Mangaluru ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿಯ ಬಂಧನ
Team Udayavani, Aug 20, 2023, 6:32 PM IST
ಮಂಗಳೂರು: ವೆನ್ಲಾಕ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ ನೌಫಾಲ್(32) ಆಲಿಯಾಸ್ ಎಸ್.ಎಂ.ನೌಫಾಲ್ನನ್ನು ಪಾಂಡೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಬಂಟ್ವಾಳ ಸಜಿಪ ನಡು ನಿವಾಸಿ ನೌಫಾಲ್ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ. ಈತನನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿತ್ತು.
ಆ.16ರಂದು ಸಂಜೆ 5 ಗಂಟೆಯ ಸುಮಾರಿಗೆ ಈತ ಪೊಲೀಸ್ ಭದ್ರತೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಈತನನ್ನು ರವಿವಾರ ಪಿಎಸ್ಐ ಮನೋಹರ್ ಪ್ರಸಾದ್ ಮತ್ತು ಸಿಬಂದಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮಹಮದ್ ಜುಬೇರ್ ಉಚ್ಛಾಟನೆ
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ
Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು