ಕ್ಷುಲ್ಲಕ ವಿಚಾರಕ್ಕೆ ಬಾಲಕನ ಕೊಲೆ: ಸೆರೆ 

ಕುದುರೆ ಸವಾರಿಗೆ ಅವಕಾಶ ನೀಡದಕ್ಕೆ ಕೊಲೆ

Team Udayavani, Apr 10, 2023, 2:24 PM IST

ಕ್ಷುಲ್ಲಕ ವಿಚಾರಕ್ಕೆ ಬಾಲಕನ ಕೊಲೆ: ಸೆರೆ 

ಬೆಂಗಳೂರು: ಇತ್ತೀಚೆಗೆ ಪಿಳ್ಳಣ್ಣಗಾರ್ಡನ್‌ ಸಮೀಪದ ರೈಲು ಹಳಿ ಸಮೀಪದಲ್ಲಿ ಸತೀಶ್‌(15) ಎಂಬಾತನ ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಕಾಡುಗೊಂಡನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆ.ಜಿ.ಹಳ್ಳಿಯ ಮುಸ್ಲಿಂ ಕಾಲೋನಿ ನಿವಾಸಿ ಸುಹೇಲ್‌ ಉಲ್ಲಾ ಷರೀಫ್(19), ಪಿಳ್ಳಣ್ಣ ಗಾರ್ಡನ್‌ ನಿವಾಸಿ ಸೈಯದ್‌ ಶೋಯಿಬ್‌(20) ಮತ್ತು ಮೊಹಮ್ಮದ್‌ ಹುಸೇನ್‌ (18) ಬಂಧಿತರು. ಆರೋಪಿಗಳು ಏ.2ರಂದು ಸತೀಶ್‌ ಎಂಬಾತನನ್ನು ದೊಣ್ಣೆಗಳಿಂದ ಹೊಡೆದು ಕೊಲೆಗೈದು, ರೈಲು ಹಳಿ ಸಮೀಪದಲ್ಲಿ ಮೃತ ದೇಹ ಎಸೆದು ಹೋಗಿದ್ದರು. ಆರೋಪಿಗಳ ವಿಚಾರಣೆಯಲ್ಲಿ ಕುದುರೆ ಸವಾರಿಗೆ ಅವಕಾಶ ನೀಡದಕ್ಕೆ ಕೊಲೆ ಮಾಡಲಾಗಿದೆ ಎಂಬುದು ಬೆಳಕಿಗೆ ಬಂದಿದೆ ಎಂದು ಪೂರ್ವ ವಿಭಾಗ ಡಿಸಿಪಿ ಡಾ.ಭೀಮಾಶಂಕರ್‌ ಗುಳೇದ್‌ ತಿಳಿಸಿದರು.

ಪಿಳ್ಳಣ್ಣ ಗಾರ್ಡನ್‌ ಬಳಿ ಕುದುರೆ ಸಾಕಿಕೊಂಡಿದ್ದ ಸತೀಶ್‌, ಕುದುರೆ ಮೇಲೆ ಜನರನ್ನು ಕೂರಿಸಿಕೊಂಡು ಒಂದು ರೌಂಡ್‌ ಹಾಕಿ ಹಣ ಪಡೆಯುತ್ತಿದ್ದ. ಅದರಿಂದಲೇ ಕುಟುಂಬ ನಿರ್ವಹಿಸುತ್ತಿದ್ದ. ಎರಡು ವಾರಗಳ ಹಿಂದೆ ರಿಚರ್ಡ್‌ ಪಾರ್ಕ್‌ ಬಳಿ ಬಂದ ಸುಹೇಲ್‌ ಉಲ್ಲಾ ಷರೀಫ್, ಕುದುರೆ ಮೇಲೆ ಹತ್ತಿ ಫೋಟೋ ತೆಗೆದುಕೊಳ್ಳಬೇಕು. ಕುದುರೆ ಕೊಡುವಂತೆ ಕೇಳಿದ್ದಾನೆ. ಆಗ ಸತೀಶ್‌ ನಿರಾಕರಿಸಿದ್ದ. ಅದರಿಂದ ಆಕ್ರೋಶಗೊಂಡ ಆರೋಪಿ, ಕಪಾಳಮೋಕ್ಷ ಮಾಡಿದ್ದ. ಅದೇ ದ್ವೇಷದಿಂದ 8 ದಿನಗಳ ಹಿಂದೆ ಲಿಂಗರಾಜುಪುರ ಬಳಿ ಬಂದಿದ್ದ ಸತೀಶ್‌ ಮತ್ತು ಸುಹೇಲ್‌ ಉಲ್ಲಾ ಷರೀಫ್ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ತನ್ನ ಇತರೆ ಸಹಚರರ ಜತೆ ಸೇರಿಕೊಂಡು ಬಿಲಾಲ್‌ ಮಸೀದಿ ಬಳಿ ಸತೀಶ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಪಿಳ್ಳಣ್ಣಗಾರ್ಡನ್‌ ರೈಲು ಹಳಿ ಬಳಿ ಕರೆದೊಯ್ದು ದೊಣ್ಣೆಗಳಿಂದ ಹೊಡೆದು ಕೊಲೆಗೈದು, ಮೃತದೇಹ ಎಸೆದು ಪರಾರಿಯಾಗಿದ್ದರು ಎಂದು ಅವರು ಹೇಳಿದರು.

ಆರೋಪಿಗಳ ಪತ್ತೆಗಾಗಿ ಸುಮಾರು 60-70 ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಲಾಗಿದ್ದು, ಘಟನೆಗೂ ಮೊದಲ ಒಂದು ವಾರದ ಹಿಂದಿನ ಸತೀಶ್‌ನ ದಿನಚರಿ ಮಾಹಿತಿ ಸಂಗ್ರಹಿಸಿದಾಗ ಕೊಲೆ ರಹಸ್ಯ ಬಯಲಾಗಿದೆ. ಪ್ರಮುಖವಾಗಿ ಆರೋಪಿಗಳು ಸತೀಶ್‌ ಜತೆ ನಡೆದುಕೊಂಡು ಹೋಗುತ್ತಿದ್ದ ದೃಶ್ಯ ಪತ್ತೆಯಾಗಿತ್ತು. ಈ ಆಧಾರದ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಾಯಿಬಿಟ್ಟಿದ್ದಾರೆ ಎಂದು ಡಿಸಿಪಿ ಭೀಮಾಶಂಕರ್‌ ಗುಳೇದ್‌ ಹೇಳಿದರು.

ಕಾಡುಗೊಂಡನಹಳ್ಳಿ ಠಾಣಾಧಿಕಾರಿ ರೋಹಿತ್‌ ನೇತೃತ್ವದ ಪಿಎಸ್‌ಐ ಅಮರೇಶ್‌, ದುಂಡಪ್ಪ ನೇಗಿನಾಳ್‌ ಹಾಗೂ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದಾರೆ.

ಟಾಪ್ ನ್ಯೂಸ್

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.