Nargund: ಮನೆ ಹಂಚಿಕೆ ತಾರತಮ್ಯ ನಿವಾರಣೆಗೆ ಸಮಿತಿ

ಸಮಿತಿ ರಚನೆ ಮಾಡಿ ಒಂದು ವಾರದಲ್ಲಿ ವರದಿ ನೀಡಲು ಸೂಚನೆ

Team Udayavani, Nov 16, 2023, 5:10 PM IST

Nargund: ಮನೆ ಹಂಚಿಕೆ ತಾರತಮ್ಯ ನಿವಾರಣೆಗೆ ಸಮಿತಿ

ನರಗುಂದ: 2012ರಲ್ಲಿ ಉಕ್ಕಿ ಹರಿದ ಬೆಣ್ಣೆ ಹಳ್ಳದ ಪ್ರವಾಹ ಸಂದರ್ಭದಲ್ಲಿ ಹಳ್ಳದ ದಡದಲ್ಲಿರುವ ತಾಲೂಕಿನ ಕುಲಗೇರಿ ಮತ್ತು
ಸುರಕೋಡ ಗ್ರಾಮಗಳನ್ನು ಸ್ಥಳಾಂತರ ಮಾಡಲಾಗಿದ್ದು, ಹೊಸ ಜಮೀನು ಖರೀದಿಸಿ ಆಶ್ರಯ ಯೋಜನೆಯಡಿ ಮನೆಗಳನ್ನು
ನಿರ್ಮಾಣ ಮಾಡಲಾಗಿದೆ. ಮನೆಗಳ ಹಂಚಿಕೆಯಲ್ಲಿ ತಾರತಮ್ಯವಾಗಿದೆ ಎಂಬ ಆರೋಪ ಇದ್ದು, ಇದಕ್ಕೊಂದು ಸಮಿತಿ ರಚನೆ ಮಾಡಿ ಮನೆಗಳ ಹಂಚಿಕೆ ತಾರತಮ್ಯವಾಗಿದ್ದರೆ ಸರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಎಲ್‌.ವೈಶಾಲಿ ಭರವಸೆ ನೀಡಿದರು.

ಸ್ಥಳೀಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅರ್ಜಿ
ಸ್ವೀಕರಿಸಿ ಮಾತನಾಡಿದರು.

ಕುರ್ಲಗೇರಿ, ಸುರಕೋಡ ಗ್ರಾಮಗಳಲ್ಲಿ ಮನೆಗಳ ಹಂಚಿಕೆಯಲ್ಲಿ ಆದ ತಾರತಮ್ಯ ಕುರಿತು ತಹಶೀಲ್ದಾರ್‌ ನೇತೃತ್ವದಲ್ಲಿ ತಾಪಂ ಇಒ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಿ ಒಂದು ವಾರದಲ್ಲಿ ವರದಿ ನೀಡಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ವಿವಿಧ ಅರ್ಜಿಗಳ ಬಗ್ಗೆ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಗಳು, ಕಾನೂನು ನಿಯಮಗಳಡಿ ಪರಿಶೀಲನೆ ನಡೆಸಿ, ಅರ್ಜಿದಾರರಿಗೆ 7 ಅಥವಾ 14 ಮತ್ತು 21 ದಿನಗಳಲ್ಲಿ ಅರ್ಜಿಗೆ ಉತ್ತರಿಸುವ ಅವಕಾಶವಿದೆ. ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ಸರಿಯಾಗಿ ಪರಿಶೀಲನೆ ನಡೆಸಿ, ಆ ಕುರಿತು ನಿಯಮಾವಳಿಯಲ್ಲಿರುವ ಅಂಶಗಳನ್ನು ಗಮನಿಸಿ ನಂತರ ಅವುಗಳನ್ನು ಜಿಲ್ಲಾಧಿಕಾರಿ ಕಚೇರಿಗೆ ಅಪ್ಲೋಡ್‌ ಮಾಡಬೇಕು. ಕೆಲವೊಂದು ಕಾನೂನು ವ್ಯಾಪ್ತಿಯಲ್ಲಿ ಇಲ್ಲದಿರಬಹುದು. ಅಂತಹವುಗಳನ್ನು ಅಪ್ಲೋಡ್‌ ಮಾಡುವ ಬಗ್ಗೆ ಕೂಲಂಕಶ ಚರ್ಚೆ ಮಾಡಿ ಅಪ್ಲೋಡ್‌ ಮಾಡಬೇಕೆಂದು ಗ್ರಾಪಂ ಪಿಡಿಒಗಳಿಗೆ ಡಿಸಿ ಸೂಚನೆ ನೀಡಿದರು.

ಜನತಾ ದರ್ಶನ ಕಾರ್ಯಕ್ರಮದಲ್ಲಿ ನರಗುಂದ ಪುರಸಭೆಗೆ 6 ಅರ್ಜಿ, ಕಂದಾಯ ಇಲಾಖೆಗೆ 5 ಅರ್ಜಿ, ಭೂಮಾಪನಾ ಇಲಾಖೆಗೆ
ಸಂಬಂಧಿಸಿದ 5 ಅರ್ಜಿ, ಸಿಡಿಪಿಒ ಇಲಾಖೆಯ 2 ಅರ್ಜಿ, ಕೃಷಿ ಇಲಾಖೆ 2 ಅರ್ಜಿ, ತಾಪಂಗೆ ಸಂಬಂಧಿಸಿದ 11 ಅರ್ಜಿ, ಲೋಕೋಪಯೋಗಿ ಇಲಾಖೆಗೆ 1 ಅರ್ಜಿ, ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ 1 ಅರ್ಜಿ ಸಲ್ಲಿಕೆಯಾಗಿವೆ. ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ಶ್ರೀಶೈಲ ತಳವಾರ, ತಾಪಂ ಇಒ ಎಸ್‌.ಕೆ.ಇನಾಮದಾರ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

3-mundaragi

Mundargi: ದುರಸ್ತಿ ಸಂದರ್ಭ ವಿದ್ಯುತ್‌ ಶಾಕ್‌ ; ಕೂಲಿಕಾರ ಸಾವು

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

ಗದಗ: ಬಿಸಿಲಿನ ಬೇಗೆಗೆ ಸಿಮ್ಮಿಂಗ್‌ ಫೂಲ್‌ಗೆ ಲಗ್ಗೆ

ಗದಗ: ಬಿಸಿಲಿನ ಬೇಗೆಗೆ ಸ್ವಿಮ್ಮಿಂಗ್‌ ಫೂಲ್‌ಗೆ ಲಗ್ಗೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.