ಜೇವರ್ಗಿ ಮರಳು ಮಾಫಿಯಾಗೆ ಬಲಿಯಾದ ಪೇದೆ ಮನೆಗೆ ಪ್ರಿಯಾಂಕ್ ಖರ್ಗೆ ಭೇಟಿ; ಪರಿಹಾರ ವಿತರಣೆ


Team Udayavani, Jun 20, 2023, 2:57 PM IST

Priyank Khar visits the house of a constable who was a victim of the Jewargi sand mafia

ಕಲಬುರಗಿ: ಜೇವರ್ಗಿ ತಾಲೂಕಿನ ಹುಲ್ಲೂರ್ ಕ್ರಾಸ ಬಳಿ ಅಕ್ರಮ ಮರಳುಗಾರಿಕೆ ತಡೆಯಲು ಹೋಗಿ ಬಲಿಯಾಗಿದ್ದ ನೆಲೋಗಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಮಯೂರ್ ಚವ್ಹಾಣ ಅವರ ಚೌಡಾಪೂರ್ ತಾಂಡಾ ನಿವಾಸಕ್ಕೆ ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ  ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಎಂ.ವೈ.ಪಾಟೀಲ ಜೊತೆ ಸೇರಿ ತಮ್ಮ ಪಕ್ಷದ ವತಿಯಿಂದ 1 ಲಕ್ಷ‌ ರೂ. ಚೆಕ್ ನ್ನು ಮೃತ ಮಯೂರ್ ಚವ್ಹಾಣ ಅವರ ಪತ್ನಿ ನಿರ್ಮಲಾ ಅವರಿಗೆ ವಿತರಿಸಿದರು.

ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯ ಕಲ್ಪಿಸಲಾಗುವುದು. ಧೈರ್ಯದಿಂದಿರಿ, ಆತ್ಮ ವಿಶ್ವಾಸ ಕಳೆದುಕೊಳ್ಳಬೇಡಿ. ಸರ್ಕಾರ ನಿಮ್ಮೊಂದಿಗಿದೆ ಎಂದು ಕುಟುಂಬಸ್ಥರಿಗೆ ಸಚಿವರು ಮತ್ತು ಶಾಸಕರು ಸಾಂತ್ವನ ನುಡಿಗಳನ್ನಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಮೃತ ಮಯೂರ್ ಚವ್ಹಾಣ ಕುಟುಂಬಕ್ಕೆ ಪೊಲೀಸ್ ಇಲಾಖೆಯಿಂದ 30 ಲಕ್ಷ ರೂ. ಪರಿಹಾರ ನೀಡಲಾಗುವುದು. ಜೊತೆಗೆ ಸೇವಾ ವಿಮೆ, ಗ್ರಾಜುಟಿ ಸೇರಿದಂತೆ ಇತರೆ 10 ಲಕ್ಷ ರೂ. ಕುಟುಂಬಕ್ಕೆ ಸಿಗಲಿದೆ. ಸರ್ಕಾರದ ನಿಯಮಾವಳಿಯಂತೆ ಕುಟುಂಬದ‌ ಓರ್ವ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲಾಗುವುದು. ಮಕ್ಕಳ ವಿಧ್ಯಾಬ್ಯಾಸದ ಬಗ್ಗೆಯೂ ಸರ್ಕಾರ ಗಮನಹರಿಸಲಿದೆ ಎಂದರು.

ಮರಳು ಮಾಫಿಯಾಗೆ ಕಡಿವಾಣ: ಜಿಲ್ಲೆಯಲ್ಲಿ ಅಕ್ರಮ ಮರಳು ಮಾಫಿಯಾಗೆ ಕಡಿವಾಣ ಹಾಕಲಾಗುವುದು. ನಮ್ಮ ಸರ್ಕಾರ ಬಂದು 1 ತಿಂಗಳಾಗಿದೆ. ಜಿಲ್ಲೆಯಲ್ಲಿನ ಅಕ್ರಮ ಮರಳುಗಾರಿಕೆ, ಗಣಿಗಾರಿಕೆ, ಜೂಜು ಅಡ್ಡೆ ತಡೆಯಲು ಈಗಾಗಲೆ ಹೆಜ್ಜೆ ಇಟ್ಟಿದ್ದೇವೆ. ಈ ಪ್ರಕರಣ ಸ್ಟಾಕ್ ಯಾರ್ಡ್ ನಿಂದ ಮರಳು ತರುವಾಗ ಘಟಿಸಿದೆ. ಇದರಲ್ಲಿ ಯಾರೇ ತಪ್ಪಿತಸ್ಥರಿದ್ದರು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಶಾಸಕರಾದ ಎಂ.ವೈ.ಪಾಟೀಲ, ಎಸ್.ಪಿ. ಇಶಾ ಪಂತ್, ತಹಶೀಲ್ದಾರ ಸಂಜೀವಕುಮಾರ ದಾಸರ್ ಮತ್ತಿತರು ಇದ್ದರು.

ಟಾಪ್ ನ್ಯೂಸ್

1-ewewqe

Gokarana; ಮಹಾಬಲೇಶ್ವರ ಗರ್ಭಗುಡಿಯ ನಂದಿ ಪೂಜೆ ವಿವಾದ: ಪ್ರತಿಭಟನೆ!

goa

Goa; ಚುನಾವಣೆ ಸಂದರ್ಭ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

kl rahul

KL Rahul; ಮಾಲಕರ ತರಾಟೆಯ ಬಳಿಕ ಲಕ್ನೋ ತಂಡದ ನಾಯಕತ್ವ ತೊರೆದ ರಾಹುಲ್?

Explosion At Fireworks Factory Near Sivakasi

Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು

1-wewqewq

LS poll ಅಭಿವೃದ್ಧಿಗಾಗಿ ಮತ ಮತ್ತು ‘ಜಿಹಾದ್‌ಗೆ ಮತ ಹಾಕಿ’ ನಡುವಿನ ಸ್ಪರ್ಧೆ: ಶಾ

3

ಇಲ್ಲಿದೆ ʼKhatron Ke Khiladi 14ʼ ನಲ್ಲಿ ಭಾಗಿಯಾಗುವ ಸ್ಪರ್ಧಿಗಳ ಪಟ್ಟಿ..

BJP Symbol

Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-ewewqe

Gokarana; ಮಹಾಬಲೇಶ್ವರ ಗರ್ಭಗುಡಿಯ ನಂದಿ ಪೂಜೆ ವಿವಾದ: ಪ್ರತಿಭಟನೆ!

Missing: ಕನ್ನರ್ಪಾಡಿ; ಮದುವೆಗೆ ಬಂದ ವ್ಯಕ್ತಿ ನಾಪತ್ತೆ

Missing: ಕನ್ನರ್ಪಾಡಿ; ಮದುವೆಗೆ ಬಂದ ವ್ಯಕ್ತಿ ನಾಪತ್ತೆ

goa

Goa; ಚುನಾವಣೆ ಸಂದರ್ಭ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

Jaishankar

PoK ಭಾರತದ ಭಾಗ; ಮರಳುವಿಕೆ ಖಚಿತಪಡಿಸಿಕೊಳ್ಳಲು ಎಲ್ಲಾ ಪಕ್ಷಗಳು ಬದ್ಧವಾಗಿವೆ: ಜೈಶಂಕರ್

Cricket Betting: ಆ್ಯಪ್‌ನಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌; ಪ್ರಕರಣ ದಾಖಲು

Cricket Betting: ಆ್ಯಪ್‌ನಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.