Karnataka: ಬೊಮ್ಮಾಯಿಗೆ ಹೃದಯ ಶಸ್ತ್ರಚಿಕಿತ್ಸೆ
Team Udayavani, Oct 18, 2023, 12:25 AM IST
ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ರಾತ್ರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸದ್ಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಅವರು ಬುಧವಾರ ಇಲ್ಲವೇ ಗುರುವಾರ ಐಸಿಯುನಿಂದ ಸಾಮಾನ್ಯ ವಾರ್ಡ್ಗೆ ಶಿಫ್ಟ್ ಆಗಲಿದ್ದಾರೆ. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ತೀವ್ರ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾದ ಅವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಹೃದಯದಲ್ಲಿ ಸಮಸ್ಯೆ ಇರುವುದು ಪತ್ತೆಯಾಯಿತು. ತತ್ಕ್ಷಣವೇ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲೇ ಇರಲಿದ್ದಾರೆ. ನಿಮ್ಮ ಶುಭ ಹಾರೈಕೆಗಳೊಂದಿಗೆ ಆದಷ್ಟು ಬೇಗ ಗುಣಮುಖನಾಗಿ ಬರುತ್ತೇನೆ. ಇತರೆ ರೋಗಿಗಳಿಗೆ ತೊಂದರೆಯಾಗುವುದರಿಂದ ನೀವ್ಯಾರೂ ಆಸ್ಪತ್ರೆಗೆ ಬರಬಾರದು ಎಂದು ಬಸವರಾಜ ಬೊಮ್ಮಾಯಿ ಅವರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್ ಆರೋಪ
Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ
Govt ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಕಡ್ಡಾಯಕ್ಕೆ ಆದೇಶ
MUST WATCH
ಹೊಸ ಸೇರ್ಪಡೆ
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ