ದೊಡ್ಡಣಗುಡ್ಡೆ : ಜೋಡಿ ಚಂಡಿಕಾಯಾಗ, ಕಲ್ಪೋಕ್ತ ಪೂಜೆ ಸಹಿತ ರಂಗಪೂಜೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ

Team Udayavani, Oct 17, 2023, 11:12 PM IST

ದೊಡ್ಡಣಗುಡ್ಡೆ : ಜೋಡಿ ಚಂಡಿಕಾಯಾಗ, ಕಲ್ಪೋಕ್ತ ಪೂಜೆ ಸಹಿತ ರಂಗಪೂಜೆ

ಉಡುಪಿ: ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಅವರ ಮಾರ್ಗದರ್ಶನದಲ್ಲಿ ವೇ|ಮೂ| ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ಮಂಗಳವಾರ ಜೋಡಿ ಚಂಡಿಕಾಯಾಗ, ದುರ್ಗಾನಮಸ್ಕಾರ ಪೂಜೆ, ಕಲೊ³àಕ್ತ ಪೂಜೆ ಸಹಿತ ರಂಗಪೂಜೆಯು ಅನ್ನಪ್ರಸಾದ ವಿತರಣೆಯೊಂದಿಗೆ ನೆರವೇರಿತು.

ಮಂಗಳೂರಿನ ಉದ್ಯಮಿ ಶರೂನ್‌ ಮತ್ತು ಶ್ವೇತಾ ದಂಪತಿ ಹಾಗೂ ಮಣಿಪಾಲ ಎಂಐಟಿಯ ರೀತು ಕೇಯೂರು ಅವರ ಸೇವಾರ್ಥ ಜೋಡಿ ಚಂಡಿಕಾಯಾಗ, ಕ್ಷೇತ್ರದ ವತಿಯಿಂದ ಕುಬೇರ ಲಕ್ಷ್ಮೀ ಸಾನ್ನಿಧ್ಯದಲ್ಲಿ ಮಹಾಲಕ್ಷ್ಮೀ ಸಹಸ್ರನಾಮ ಯಾಗ, ದೊಡ್ಡಣಗುಡ್ಡೆಯ ಉದಯ ಮತ್ತು ರೇಖಾ ದಂಪತಿಯ ಸೇವಾರ್ಥ ದುರ್ಗಾನಮಸ್ಕಾರ ಪೂಜೆ, ಕಲೊ³àಕ್ತ ಪೂಜೆ ಸಹಿತ ರಂಗಪೂಜೆ ಜರಗಿತು.

ನವಶಕ್ತಿ ವೇದಿಕೆ ಹಾಗೂ ದುರ್ಗಾ ಆದಿಶಕ್ತಿ ದೇವಿಗೆ ಅಭಿಮುಖವಾಗಿ ಕ್ಷೇತ್ರದ ನಾಟ್ಯರಾಣಿ ಗಂಧರ್ವ ಕನ್ಯೆಯ ಪ್ರೀತ್ಯರ್ಥವಾಗಿ ದೇವಿಯ ಕೃಪಾಶೀರ್ವಾದಕ್ಕಾಗಿ ಅಕ್ಷರಾ ಆಚಾರ್ಯ, ಶ್ರೇಷ್ಠಾ, ಸ್ತುತಿ, ಲಕ್ಷ್ಮೀ, ವಿಭಾ, ಇಶಾನ್‌, ಆರಾಧ್ಯಾ, ಅಂಶಿಕಾ ಅವರಿಂದ ನೃತ್ಯ ಸೇವೆ ಸಮರ್ಪಿಸಲ್ಪಟ್ಟಿತು. ಸ್ವಾತಿ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ವೈಭವ, ಕುಂಜಿಬೆಟ್ಟು ರಾಜರಾಜೇಶ್ವರ ಭಜನ ಮಂಡಳಿ, ದುರ್ಗಾ ಆದಿಶಕ್ತಿ ಭಜನ ಮಂಡಳಿಯಿಂದ ಭಜನೆ ಸಂಕೀರ್ತನೆ ನಡೆಯಿತು.

ಹರಿದು ಬಂದ ಭಕ್ತ ಗಡಣ
ಶರನ್ನವರಾತ್ರಿ ಪರ್ವಕಾಲದಲ್ಲಿ ದೂರದೂರುಗಳಿಂದ ಬೆಳಗ್ಗಿನಿಂದ ರಾತ್ರಿಯ ವರೆಗೆ ಭಕ್ತರು ಕ್ಷೇತ್ರಕ್ಕೆ ಧಾವಿಸುತ್ತಿದ್ದಾರೆ. ಅನ್ನಪ್ರಸಾದಕ್ಕೆ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ವೃದ್ಧಿಸುತ್ತಿದ್ದು, ಭಕ್ತರು ಸಂತೃಪ್ತ ಭಾವ ತೋರ್ಪಡಿಸುತ್ತಿದ್ದಾರೆ. ದೇವಿಯ ಪ್ರಸಾದವನ್ನು ಬಡಿಸಿ ಉಣಿಸಬೇಕೇ ಹೊರತೂ ಕೇಳಿ ತಿನ್ನುವುದಲ್ಲ ಎನ್ನುವ ನೆಲೆಯಲ್ಲಿ ಕ್ಷೇತ್ರದಲ್ಲಿ ಇದುವರೆಗೂ ಬಫೆ ಪದ್ಧತಿ ಅಳವಡಿಸಿಲ್ಲ ಎಂದು ಶ್ರೀ ರಮಾನಂದ ಗುರೂಜಿ ತಿಳಿಸಿದ್ದಾರೆ.

ನಾಳೆ ಲಲಿತಾ ಸಹಸ್ರ ಕದಳೀಯಾಗ
ಕ್ಷೇತ್ರದಲ್ಲಿ ಅ. 19ರ ಬೆಳಗ್ಗೆ 8.30ಕ್ಕೆ ಲಲಿತಾ ಸಹಸ್ರ ಕದಳೀಯಾಗ ಆರಂಭಗೊಳ್ಳಲಿದ್ದು, 11ಕ್ಕೆ ಪೂರ್ಣಾಹುತಿ ನಡೆಯಲಿದೆ. ದಕ್ಷಿಣ ಭಾರತದಲ್ಲಿಯೇ ಮೇರು ಶ್ರೀಚಕ್ರಪೀಠವನ್ನು ಹೊಂದಿರುವ ಕ್ಷೇತ್ರದಲ್ಲಿ ಅಗ್ನಿ ಮುಖೇನ ಆಹುತಿ ನೀಡಿ ಆರಾಧಿಸುವ ಯಾಗ ಇದಾಗಿದೆ ಎಂದು ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.