Bhopal:ಬುಡಕಟ್ಟು ವ್ಯಕ್ತಿಯ ಮೇಲೆ ಮೂತ್ರವಿಸರ್ಜನೆ ಮಾಡಿದ್ದ ಆರೋಪಿಯ ಕಟ್ಟಡ ನೆಲಸಮಕ್ಕೆ ಆದೇಶ

ಮಧ್ಯ ಪ್ರದೇಶ ಸರ್ಕಾರದಿಂದ ಆರೋಪಿಯ ವಿರುದ್ಧ ಖಡಕ್‌ ಕ್ರಮ

Team Udayavani, Jul 5, 2023, 6:18 PM IST

mp buldozer dalit

ಭೋಪಾಲ್‌: ಬುಡಕಟ್ಟು ವ್ಯಕ್ತಿಯ ಮೇಲೆ ಒಬ್ಬಾತ ಮೂತ್ರವಿಸರ್ಜನೆ ಮಾಡಿದ ವಿಡಿಯೋ ಭಾರೀ ವೈರಲ್‌ ಆದ ಬಳಿಕ ದೇಶಾದ್ಯಂತ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಮೂತ್ರವಿಸರ್ಜನೆ ಮಾಡಿದ್ದ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎಂದು ತಿಳಿದ ಬಳಿಕ ಈ ಕೃತ್ಯ ರಾಜಕೀಯ ತಿರುವು ಪಡೆದಿತ್ತು. ಬಿಎಸ್‌ಪಿ ನಾಯಕಿ ಮಾಯಾವತಿ, ಹೋರಾಟಗಾರ ಜಿಗ್ನೇಶ್‌ ಮೇವಾನಿ ಸಹಿತ ಹಲವು ನಾಯಕರು ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದು, ಆರೋಪಿಯ ಮನೆಯನ್ನು ಬುಲ್ಡೋಜರ್‌ ಬಳಸಿ ಕೆಡಹುವಂತೆ ಆಗ್ರಹಿಸಿದ್ದರು. ಮಧ್ಯ ಪ್ರದೇಶ ಸರ್ಕಾರಕ್ಕೂ ಈ ಘಟನೆ ತೀವ್ರ ಮುಜುಗರ ತರಿಸಿತ್ತು.

ಈ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಧ್ಯ ಪ್ರದೇಶ ಸರ್ಕಾರ ಈಗಾಗಲೇ ಜೈಲು ಪಾಲಾಗಿರುವ ಆರೋಪಿಗೆ ಸೇರಿದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲು ಆದೇಶ ಹೊರಡಿಸಿದೆ.

ಪ್ರವೇಶ್‌ ಶುಕ್ಲಾ ಎಂಬ ವ್ಯಕ್ತಿ ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್‌ ಮಿಶ್ರಾ ಈ ಘಟನೆ ʻಅಮಾನವೀಯ ಮತ್ತು ಖಂಡನೀಯʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಘಟನೆಗೆ ಸಂಬಂಧಿಸಿದಂತೆ ಮಂಗಳವಾರ ಮಧ್ಯರಾತ್ರಿಯೇ ಆರೋಪಿಯನ್ನು ಬಂಧಿಸಲಾಗಿದ್ದು, ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ನಿರ್ದೇಶನದಂತೆ ಆತನ ವಿರುದ್ಧ, ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅದೂ ಅಲ್ಲದೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಎಸಿ ರೂಮ್ ಬುಕ್ ಮಾಡಲಿಲ್ಲವೆಂದು ನಡುಬೀದಿಯಲ್ಲೇ ಹೊಡೆದಾಡಿಕೊಂಡ ಕುಟುಂಬ

 

 

 

 

 

 

ಟಾಪ್ ನ್ಯೂಸ್

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.