Siddaramaiah ವಿರುದ್ಧ ಹೇಳಿಕೆ; ಹರೀಶ್ ಪೂಂಜಾ ವಿರುದ್ಧ ಕೇಸ್ ಗೆ ಹೈಕೋರ್ಟ್ ತಡೆ
Team Udayavani, Jun 9, 2023, 2:02 PM IST
ಬೆಂಗಳೂರು: ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ’ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಶುಕ್ರವಾರ ತಡೆ ವಿಧಿಸಿದೆ.
ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್, ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ ಎಂದು ಹೇಳಿದೆ. ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ.ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಹರೀಶ್ ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು. ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ.
ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಹರೀಶ್ ಪೂಂಜಾ ಅವರು ಕೆಲ ಹಿಂದೂ ಪರ ಸಂಘಟನೆಯ ನಾಯಕರ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ’24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ಮತ ಕೇಳಿದ್ದೀರಲ್ಲ. ಇದು ಯಾವ ಹಿಂದುತ್ವ’ ಎಂದು ಕಿಡಿ ಕಾರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್