Bangalore: ಕಾಟ್ರೇಜ್‌ ಜಜ್ಜುವ ಬುಲೆಟ್‌ ಸಿಡಿದು ಇಬ್ಬರು ಕಾನ್‌ಸ್ಟೇಬಲ್‌ಗ‌ಳಿಗೆ ಗಾಯ

Team Udayavani, Oct 10, 2023, 11:05 AM IST

tdy-5

ಸಾಂದರ್ಭಿಕ ಚಿತ್ರ

ಬೆಂಗಳೂರು: ಬುಲೆಟ್‌ನ ಕಾಟ್ರೇಜ್‌(ಕೋಕಾ)ವನ್ನು ಜಜ್ಜಿ ಪುಡಿ ಮಾಡುವ ವೇಳೆ ಬುಲೆಟ್‌ ಸಿಡಿದು ಇಬ್ಬರು ಕೆಎಸ್‌ಆರ್‌ಪಿ ಕಾನ್‌ಸ್ಟೇಬಲ್‌ಗ‌ಳು ಗಾಯಗೊಂಡಿರುವ ಘಟನೆ ಕೆಎಸ್‌ಆರ್‌ಪಿಯ 9ನೇ ಬೆಟಾಲಿಯನ್‌ ಆವರಣದಲ್ಲಿ ಸೋಮವಾರ ಸಂಜೆ ನಡೆದಿದೆ.

ಘಟನೆಯಲ್ಲಿ ಚಂದ್ರಶೇಖರ್‌ ಮತ್ತು ರಾಮನಿಂಗ ಎಂಬವರ ಕೈ, ಕಾಲುಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಕೆಎಸ್‌ಆರ್‌ಪಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರತಿ ವರ್ಷ ಜನವರಿ ಮತ್ತು ಜೂನ್‌ನಲ್ಲಿ ಕೆಎಸ್‌ಆರ್‌ಪಿಯಿಂದ ಸಿಬ್ಬಂದಿ ರೈಫ‌ಲ್‌ ಫೈರಿಂಗ್‌ ತರಬೇತಿ ನೀಡಲಾಗುತ್ತದೆ. ಈ ವೇಳೆ ಮೀಸ್‌ ಫೈರಿಂಗ್‌ ಆಗಿರುವ ಕಾಟ್ರೇಜ್‌(ಕೋಕಾ) ಮತ್ತು ಬಳಕೆಗೆ ಯೋಗ್ಯವಲ್ಲದ ಬುಲೆಟ್‌ ಗಳಲ್ಲಿರುವ ಗನ್‌ ಪೌಡರ್‌ಗಳನ್ನು ತೆಗೆದು ಕಾಟ್ರೇಜ್‌ಗಳನ್ನು ಸಂಗ್ರಹಿಸಲಾಗುತ್ತದೆ. ಈ ರೀತಿಯ ಕಾಟ್ರೇಜ್‌ಗಳನ್ನು ಸುತ್ತಿಗೆಯಲ್ಲಿ ಜಜ್ಜಿ ಪ್ರತಿ ವರ್ಷ ಪೊಲೀಸ್‌ ಇಲಾಖೆಯ ಸಶಸ್ತ್ರ ವಿಭಾಗಕ್ಕೆ ಕಳುಹಿಸಲಾಗುತ್ತದೆ. ಅದೇ ರೀತಿ ಈ ವರ್ಷ ಕಾನ್‌ಸ್ಟೇಬಲ್‌ಗ‌ಳಾದ ಚಂದ್ರಶೇಖರ್‌, ರಾಮನಿಂಗ ಕಾಟ್ರೇಜ್‌ಗಳನ್ನು ಸುತ್ತಿಗೆಯಿಂದ ಜಜ್ಜುತ್ತಿದ್ದರು. ಈ ವೇಳೆ ಒಂದೆರಡು ಬುಲೆಟ್‌ ಗಳಲ್ಲಿ ಗನ್‌ ಪೌಡರ್‌ ಉಳಿದುಕೊಂಡಿರುವ ಸಾಧ್ಯತೆಯಿದೆ. ಹೀಗಾಗಿ ಜಜ್ಜುವಾಗ ಸ್ಫೋಟಗೊಂಡಿದೆ. ಈ ವೇಳೆ ಇಬ್ಬರ ಕೈ ಮತ್ತು ಕಾಲುಗಳಿಗೆ ಸಣ್ಣ ಪ್ರಮಾಣದಲ್ಲಿ ಗಾಯಗಳಾಗಿವೆ. ಕೂಡಲೇ ಇತರೆ ಅಧಿಕಾರಿ-ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಒಂದೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಘಟನಾ ಸ್ಥಳಕ್ಕೆ ಕೆಎಸ್‌ಆರ್‌ಪಿ ಸಂದೀಪ್‌ ಪಾಟೀಲ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಾಗೆಯೇ ಕಾನ್‌ಸ್ಟೇಬಲ್‌ಗ‌ಳು ದಾಖಲಾಗಿದ್ದ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಟಾಪ್ ನ್ಯೂಸ್

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.