೊಳ್ಳಬೇಡಿ. ಆತಂಕಪಡುವ ಅಗತ್ಯವಿಲ್ಲ.
– ಕೃಷ್ಣಕಾಂತ್‌, ಡಿಸಿಪಿ, ದಕ್ಷಿಣ ವಿಭಾಗ

2020 ರಿಂದ 2023ರವರೆಗೆ ರಾಜ್ಯದಲ್ಲಿ ದಾಖಲಾದ ಸೈಬರ್‌ ಕ್ರೈಂ ಪ್ರಕರಣಗಳ ಅಂಕಿ-ಅಂಶ
ವರ್ಷ-ಪ್ರಕರಣ-ಆರೋಪಿಗಳು- ಬಂಧಿತರು
2020-10,738-4,751-584
2021-8,132-3,501-525
2022-12,551-2,701-371
2023(ಫೆ,)-2,695-172-23

-ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.