Haveri: ಸಮಾಜಕ್ಕೆ ನಿವೃತ್ತ ನೌಕರರ ಮಾರ್ಗದರ್ಶನ ಅಗತ್ಯ- ಮಾನೆ

ಕಟ್ಟಡ ನಿರ್ಮಾಣಕ್ಕೆ ಅನುದಾನ ದೊರಕಿಸುವ ಭರವಸೆ ನೀಡಿದರು.

Team Udayavani, Nov 6, 2023, 4:09 PM IST

Haveri: ಸಮಾಜಕ್ಕೆ ನಿವೃತ್ತ ನೌಕರರ ಮಾರ್ಗದರ್ಶನ ಅಗತ್ಯ- ಮಾನೆ

ಹಾನಗಲ್ಲ: ಸರ್ಕಾರದ ಮೇಲೆ ಜನಸಾಮಾನ್ಯರ ನಿರೀಕ್ಷೆಗಳು ಹೆಚ್ಚಿವೆ. ಇಂಥ ವ್ಯವಸ್ಥೆ ದಾರಿ ತಪ್ಪಿದ ಸಂದರ್ಭದಲ್ಲಿ ನಿವೃತ್ತ ನೌಕರರು ತಮ್ಮ ಅನುಭವಗಳಡಿ ಸಕಾಲಿಕವಾಗಿ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕೆಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಜನತಾ ಶಿಕ್ಷಣ ಸೌಹಾರ್ದ ಸಹಕಾರಿ ಸಂಸ್ಥೆ ಆವರಣದಲ್ಲಿರುವ ಕುಮಾರೇಶ್ವರ ಕಲಾಭವನದಲ್ಲಿ ನಡೆದ ತಾಲೂಕು ನಿವೃತ್ತ ನೌಕರರ ಸಂಘದ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದರು.

ತಾಲೂಕಿನ ಜನತೆ ವಿಶ್ವಾಸವಿಟ್ಟು ಪೂರ್ಣಾವಧಿ  ಸೇವೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಅವಕಾಶ ಬಳಕೆ ಮಾಡಿಕೊಂಡು ಆಡಳಿತ ಸುಧಾರಣೆಗೆ ಶ್ರಮ ವಹಿಸಿದ್ದೇನೆ. ಆಡಳಿತ ವ್ಯವಸ್ಥೆ ಸುಧಾರಿಸಿ, ಜನಸಾಮಾನ್ಯರ ನೋವು-ನಲಿವುಗಳಿಗೆ ತ್ವರಿತವಾಗಿ ಸ್ಪಂದನೆ ಸಿಗಬೇಕು ಎನ್ನುವ ತಮ್ಮ ಆಶಯಕ್ಕೆ ಪೂರಕವಾಗಿ ನಿವೃತ್ತ ನೌಕರರು ಸೂಕ್ತ ಸಲಹೆ, ಸೂಚನೆ ನೀಡಿದರೆ ಸ್ವೀಕರಿಸಿ, ಅನುಷ್ಠಾನಗೊಳಿಸಲು ಬದ್ಧನಿದ್ದೇನೆ ಎಂದು ಹೇಳಿದರು.

ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ ನಿವೃತ್ತ ನೌಕರರ ಸಂಘಕ್ಕೆ ಈಗಾಗಲೇ ಒದಗಿಸಿರುವ ನಿವೇಶನವನ್ನು ಸಂಘದ ಹೆಸರಿಗೆ ವರ್ಗಾಯಿಸಿಕೊಂಡರೆ ಕಟ್ಟಡ ನಿರ್ಮಾಣಕ್ಕೆ ಅನುದಾನ ದೊರಕಿಸುವ ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಿ.ಎಸ್‌.ಬಡಿಗೇರ ಮಾತನಾಡಿ, 1980 ರಿಂದಲೇ ತಾಲೂಕಿನಲ್ಲಿ ನಿವೃತ್ತ ನೌಕರರ ಸಂಘ ಸಕ್ರಿಯವಾಗಿದೆ. ಸಂಘದ ಚಟುವಟಿಕೆಗಳಿಗೆ ಅನುಕೂಲವಾಗಲು ಸ್ವಂತ ಕಟ್ಟಡದ ಅವಶ್ಯಕತೆಯಿದೆ.

ಮುಂದಿನ ದಿನಗಳಲ್ಲಿ ನಿವೃತ್ತ ನೌಕರರ ಆಶೋತ್ತರಗಳಿಗೆ ಸಂಘ ಸ್ಪಂದಿಸಿ ಕೆಲಸ ಮಾಡಲಿದೆ. ಸರ್ಕಾರದ ನಿವೃತ್ತಿ ಸೌಲಭ್ಯಗಳು ದೊರಕುವಂತೆ ಕಾಳಜಿ ವಹಿಸಲಿದೆ ಎಂದು ವಿಶ್ವಾಸ  ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಎಚ್‌.ಎನ್‌.ಪಾಟೀಲ, ಪುರಸಭೆ ಮಾಜಿ ಅಧ್ಯಕ್ಷ ಖುರ್ಷಿದ್‌ ಅಹ್ಮದ್‌ ಹುಲ್ಲತ್ತಿ, ಎಂ.ಕೆ.ಚಂದ್ರಗಿರಿ ಇದ್ದರು.

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.