ಕದ್ದ ಮೊಬೈಲ್‌ ಡಿಸ್‌-ಪ್ಲೇ ಕಳಚಿ ಮಾರಾಟ


Team Udayavani, Jul 20, 2023, 12:10 PM IST

ಕದ್ದ ಮೊಬೈಲ್‌ ಡಿಸ್‌-ಪ್ಲೇ ಕಳಚಿ ಮಾರಾಟ

ಬೆಂಗಳೂರು: ಬೈಕ್‌ನಲ್ಲಿ ಬಂದು ಮೊಬೈಲ್‌ ಕಸಿದುಕೊಂಡು ಡಿಸ್‌ಪ್ಲೇ ಕಳಚಿ 2-3 ಸಾವಿರ ರೂ. ಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಾಮಾಕ್ಷಿಪಾಳ್ಯದ ಚರಣ್‌ (20), ನಂದಾ (21) ಬಂಧಿತರು. 1.60 ಲಕ್ಷ ರೂ. ಮೌಲ್ಯದ 8 ಮೊಬೈಲ್‌ ಗಳನ್ನು ಜಪ್ತಿ ಮಾಡಿದ್ದಾರೆ.

ನಗರದಲ್ಲಿ ಒಂಟಿಯಾಗಿ ಮೊಬೈಲ್‌ನಲ್ಲಿ ಮಾತನಾಡಿಕೊಂಡು ಓಡಾಡುತ್ತಿರುವ ಮಹಿಳೆಯರು ಹಾಗೂ ಯುವಕರನ್ನು ಆರೋಪಿಗಳು ಹಿಂಬಾಲಿಸಿಕೊಂಡು ಹೋಗುತ್ತಿದ್ದರು. ಏಕಾಏಕಿ ಮೊಬೈಲ್‌ ಕಸಿದುಕೊಂಡು ಪರಾರಿಯಾಗುತ್ತಿದ್ದರು. ಕೂಡಲೇ ಮೊಬೈಲ್‌ ಸಿಮ್‌ ಕಾರ್ಡ್‌ ತೆಗೆಯುತ್ತಿದ್ದರು. ಬಳಿಕ ಡಿಸ್‌-ಪ್ಲೇ ಸಹ ತೆಗೆಯುತ್ತಿದ್ದರು. ನಗರದಲ್ಲಿರುವ ಕೆಲ ಮೊಬೈಲ್‌ ಅಂಗಡಿಗಳಿಗೆ ತೆರಳಿ ಕದ್ದ 15 ರಿಂದ 20 ಸಾವಿರ ರೂ. ಮೌಲ್ಯದ ಮೊಬೈಲ್‌ಗ‌ಳನ್ನು ಕೇವಲ 2 ರಿಂದ 3 ಸಾವಿರ ರೂ.ಗೆ ಮಾರಾಟ ಮಾಡು ತ್ತಿದ್ದರು. ಅಂಗಡಿ ಮಾಲೀಕರು ಈ ಮೊಬೈಲ್‌ಗ‌ಳಿಗೆ ಹೊಸ ಡಿಸ್‌-ಪ್ಲೇ ಹಾಕಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಕದ್ದ ಕೂಡಲೇ ಸಿಮ್‌ ಕಾರ್ಡ್‌ ತೆಗೆದು ಮೊಬೈಲ್‌ ಸ್ವಿಚ್‌xಆಫ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅವರ ಸುಳಿವು ಪತ್ತೆ ಹಚ್ಚುವುದೇ ಪೊಲೀಸರಿಗೆ ಸವಾಲಾಗಿತ್ತು.

ಸಿಕ್ಕಿ ಬಿದ್ದಿದ್ದು ಹೇಗೆ?: ಕಾಮಾಕ್ಷಿಪಾಳ್ಯದ ಕೃಷ್ಣ ನಂದಕರ್‌ ಜು.14ರಂದು 20 ಸಾವಿರ ರೂ. ಮೌಲ್ಯದ ಮೊಬೈಲ್‌ನಲ್ಲಿ ಮಾತನಾಡಿಕೊಂಡು ಮನೆಗೆ ಹೋಗು ತ್ತಿದ್ದರು. ಆ ವೇಳೆ ಇವರನ್ನು ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಮೊಬೈಲ್‌ ಕಸಿದುಕೊಂಡು ಪರಾರಿ ಯಾಗಿದ್ದರು. ಇತ್ತ ಕೃಷ್ಣನಂದಕರ್‌ ಕಾಮಾಕ್ಷಿಪಾಳ್ಯ ಠಾಣೆಗೆ ದೂರು ನೀಡಿದ್ದರು. ಕಾರ್ಯಾಚರಣೆಗೆ ಇಳಿದ ಪೊಲೀಸರು ಕೃತ್ಯ ನಡೆದ ಆಸು-ಪಾಸಿನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ಪರಿಶೀಲಿಸಿ, ಕೆಲ ತಾಂತ್ರಿಕ ಕಾರ್ಯಾ ಚರಣೆ ನಡೆಸಿದ್ದರು. ಆ ವೇಳೆ ಆರೋಪಿಗಳ ಸುಳಿವು ಸಿಕ್ಕಿತ್ತು. ಈ ಹಿಂದೆಯೂ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿ ಆರೋಪಿಗಳು ಜೈಲು ಸೇರಿದ್ದರು. ಈ ಆಧಾರದಲ್ಲಿ ಅವರನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಿದಾಗ ಮೊಬೈಲ್‌ ಕಳ್ಳತನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕದ್ದ ಮೊಬೈಲ್‌ಗ‌ಳಿಗೆ ಇತ್ತೀಚೆಗೆ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳಿಂದ ಕಡಿಮೆ ಬೆಲೆಗೆ ಕದ್ದ ಮೊಬೈಲ್‌ಗ‌ಳನ್ನು ಕೆಲ ಮೊಬೈಲ್‌ ಅಂಗಡಿಗಳಲ್ಲಿ ಖರೀದಿಸುತ್ತಿದ್ದರು. ಆರೋಪಿಗಳು ಮೊಬೈಲ್‌ ಡಿಸ್‌-ಪ್ಲೇ ಕಳಚಿ ಕೊಟ್ಟರೆ ಅಂಗಡಿ ಮಾಲೀಕರು ಅದೇ ಮೊಬೈಲ್‌ಗೆ ಹೊಸ ಡಿಸ್‌ಪ್ಲೇ ಅಳವಡಿಸುತ್ತಿದ್ದ ಹಿನ್ನೆಲೆಯಲ್ಲಿ ಕದ್ದ ಮೊಬೈಲ್‌ ಎಂಬುದು ಗ್ರಾಹಕರ ಗಮನಕ್ಕೆ ಬರುತ್ತಿರಲಿಲ್ಲ

ಟಾಪ್ ನ್ಯೂಸ್

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Chabahar

Chabahar ಮಧ್ಯ ಏಷ್ಯಾಕ್ಕೆ ಭಾರತದ ಹೆಬ್ಟಾಗಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.