Drugs: ನ್ಯೂ ಇಯರ್‌ ಪಾರ್ಟಿಗಳಿಗೆ ತಂದಿದ್ದ ಡ್ರಗ್ಸ್‌ ವಶ

Team Udayavani, Dec 13, 2023, 3:48 PM IST

Drugs: ನ್ಯೂ ಇಯರ್‌ ಪಾರ್ಟಿಗಳಿಗೆ ತಂದಿದ್ದ ಡ್ರಗ್ಸ್‌ ವಶ

ಬೆಂಗಳೂರು: ಹೊಸ ವರ್ಷದ ಸಂದರ್ಭದಲ್ಲಿ ಪಾರ್ಟಿಗಳಿಗೆ ಪೂರೈಸಲು ಬೆಡ್‌ಶೀಟ್‌ ಕವರ್‌, ಸೋಪ್‌ ಬಾಕ್ಸ್‌, ಚಾಕಲೇಟ್‌ ಬಾಕ್ಸ್‌ಗಳಲ್ಲಿ ಮಾದಕ ವಸ್ತುಗಳನ್ನು ತರಿಸಿ ಸಂಗ್ರಹಿಸಿಟ್ಟಿದ್ದ ನೈಜೀರಿಯಾ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಆತನಿಂದ ಬರೋಬ್ಬರಿ 21 ಕೋಟಿ ರೂ. ಮೌಲ್ಯದ ಪಾರ್ಟಿ ಡ್ರಗ್ಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನೈಜೇರಿಯಾ ಮೂಲದ ಲಿಯೋ ನಾರ್ಡ್‌ ಒಕ್ವುಡಿಲಿ (43) ಬಂಧಿತ. ಈತನಿಂದ 16 ಕೋಟಿ ರೂ. ಮೌಲ್ಯದ ಎಂಡಿ ಎಂಎ ಕ್ರಿಸ್ಟಲ್‌ ಹಾಗೂ 5 ಕೋಟಿ ರೂ. ಮೌಲ್ಯದ ಕೋಕೇನ್‌, ಒಂದು ಮೊಬೈಲ್‌, 3 ಎಲೆಕ್ಟ್ರಾನಿಕ್‌ ತೂಕದ ಯಂತ್ರಗಳು ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಈತನ ವಿರುದ್ಧ ರಾಮ ಮೂರ್ತಿನಗರ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸೋಪ್‌, ಚಾಕಲೇಟ್‌ ಬಾಕ್ಸ್‌ಗಳಲ್ಲಿ ಡ್ರಗ್ಸ್‌: ನೈಜೇರಿಯಾ ಪ್ರಜೆಯಾಗಿರುವ ಆರೋಪಿ, ಒಂದು ವರ್ಷದ ಹಿಂದೆ ವ್ಯವಹಾರಿಕ ವೀಸಾ ಪಡೆದು ಬೆಂಗ ಳೂರಿಗೆ ಬಂದಿದ್ದು, ರಾಮಮೂರ್ತಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ತನ್ನ ದೇಶದ ಇತರೆ ಸ್ನೇಹಿತರ ಜತೆ ಸಣ್ಣ-ಪುಟ್ಟ ವ್ಯವಹಾರ ಮಾಡಿಕೊಂಡಿದ್ದ. ಈ ಮಧ್ಯೆ ಮುಂಬೈ, ದೆಹಲಿ, ಗೋವಾ ಹಾಗೂ ಇತರೆ ರಾಜ್ಯಗಳಲ್ಲಿರುವ ನೈಜೀರಿಯಾ ಪ್ರಜೆಗಳ ಸಂಪರ್ಕದಿಂದ ನಗರಕ್ಕೆ ಮಾದಕ ವಸ್ತುಗಳನ್ನು ತರಿಸುತ್ತಿದ್ದ. ಇತ್ತೀಚೆಗೆ ಪೊಲೀಸರು ಮಾದಕ ವಸ್ತುಗಳ ಮಾರಾಟಗಾರರ ವಿರುದ್ಧ ವಿಶೇಷ ಕಾರ್ಯಾ ಚರಣೆ ಆರಂಭಿಸಿದ್ದರಿಂದ ಪೊಲೀಸರ ದಿಕ್ಕು ತಪ್ಪಿಸಲು ಚೂಡಿದಾರ್‌, ಬೆಡ್‌ಶೀಟ್‌ ಕವರ್‌ ಗಳು, ಸೋಪ್‌ ಬಾಕ್ಸ್‌ ಮತ್ತು ಚಾಕಲೇಟ್‌ ಬಾಕ್ಸ್‌ ಗಳಲ್ಲಿ ಎಂಡಿಎಂಎ ಕ್ರಿಸ್ಟಲ್‌ ಮತ್ತು ಕೊಕೇನ್‌ ಅನ್ನು ಕೊರಿಯರ್‌ ಹಾಗೂ ದೈಹಿಕವಾಗಿ ಕೆಲ ವ್ಯಕ್ತಿಗಳ ರೈಲು ಹಾಗೂ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ತರಿಸಿಕೊಂಡು ತನ್ನ ಮನೆಯಲ್ಲಿ ಅಡಗಿಸಿಟ್ಟಿದ್ದ ಎಂದು ಹೇಳಿದರು.

ಹೊಸ ವರ್ಷಾಚರಣೆಗೆ ಪೂರೈಕೆ: ಆರೋಪಿಯ ಪ್ರಾಥಮಿಕ ವಿಚಾರಣೆಯಲ್ಲಿ, 2024ರ ಹೊಸ ವರ್ಷದ ಸಂದರ್ಭದಲ್ಲಿ ನಗರ ಮತ್ತು ನಗರದ ಹೊರವಲಯದಲ್ಲಿ ನಡೆಯುವ ಪಾರ್ಟಿಗಳು, ವಿದ್ಯಾರ್ಥಿಗಳು, ಐಟಿ-ಬಿಟಿ ಕಂಪನಿಗಳಿಗೆ ಅಗತ್ಯಕ್ಕೆ ತಕ್ಕಂತೆ ಹೆಚ್ಚಿನ ಬೆಲೆಗೆ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಆಯುಕ್ತರು ಹೇಳಿದರು.

ಪಿಜಿ ವಾಸಿಗಳ ಮಾಹಿತಿ ನೀಡಲು ಸೂಚನೆ : ಪಿಜಿಗಳಲ್ಲಿ ವಾಸವಾಗಿರುವವರ ಮಾಹಿತಿಯನ್ನು ಆ್ಯಪ್‌ ಮೂಲಕ ದಾಖಲಿಸಲು ಈಗಾಗಲೇ ಪಿಜಿ ಮಾಲೀಕರಿಗೆ ಸೂಚಿಸಲಾಗಿದೆ. ಅದೇ ರೀತಿ ಬಾಡಿಗೆ ಮನೆಗಳ ಮಾಲೀಕರು ತಮ್ಮ ಬಾಡಿಗೆದಾರರ ಆಧಾರ್‌ ಕಾರ್ಡ್‌ ಹಾಗೂ ಇತರೆ ಮಾಹಿತಿಯನ್ನು ಪಡೆದುಕೊಂಡು ಅಗತ್ಯಬಿದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗುತ್ತದೆ. ಸದ್ಯ ವಿದೇಶಿ ಪ್ರಜೆ ಬಂಧನದಲ್ಲಿ ಮನೆ ಮಾಲೀಕರನ್ನು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಟಾಪ್ ನ್ಯೂಸ್

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Rave Party: ನಟಿ ಹೇಮಾ ಸೇರಿ 8 ಮಂದಿಗೆ ನೋಟಿಸ್‌

Arrested: 34.82 ಕೋಟಿ ರೂ.ನ ಬಿಟ್‌ಕಾಯಿನ್‌ ಕಳ್ಳತನ; ಆರೋಪಿಯ ಬಂಧನ

Arrested: 34.82 ಕೋಟಿ ರೂ.ನ ಬಿಟ್‌ಕಾಯಿನ್‌ ಕಳ್ಳತನ; ಆರೋಪಿಯ ಬಂಧನ

5

ಕೌಟುಂಬಿಕ ವಿಚಾರಕ್ಕೆ ಐಎಎಸ್‌ಅಧಿಕಾರಿ ಫೋನ್‌ ಕದ್ದಾಲಿಕೆ: ಮಾಜಿ ಐಪಿಎಸ್‌ ವಿರುದ್ಧ ಕೇಸ್‌

Bengaluru: ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ರೋಗಿ ಮೇಲೆ ಹಲ್ಲೆ?

Bengaluru: ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ರೋಗಿ ಮೇಲೆ ಹಲ್ಲೆ?

3

Snakes: ಹುಷಾರ್‌! ಮನೆಗೂ ಬರಬಹುದು ಹಾವುಗಳು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Donald-Trumph

US ಬೈಡೆನ್‌ ಕೆಟ್ಟ ಅಧ್ಯಕ್ಷ ಎಂದ ಟ್ರಂಪ್‌ಗೆ ಜನರಿಂದ ಛೀಮಾರಿ

supreem

NDA ಗೆದ್ದ ಬಳಿಕ ಕೊಲಿಜಿಯಂ ವ್ಯವಸ್ಥೆ ರದ್ದು: ಉಪೇಂದ್ರ ಕುಶ್ವಾಹ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.