ಸೇವೆಗೆ ತೆರೆದುಕೊಳ್ಳದ ಕಾಪು ಮಿನಿ ವಿಧಾನ ಸೌಧ

ಉದ್ಘಾಟನೆಗೊಂಡು ಎರಡು ತಿಂಗಳು ಕಳೆಯಿತು

Team Udayavani, May 28, 2023, 4:23 PM IST

ಸೇವೆಗೆ ತೆರೆದುಕೊಳ್ಳದ ಕಾಪು ಮಿನಿ ವಿಧಾನ ಸೌಧ

ಕಾಪು: ನೂತನವಾಗಿ ನಿರ್ಮಾಣಗೊಂಡ ಕಾಪು ಮಿನಿ ವಿಧಾನಸೌಧ (ತಾಲೂಕು ಆಡಳಿತ ಸೌಧ) ಉದ್ಘಾಟನೆಗೊಂಡು ಎರಡು ತಿಂಗಳು ಕಳೆದರೂ ನೂತನ ಕಟ್ಟಡ ಇನ್ನೂ ಸಾರ್ವಜನಿಕ ಸೇವೆಗೆ ತೆರೆದುಕೊಂಡಿಲ್ಲ. ಉದ್ಘಾಟನೆಗೊಂಡ ಬಳಿಕ ಒಂದೂವರೆ ತಿಂಗಳು ಚುನಾವಣ ಕೆಲಸಕ್ಕೆ ಬಳಕೆಯಾದ ತಾಲೂಕು ಆಡಳಿತ ಸೌಧ ಮತ್ತೆ ಎಂದಿನಂತೆ ಪರಿಸ್ಥಿತಿ ಇದೆ. ಕೂಡಲೇ ಸಂಬಂಧಪಟ್ಟ ಕಚೇರಿಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಿ ಒಂದೇ ಸೂರಿನಡಿ ಸರಕಾರಿ ಸೇವೆ ಒದಗಿಸಬೇಕೆನ್ನುವ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

2018ರಲ್ಲಿ ಕಾಪು ತಾಲೂಕು ಉದ್ಘಾಟನೆಗೊಂಡಿದ್ದು, ಅಂದೇ ತಾಲೂಕು ಕಚೇರಿ ಕಟ್ಟಡಕ್ಕೂ ಶಿಲಾನ್ಯಾಸ ನೆರವೇರಿತ್ತಾದರೂ ಕಾಮಗಾರಿ ಮಾತ್ರ ಆರಂಭಗೊಂಡಿರಲಿಲ್ಲ. 2019-20ರಲ್ಲಿ 10 ಕೋ. ರೂ. ಅನುದಾನ ಸಹಿತವಾಗಿ ಮಿನಿ ವಿಧಾನಸೌಧ ಮಂಜೂರಾಗಿದ್ದು 2021ರಲ್ಲಿ ಶಿಲಾನ್ಯಾಸ ನೆರವೇರಿ, ಕಾಮಗಾರಿ ಆರಂಭಗೊಂಡಿತ್ತು. 2023 ಮಾ. 17ರಂದು ಕಾಪು ಮಿನಿ ವಿಧಾನಸೌಧ (ತಾಲೂಕು ಆಡಳಿತ ಸೌಧ) ಉದ್ಘಾಟನೆಗೊಂಡಿತು.

ತಪ್ಪದ ಅಲೆದಾಟ
ಒಂದೇ ಸೂರಿನಡಿಯಲ್ಲಿ ಎಲ್ಲ ಇಲಾಖೆಗಳ ಸೇವೆ ನೀಡಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ 2018ರಲ್ಲೇ ಕಾಪು ತಾಲೂಕು ಘೋಷಣೆಯಾಗಿತ್ತಾದರೂ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲ ಕಚೇರಿಗಳು ಒಂದೇ ಸೂರಿನಡಿ ಬಾರದೇ ಇದ್ದುದರಿಂದ ಜನರು ತಮ್ಮ ಕೆಲಸ ಕಾರ್ಯಗಳಿಗಾಗಿ ಅಲ್ಲಿಂದ ಇಲ್ಲಿಗೆ – ಇಲ್ಲಿಂದ ಅಲ್ಲಿಗೆ ಅಲೆದಾಡಬೇಕಾದ ಅನಿವಾರ್ಯತೆಯಿತ್ತು. ರಾ.ಹೆ. 66ರ ಬಳಿಯ ಪುರಸಭೆ ಹಳೆ ಕಟ್ಟಡದಲ್ಲಿ ತಾಲೂಕು ಆಡಳಿತ ಕಚೇರಿ, ತಹಶೀಲ್ದಾರ್‌ ಕಚೇರಿ ತೆರೆದಿದ್ದರೂ ಕಂದಾಯ ನಿರೀಕ್ಷಕರ ಕಚೇರಿ ಮಾತ್ರ ಪುರಸಭೆ ಆಡಳಿತ ಸೌಧ, ಸರ್ವೇ ಶಾಖೆ ಕಾಪು ಬಂಗ್ಲೆ ಮೈದಾನಲ್ಲಿ ಕಾರ್ಯಾಚರಿಸುತ್ತಿತ್ತು. ದಾಖಲೆಗಳ ಕೊಠಡಿ (ರೆಕಾರ್ಡ್‌ ರೂಂ) ಉಡುಪಿಯಲ್ಲೇ ಉಳಿದು ಬಿಟ್ಟಿತ್ತು. ಹಾಗಾಗಿ ಕಂದಾಯ ಇಲಾಖೆಗೆ ಸಂಬಂಧಪಟ್ಟ ಕೆಲಸ ಕಾರ್ಯಗಳಿಗೆ ವಿವಿಧ ಗ್ರಾಮಗಳಿಂದ ತಾಲೂಕು ಕೇಂದ್ರಕ್ಕೆ ಬರುವ ಜನರಿಗೆ ಅಲೆದಾಟ ತಪ್ಪಿರಲಿಲ್ಲ.

10 ಕೋಟಿ ರೂ. ವೆಚ್ಚದ ನೂತನ ಕಟ್ಟಡ
ಕಾಪು ಬಂಗ್ಲೆ ಮೈದಾನದ ಬಳಿ 3.42 ಎಕರೆ ಜಮೀನಿನಲ್ಲಿ ಸುಸಜ್ಜಿತ ಮಿನಿ ವಿಧಾನಸೌಧ – ತಾಲೂಕಾಡಳಿತ ಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಮಂಜೂರುಗೊಂಡು ಕಟ್ಟಡ ನಿರ್ಮಾಣಗೊಂಡಿದೆ. ನೆಲಮಹಡಿ ಮತ್ತು ಮೊದಲ ಮಹಡಿಯಲ್ಲಿ ಒಟ್ಟು 2.857 ಚ. ಮೀ. ವಿಸ್ತಿರ್ಣದ ಸುಸಜ್ಜಿತ ನೂತನ ಕಟ್ಟಡ ನಿರ್ಮಾಣಗೊಂಡಿದೆ.

ನೂತನ ಸೌಧದಲ್ಲಿ ತಹಶೀಲ್ದಾರರ ಕಚೇರಿ ಸೇರಿದಂತೆ ಕೆಲವೇ ಕೆಲವು ಕಚೇರಿಗೆ ಅವಕಾಶವಿದೆ. ತಾಲೂಕು ಮಟ್ಟದ ಎಲ್ಲ ಕಚೇರಿಗಳು ಕಾಪುವಿಗೆ ಬರುವಂತಾಗಲಿ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ತಾಲೂಕು ಆಡಳಿತ ಸೌಧಕ್ಕೆ ಬೇಕಾದ ಮೂಲಸೌಕರ್ಯಗಳ ಜೋಡಣೆ, ಫರ್ನಿಚರ್‌, ತಾಂತ್ರಿಕ ವಯರಿಂಗ್‌ ಇತ್ಯಾದಿ ಜೋಡಣೆ ಬಾಕಿಯಿರುವುದರಿಂದ ಕಚೇರಿಗಳನ್ನು ಸ್ಥಳಾಂತರಗೊಳಿಸಿಲ್ಲ. ಜೂನ್‌ ತಿಂಗಳಿನಲ್ಲಿ ತಾಲೂಕು ಆಡಳಿತಕ್ಕೆ ಸಂಬಂಧಪಟ್ಟ ಬಹುತೇಕ ಕಚೇರಿಗಳು ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡು ಸಾರ್ವಜನಿಕರಿಗೆ ಸೇವೆ ನೀಡಲಿವೆ.
– ಶ್ರೀನಿವಾಸ ಮೂರ್ತಿ ಕುಲಕರ್ಣಿ, ತಹಶೀಲ್ದಾರರು, ಕಾಪು ತಾಲೂಕು

ಈ ವಾರದಲ್ಲೇ ಶಾಸಕರ ಕಚೇರಿಗೆ ಪ್ರವೇಶೋತ್ಸವ ಮಾಡುವ ಇರಾದೆಯಿತ್ತು. ಅಧಿವೇಶನದ ಕಾರಣದಿಂದಾಗಿ ದಿನ ಮುಂದೂಡಲಾಗಿದ್ದು ಮುಂದಿನ ವಾರ ಶಾಸಕರ ಕಚೇರಿ ಉದ್ಘಾಟಿಸಲಾಗುವುದು. ತಾಲೂಕು ಆಡಳಿತ ಸೌಧದಲ್ಲಿ ಕಂದಾಯ ಇಲಾಖೆಗೆ ಸಂಬಂಧಪಟ್ಟ ಎಲ್ಲ ಕಚೇರಿಗಳೂ ಶೀಘ್ರವಾಗಿ ಜನ ಸೇವೆಗೆ ತೆರೆದುಕೊಳ್ಳಲಿದ್ದು ತಾಲೂಕಿನ ಜನತೆಗೆ ಅಗತ್ಯವಾಗಿರುವ ಸಬ್‌ ರಿಜಿಸ್ಟ್ರಾರ್‌ ಕಚೇರಿ ಸಹಿತ ತಾಲೂಕು ಮಟ್ಟದ ಎಲ್ಲ ಇಲಾಖೆಗಳು, ಕಚೇರಿಗಳನ್ನೂ ಆದ್ಯತೆಯ ಮೇರೆಗೆ ತಾಲೂಕು ಕೇಂದ್ರಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು.
-ಗುರ್ಮೆ ಸುರೇಶ್‌ ಶೆಟ್ಟಿ, ಶಾಸಕರು, ಕಾಪು

-ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.