ನಕ್ಸಲರ ಸ್ಫೋಟಕದಿಂದ ನಾಗರಿಕ ಸಾವು
Team Udayavani, May 26, 2023, 6:22 AM IST
ರಾಂಚಿ: ಛತ್ತೀಸ್ಗಢದ ಪಶ್ಚಿಮ ಸಿಂಗಭೂಮ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಹುದುಗಿಸಿದ್ದ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಗೊಂಡಿದ್ದು, ಘಟನೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿರುವ ಹಾಗೂ ಮತ್ತೂಬ್ಬರು ಗಾಯಗೊಂಡಿದ್ದಾರೆ. ಲುಯಿಯಾ ಗ್ರಾಮದ ನಿವಾಸಿಗಳಾದ 50 ವರ್ಷದ ಖಂಡೆ ಲಗೂರಿ ಹಾಗೂ ಅವರ ಪತ್ನಿ ಇಬ್ಬರೂ ಯಾವುದೋ ಎಲೆಗಳ ಸಂಗ್ರಹಕ್ಕೆಂದು ಬುಧವಾರ ಅರಣ್ಯಕ್ಕೆ ತೆರಳಿದ್ದರು. ಈ ವೇಳೆ ಐಇಡಿ ಸ್ಫೋಟಗೊಂಡಿದೆ. ಮರುದಿನ ಅಂದರೆ ಗುರುವಾರ ವಿಚಾರ ಗ್ರಾಮಸ್ಥರಿಗೆ ತಿಳಿದ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬಾಂಬ್ ನಿಷ್ಕ್ರಿಯ ದಳ ಹಾಗೂ ಸಿಆರ್ಪಿಎಫ್ ಸಿಬಂದಿ ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತೀವ್ರವಾಗಿ ಗಾಯಗೊಂಡಿದ್ದ ಹಿನ್ನೆಲೆಯಲ್ಲಿ ಖಂಡೆ ಮೃತಪಟ್ಟಿದ್ದಾರೆ. ಅವರ ಪತ್ನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.