ವಿಧಾನಸಭಾ ಚುನಾವಣೆ ಫಲಿತಾಂಶ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಗಣ್ಯರಾದ ಅನ್ಯರು!


Team Udayavani, May 14, 2023, 7:32 AM IST

ವಿಧಾನಸಭಾ ಚುನಾವಣೆ ಫಲಿತಾಂಶ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಗಣ್ಯರಾದ ಅನ್ಯರು!

ಮಂಗಳೂರು: ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲ್ಪಟ್ಟಿದ್ದ ವಿಧಾನಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಜಯದ ಹುಮ್ಮಸ್ಸಿನಲ್ಲಿದ್ದಾರೆ. ಆದರೆ ಜಿಲ್ಲೆಯಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು ಹೊರತುಪಡಿಸಿ ಕಣದಲ್ಲಿದ್ದ ಇತರರು ಕಳೆಕುಂದಿಸಿಕೊಂಡಿದ್ದಾರೆ.

ಉಳಿದೆಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಬಿಜೆಪಿ ನಡುವೆ ನೇರ ಮುಖಾಮುಖೀ ಫ‌ಲಿತಾಂಶದಿಂದ ಸ್ಪಷ್ಟವಾಗಿದ್ದು, ಈ ಬಾರಿ ಮಂಗಳೂರು ನಗರ ಉತ್ತರದಿಂದ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ ಮೊದಿನ್‌ ಬಾವಾ ಕೂಡ ಕ್ಷೇತ್ರದಲ್ಲಿ 5,256 ಮತಗಳನ್ನು ಗಳಿಸುವುದರಷ್ಟರಲ್ಲೇ ಯಶಸ್ವಿಯಾದರು.

ಮಂಗಳೂರು ಕ್ಷೇತ್ರದಲ್ಲಿ ಎಸ್‌ಡಿಪಿಐಯ ರಿಯಾಝ್ ಪರಂಗಿಪೇಟೆಯ ಅವರು 15,054 ಮತಗಳನ್ನು ಪಡೆಯಲು ಯಶಸ್ವಿಯಾಗಿದ್ದರೂ ಕ್ಷೇತ್ರದ ವಿಜಯಿ ಅಭ್ಯರ್ಥಿಯ ಮತಗಳ ಮೇಲೆ ಪರಿಣಾಮ ಬೀರಲು ಸಾಧ್ಯವಾಗಿಲ್ಲ. ಬಂಟ್ವಾಳದಲ್ಲಿ ಎಸ್‌ಡಿಪಿಐನ ಇಲ್ಯಾಸ್‌ ಮುಹಮ್ಮದ್‌ ತುಂಬೆ 5,436 ಮತಗಳನ್ನು ಪಡೆದುಕೊಂಡರು. ಬೆಳ್ತಂಗಡಿಯಲ್ಲಿ ಎಸ್‌ಡಿಪಿಐನ ಅಕºರ್‌ ಬೆಳ್ತಂಗಡಿ ಅವರು 2,513 ಮತಗಳನ್ನು ಪಡೆದಿದ್ದರೆ, ಮೂಡುಬಿದಿರೆಯಲ್ಲಿ ಎಸ್‌ಡಿಪಿಐನ 3,617 ಹಾಗೂ ಜೆಡಿಎಸ್‌ನ ಡಾ| ಅಮರಶ್ರೀ ಅವರು 1,533 ಮತಗಳಿಗೆ ತೃಪ್ತಿ ಪಟ್ಟಿದ್ದಾರೆ. ಪುತ್ತೂರಿನಲ್ಲಿ ಎಸ್‌ಡಿಪಿಐನ ಶಾಫಿ ಬೆಳ್ಳಾರೆ 2,788 ಮತಗಳನ್ನು ಪಡೆದಿದ್ದಾರೆ.

ಇನ್ನುಳಿದಂತೆ ಕಣದಲ್ಲಿದ್ದ ಆಪ್‌ ಹಾಗೂ ಪಕ್ಷೇತರರು ಸಹಿತ ಇತರ ಯಾವುದೇ ಅಭ್ಯರ್ಥಿಗಳ ಸ್ಪರ್ಧೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ.

ಸುಳ್ಯ ಕ್ಷೇತ್ರದಲ್ಲಿ ಜೆಡಿಎಸ್‌ನ ಎಚ್‌.ಎಲ್‌. ವೆಂಕಟೇಶ್‌ 1,850, ಆಪ್‌ನ ಸುಮನ ಬೆಳ್ಳಾರ್‌ಕರ್‌ 1,587 ಮತ ಪಡೆದಿದ್ದಾರೆ. ಕಳೆದ ಬಾರಿ ಬೆಳ್ತಂಗಡಿಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಸುಮತಿ ಎಸ್‌. ಹೆಗ್ಡೆ ಈ ಬಾರಿ ಮಂಗಳೂರು ದಕ್ಷಿಣದಿಂದ ಸ್ಪರ್ಧಿಸಿ 709 ಮತಗಳಿಗೆ ತೃಪ್ತಿ ಪಟ್ಟಿದ್ದಾರೆ. ಇತರ ಯಾರೂ ಮೂರಂಕಿಯನ್ನು ದಾಟುವಲ್ಲಿ ಯಶಸ್ವಿಯಾಗಿಲ್ಲ.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.