Amritdhare: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ ಅಮೃತಧಾರೆ ಕಾರ್ಯಾಚರಣೆ

ಶಿಶು ಮರಣ ಪ್ರಮಾಣ ಇಳಿಸಲು ಯತ್ನ - ರಾಜ್ಯದಲ್ಲಿ ಶೇ.68ರಷ್ಟು ಜೀವಾಮೃತ ಕೊರತೆ

Team Udayavani, Jun 8, 2023, 7:57 AM IST

breast milk

ಬೆಂಗಳೂರು: ತಾಯಿ ಎದೆ ಹಾಲಿನ ಕೊರತೆಯಿಂದ ಬಳಲುತ್ತಿರುವ ನವಜಾತ ಶಿಶುಗಳ ರಕ್ಷಣೆಗಾಗಿ ರಾಜ್ಯದಲ್ಲಿ ಹೊಸದಾಗಿ ನಾಲ್ಕು “ಅಮೃತಧಾರೆ” (ಹ್ಯೂಮನ್‌ ಮಿಲ್ಕ್ ಬ್ಯಾಂಕ್‌) ಕೇಂದ್ರಗಳ ಸ್ಥಾಪನೆಗೆ ಆರೋಗ್ಯ ಇಲಾಖೆ ಮುಂದಾಗಿದೆ. ಈ ಕೇಂದ್ರಗಳು ಮುಂದಿನ ಎರಡು ತಿಂಗಳೊಳಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಿಸಲಿವೆ.
ಅಕಾಲಿಕವಾಗಿ ಹಾಗೂ ಕಡಿಮೆ ತೂಕದಿಂದ ಜನಿಸಿದ, ಎದೆ ಹಾಲು ಉತ್ಪಾದಿಸದ ತಾಯಂದಿರ ಹಾಗೂ ಹಲವು ಕಾರಣಗಳಿಂದ ತಾಯಂದಿರಿಂದ ದೂರ ಉಳಿದಿರುವ ಶೇ.68ರಷ್ಟು ಶಿಶುಗಳಿಗೆ ಎದೆ ಹಾಲಿನ ಕೊರತೆಯಿದೆ. ಇದನ್ನು ಸರಿಪಡಿಸಲು ಆರೋಗ್ಯ ಇಲಾಖೆ ಮೈಸೂರು, ಬೆಳಗಾವಿ, ಬೆಂಗಳೂರು, ಕಲಬುರಗಿಯಲ್ಲಿ ತಲಾ ಒಂದು ಹ್ಯೂಮನ್‌ ಮಿಲ್ಕ್ ಬ್ಯಾಂಕ್‌ ತೆರೆಯಲಿದ್ದು, ಪ್ರಸ್ತುತ ಅಗತ್ಯದ ಐಸ್‌ ಲೈನ್‌ ಶೀತಲೀಕರಣ ಯಂತ್ರ, ಮಿಕ್ಸಿಂಗ್‌ ಯಂತ್ರ, ಡ್ರೈಯರ್‌, ಪಾಶ್ಚರೀಕರಿಸುವ ಯಂತ್ರ, ಬ್ರೈಸ್ಟ್‌ ಪಂಪ್‌ ಖರೀದಿ ಪ್ರಕ್ರಿಯೆ ಭರದಿಂದ ಸಾಗುತ್ತಿದೆ.

ಎರಡು ವಿಭಾಗದಲ್ಲಿ ಸಂಗ್ರಹ
ಇಲ್ಲಿ ಸ್ವತಃ ತಾಯಿಯಿಂದ ಮಗುವಿಗೆ ಹಾಗೂ ದಾನಿ ತಾಯಿಯ ಹಾಲನ್ನು ಇತರ ಮಗುವಿಗೆ ನೀಡಲು ಅವಕಾಶ ನೀಡಲಾಗಿದೆ. ಸಂಗ್ರಹಿಸುವ ಹಾಲು ಪ್ರಾರಂಭಿಕ ಹಂತದಲ್ಲಿ ಸ್ಕ್ರೀನಿಂಗ್‌ ಹಾಗೂ ಪಾಶ್ಚರೀಕರಿಸಿ ರೋಗಾಣು ನಾಶ ಮಾಡಲಾಗುತ್ತದೆ. ಅನಂತರ ಬಾಟಲಿಯಲ್ಲಿ ಭದ್ರಗೊಳಿಸಿ 18 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶದಲ್ಲಿ ಗರಿಷ್ಠ 6 ತಿಂಗಳ ಕಾಲ ಸಂಗ್ರಹಿಸಿ ಇಡಬಹುದಾಗಿದೆ. ಖಾಸಗಿ ಕೇಂದ್ರದಲ್ಲಿ ಪಾಶ್ಚರೀಕರಿಸಿದ 150 ಎಂ.ಎಲ್‌. ಹಾಲಿಗೆ 3000ರಿಂದ 4000 ರೂ. ಪಾವತಿಸಬೇಕು. ಆದರೆ ಸರಕಾರಿ ಆಸ್ಪತ್ರೆಯಲ್ಲಿ ಅಗತ್ಯವಿರುವ ಶಿಶುಗಳಿಗೆ ಉಚಿತವಾಗಿ ಒದಗಿಸಲಾಗುತ್ತದೆ.

ಯಾರು ಅರ್ಹರು?
ಅಗತ್ಯಕ್ಕಿಂತ ಹೆಚ್ಚು ಎದೆಹಾಲು ಹೊಂದಿರುವ ಎಲ್ಲ ಆರೋಗ್ಯವಂತ ತಾಯಂದಿರು ದಾನ ಮಾಡಬಹುದಾಗಿದೆ. ದಾನಿ ತಾಯಿಯನ್ನು ಮೊದಲಿಗೆ ಎಚ್‌ಐವಿ, ಹೆಪಟೈಟೀಸ್‌ ಬಿ ಹಾಗೂ ಸಿ, ವಿಡಿಆರ್‌ಎಲ್‌ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವೈದ್ಯಕೀಯ ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ ಬಂದವರು ಮಾತ್ರ ಎದೆ ಹಾಲು ದಾನ ಮಾಡಬಹುದು.

ಉಚಿತ ವಿತರಣೆ
ಒಂದು ವರ್ಷದಿಂದ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಸರಕಾರಿ ಹಾಗೂ ಮಂಗಳೂರಿನ ಲೇಡಿಗೋಶನ್‌ ಆಸ್ಪತ್ರೆಯಲ್ಲಿ ಖಾಸಗಿ ಸಾರ್ವಜನಿಕ ಸಹಬಾಗಿತ್ವದಲ್ಲಿ ತಲಾ ಒಂದು ಹ್ಯೂಮನ್‌ ಮಿಲ್ಕ್ ಬ್ಯಾಂಕ್‌ ಸ್ಥಾಪಿಸಲಾಗಿದೆ. ಇದುವರೆಗೆ ಎರಡು ಕೇಂದ್ರದಲ್ಲಿ ಸುಮಾರು 300 ಲೀಟರ್‌ ಹಾಲು ಪಾಶ್ಚರೀಕರಿಸಿ 1000ಕ್ಕೂ ಅಧಿಕ ನವಜಾತ ಶಿಶುಗಳಿಗೆ ಉಚಿತವಾಗಿ ವಿತರಿಸಲಾಗಿದೆ. ಎರಡು ಕೇಂದ್ರದಲ್ಲಿ ಒಟ್ಟು ಪ್ರತಿ ದಿನ ಸರಾಸರಿ 120ಕ್ಕೂ ಅಧಿಕ ಮಂದಿ ದಾನಿಗಳು ಎದೆ ಹಾಲು ದಾನ ಮಾಡುತ್ತಾರೆ.

ಅಮೃತಧಾರೆ ಸೆಂಟರ್‌ ಮೂಲಕ ಸ್ವಯಂ ಪ್ರೇರಿತವಾಗಿ ದಾನ ಮಾಡಲು ಒಪ್ಪುವ ತಾಯಂದಿರ ಹಾಲನ್ನು ಪಾಶ್ಚರೀಕರಿಸಿ, ಪರೀಕ್ಷೆಗೆ ಒಳಗಾದ ಬಳಿಕವಷ್ಟೆ ಇನ್ನೊಂದು ಶಿಶುವಿಗೆ ಹಾಲನ್ನು ನೀಡಲಾಗುತ್ತದೆ. ಈ ಹಾಲನ್ನು ಸುಮಾರು 6 ತಿಂಗಳ ತನಕ ಸಂಗ್ರಹಿಸಿ ಇಡಬಹುದಾಗಿದೆ. ಮುಂದಿನ 2 ತಿಂಗಳೊಳಗಾಗಿ 4 ಹೊಸ ಕೇಂದ್ರಗಳು ರಾಜ್ಯದಲ್ಲಿ ಕಾರ್ಯಾಚರಿಸಲಿದೆ.
-ಡಾ| ಬಸವರಾಜ್‌ ದಾಬಾಡಿ, ಉಪನಿರ್ದೇಶಕ, ಮಕ್ಕಳ ಆರೋಗ್ಯ ಇಲಾಖೆ

~ ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.