Rain ಕರಾವಳಿಯಾದ್ಯಂತ ಉತ್ತಮ ಮಳೆ: ಸಿಡಿಲಿನ ಅಬ್ಬರಕ್ಕೆ ಬೆಚ್ಚಿದ ಜನತೆ

Team Udayavani, Nov 6, 2023, 11:34 PM IST

Rain ಕರಾವಳಿಯಾದ್ಯಂತ ಉತ್ತಮ ಮಳೆ: ಸಿಡಿಲಿನ ಅಬ್ಬರಕ್ಕೆ ಬೆಚ್ಚಿದ ಜನತೆ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದಲ್ಲಿ ರವಿವಾರ ರಾತ್ರಿಯಿಂದ ಸೋಮವಾರ ಮುಂಜಾನೆ ವರೆಗೆ ಉತ್ತಮ ಮಳೆಯಾಗಿದೆ. ಮಳೆಗಿಂತಲೂ ಸಿಡಿಲಿನ ಅಬ್ಬರ ಜೋರಾಗಿದ್ದು, ಮಧ್ಯರಾತ್ರಿ ಜನರು ಬೆಚ್ಚಿ ಬೀಳುವಂತಾಯಿತು.

ಕರಾವಳಿಯಾದ್ಯಂತ ಸಂಜೆಯ ವೇಳೆಗೆ ಲಘುವಾಗಿ ಆರಂಭಗೊಂಡ ಮಳೆ ರಾತ್ರಿಯಾಗುತ್ತಿದ್ದಂತೆ ಬಿರು ಸಾಗಿ ಸುರಿಯಲಾರಂಭಿಸಿತು. ರಾತ್ರಿ ಯಂತೂ ಈ ಬಾರಿಯ ಮಳೆಗಾಲ ದಲ್ಲಿಯೂ ಕಾಣಿಸದಂತಹ ಸಿಡಿಲಿನ ಆರ್ಭಟದೊಂದಿಗೆ ಬಿರುಸಾಗಿ ಮಳೆ ಸುರಿಯಿತು.

ಸೋಮವಾರ ಹಗಲು ಬಿಸಿಲ ಝಳವಿತ್ತು. ಸಂಜೆ-ರಾತ್ರಿ ಬೆಳ್ತಂಗಡಿ, ಸುಳ್ಯ ತಾ|ನ ಗ್ರಾಮೀಣ ಭಾಗದ ಕೆಲವೆಡೆ ಮಳೆಯಾಗಿದೆ.

ಉಡುಪಿ: ಉತ್ತಮ ಮಳೆ
ಉಡುಪಿ: ಜಿಲ್ಲೆಯಾದ್ಯಂತ ರವಿವಾರ ತಡರಾತ್ರಿ ಧಾರಕಾರ ಮಳೆ ಸುರಿದಿದ್ದು, ಗುಡುಗು, ಸಿಡಿಲಿನ ಆರ್ಭಟಕ್ಕೆ ಕೆಲವು ಮನೆಗಳಲ್ಲಿ ಎಲೆಕ್ಟ್ರಾನಿಕ್‌ ವಸ್ತುಗಳಿಗೆ ಹಾನಿ ಸಂಭವಿಸಿದೆ. ಮಣಿಪಾಲ ಸುತ್ತಮುತ್ತ ತಡರಾತ್ರಿ ಸಿಡಿಲು ಶಬ್ದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಹಲವೆಡೆ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ಸೋಮವಾರ ಮೋಡ ಕವಿದ ವಾತಾವರಣದ ಇತ್ತು.ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಗುಡುಗು ಸಿಡಿಲು ಸಹಿತ ಮಳೆಗೆ ಗಂಭೀರ ಹಾನಿ ಸಂಭವಿಸಿಲ್ಲ ಎಂದು ಜಿಲ್ಲಾಡಳಿತ ಮೂಲಗಳು ತಿಳಿಸಿವೆ.

ಸಿಡಿಲು ಬಡಿದು ಇಬ್ಬರಿಗೆ ಗಾಯ, ಹಾನಿ
ಕೈಕಂಬ: ಕುಪ್ಪೆಪದವಿನ ಕಲ್ಲಾಡಿ ಎಂಬಲ್ಲಿ ರವಿವಾರ ಸಂಜೆ ವಿಮಲಾ ಅವರ ಮನೆಯ ವಿದ್ಯುತ್‌ ಮೀಟರ್‌ ಬೋರ್ಡ್‌ಗೆ ಸಿಡಿಲು ಬಡಿದು ಇಬ್ಬರಿಗೆ ಗಾಯವಾಗಿದ್ದು ಕೇಬಲ್‌, ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ. ಮಾತ್ರವಲ್ಲದೇ ಮನೆಯ ಗೋಡೆಗಳು ಬಿರುಕು ಬಿಟ್ಟಿವೆ.

ಘಟನೆಯ ವೇಳೆ ವಿಮಲಾ ಅವರ ತಾಯಿ ಸುಂದರಿ ಅವರ ಹಣೆಗೆ ಗಾಯವಾಗಿ¨ದ್ದರೆ ವಿಮಲಾ ಅವರಿಗೆ ಶ್ರವಣ ಸಮಸ್ಯೆವುಂಟಾಗಿದೆ. ಘಟನೆಯಿಂದ 60 ಸಾವಿರ ರೂ. ನಷ್ಟವಾಗಿದೆ.ಗ್ರಾಮಕರಣಿಕ ಮುತ್ತಪ್ಪ ಮತ್ತು ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನೊಂದೆಡೆ ಗುಡುಗು ಸಹಿತ ಮಳೆಗೆ ಕುಪ್ಪೆಪದವು-ಇರುವೈಲು ಮೂಡುಬಿದಿರೆ ರಸ್ತೆಯ ನೀರಳಿಕೆಯಲ್ಲಿ ಮರ ಉರುಳಿಬಿದ್ದು ವಿದ್ಯುತ್‌ ಕಂಬ ತುಂಡಾಗಿ ರಸ್ತೆಗೆ ಬಿದ್ದ ಪರಿಣಾಮ ಸ್ವಲ್ಪ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿದೆ.

ಎರಡು ದಿನ ಎಲ್ಲೋ ಅಲರ್ಟ್‌
ಮಂಗಳೂರು: ಕರಾವಳಿಗೆ ಇನ್ನೆರಡು ದಿನ ಎಲ್ಲೋ ಅಲರ್ಟ್‌ ಇದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೋಮವಾರ ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 30.1 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 23.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಕೃಷಿ ಕಾರ್ಯಕ್ಕೆ ತೊಡಕು
ಕರಾವಳಿಯಾದ್ಯಂತ ಪ್ರಸ್ತುತ ಭತ್ತದ ಕಟಾವು ನಡೆಯುತ್ತಿದ್ದು, ಈ ವೇಳೆ ಮಳೆ ಸುರಿಯುತ್ತಿರುವುದರಿಂದ ಭತ್ತದ ಪೈರು ಬಿದ್ದು ನೆಲ ಕಚ್ಚುತ್ತದೆ. ಇದು ಯಂತ್ರದ ಮೂಲಕ ಕಟಾವಿಗೆ ಸಮಸ್ಯೆಯಾಗುತ್ತಿದೆ.

ಟಾಪ್ ನ್ಯೂಸ್

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.