ಕುಣಿಗಲ್‌ ಜೆಡಿಎಸ್‌ನಲ್ಲಿ ತಂದೆ, ಮಗನಿಂದ ನಾಮಪತ್ರ


Team Udayavani, Apr 20, 2023, 4:29 PM IST

ಕುಣಿಗಲ್‌ ಜೆಡಿಎಸ್‌ನಲ್ಲಿ ತಂದೆ, ಮಗನಿಂದ ನಾಮಪತ್ರ

ಕುಣಿಗಲ್‌: ಕುಣಿಗಲ್‌ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿ ಮಾಜಿ ಸಚಿವ ಡಿ.ನಾಗರಾಜಯ್ಯ ಹಾಗೂ ಅವರ ಪುತ್ರ ಜಿಪಂ ಮಾಜಿ ಅಧ್ಯಕ್ಷ ಡಾ.ಬಿ.ಎನ್‌.ರವಿ ಅವರು ಪಟ್ಟಣದಲ್ಲಿ ಬೃಹತ್‌ ಮೆರವಣಿಗೆ ಮೂಲಕ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ತೆರಳಿ ಬುಧವಾರ ಪ್ರತ್ಯೇಕ ಉಮೇದುವಾರಿಕೆ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ಮುನ್ನ ಶ್ರೀ ಕ್ಷೇತ್ರ ಎಡಿಯೂರು ಸಿದ್ದಲಿಂಗೇಶ್ವರಸ್ವಾಮಿ, ಪಟ್ಟಣದ ಗ್ರಾಮದೇವತೆಗೆ ಪೂಜೆ ಸಲ್ಲಿಸಿದರು. ಬಳಿಕ ಮಾಜಿ ಸಚಿವ ಡಿ.ನಾಗರಾಜಯ್ಯ, ಡಾ.ರವಿ ಅವರು ಅಪಾರ ಕಾರ್ಯಕರ್ತರೊಂದಿಗೆ ಪಟ್ಟಣದ ಪ್ರವಾಸಿ ಮಂದಿರದಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಬೆಸ್ಕಾಂ ಕಚೇರಿವರೆಗೆ ಬಂದರು, ಬಳಿಕ ತಂದೆ ಮಗ ತಾಲೂಕು ಆಡಳಿತ ಸೌಧಕ್ಕೆ ತೆರಳಿ, ಚುನಾವಣಾ ಕಾರಿ ಕೆ.ಎಚ್‌.ರವಿ ಅವರಿಗೆ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಿದರು.

ತಲೆ ಸುತ್ತಿ ಕುಸಿದು ಬಿದ್ದ ಜೆಡಿಎಸ್‌ ಅಧ್ಯಕ್ಷ: ತಾಲೂಕು ಜೆಡಿಎಸ್‌ ಅಧ್ಯಕ್ಷ ಬಿ.ಎನ್‌.ಜಗದೀಶ್‌ ಇಲ್ಲಿನ ಬೆಸ್ಕಾಂ ಕಚೇರಿ ಬಳಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ ಬಿಸಿಲಿನ ತಾಪಮಾನಕ್ಕೆ ತಲೆಸುತ್ತಿ ಕುಸಿದು ಬಿದ್ದರು. ತಕ್ಷಣ ಜೆಡಿಎಸ್‌ ಅಭ್ಯರ್ಥಿ ಡಾ.ರವಿ ಮತ್ತಿತರರು ತಂಪು ಪಾನೀಯ ಹಾಗೂ ನೀರನ್ನು ಜಗದೀಶ್‌ ಅವರಿಗೆ ಕುಡಿಸಿ ಗಾಳಿ ಬೀಸಿದರು, ಬಳಿಕ 10 ನಿಮಿಷದ ಬಳಿಕ ಮತ್ತೆ ಜಗದೀಶ್‌ ಭಾಷಣ ಮುಂದು ವರಿಸಿದರು.

ಜೆಡಿಎಸ್‌ ಪಕ್ಷದ ಪಂಚರತ್ನ ಕಾರ್ಯಕ್ರಮ ಜನರಿಗೆ ಉಪಯುಕ್ತವಾಗಿದೆ. ಹೀಗಾಗಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ನಿರೀಕ್ಷೆಯಂತೆ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ನಾಗರಾಜಯ್ಯ ಅವರ ಕುಟುಂಬ ಸ್ಥರು ಜೆಡಿಎಸ್‌ನ ಅಧಿಕೃತ ಅಭ್ಯರ್ಥಿ ಡಾ.ಬಿ.ಎನ್‌. ರವಿ ಅವರನ್ನು ಆಯ್ಕೆ ಮಾಡಿಕೊಂಡಿದ್ದು, ಟಿಕೆಟ್‌ ಅವರಿಗೆ ಕೊಡುವಂತೆ ವರಿಷ್ಠರಲ್ಲಿ ಮನವಿ ಮಾಡಿ ದ್ದಾರೆ, ಹೆ„ಕಮಾಂಡ್‌ ಇದರ ಘೋಷಣೆ ಮಾಡು ವುದು ಬಾಕಿ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪುರಸಭಾ ಮಾಜಿ ಅಧ್ಯಕ್ಷ ಕೆ.ಎಲ್‌. ಹರೀಶ್‌, ಆಯಿಷಾಬಿ, ಜಿ.ಪಂ ಮಾಜಿ ಸದಸ್ಯ ಕೆ.ಎಚ್‌.ಶಿವಣ್ಣ. ಎನ್‌.ಆರ್‌.ಲಕ್ಷ್ಮೀ ನಾರಾಯಣ, ತಾಪಂ ಮಾಜಿ ಸದಸ್ಯ ಜಿಯಾಉಲ್ಲಾ, ಮುಖಂಡ ಕೆ.ಆರ್‌.ಗುರುಪ್ರಸಾದ್‌ ಇತರರಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.