ರಾಜ್ಯದಿಂದ 100 ರೂ. ಕೇಂದ್ರಕ್ಕೆ ಹೋದರೆ 12- 13 ರೂ.ಗಳು ಮಾತ್ರ ವಾಪಾಸ್ : ಸಿದ್ದರಾಮಯ್ಯ

ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿಯೇ ಹೋರಾಟ... ಬಿಜೆಪಿ ವಿರುದ್ಧವಲ್ಲ...

Team Udayavani, Feb 5, 2024, 5:09 PM IST

siddanna

ಬೆಂಗಳೂರು: ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಫೆ 7ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಸೋಮವಾರ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಶಾಸಕರು, ಸಂಸದರು, ನಾಯಕರಿಗೂ ಈ ಮೂಲಕ ನಾವು ಪ್ರತಿಭಟನೆಗೆ ಕರೆ ಕೊಡುತ್ತಿದ್ದೇವೆ. ನಾವು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ. ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ. ನೀವೂ ರಾಜ್ಯದ ಜನರ ಧ್ವನಿಯಾಗಿ, ರಾಜ್ಯದ ಜನರ ಪರವಾಗಿ ನಿಲ್ಲಿ ಎಂದು ಬಿಜೆಪಿಯವರಿಗೆ ಕರೆ ಕೊಡುತ್ತೇವೆ. ಕನ್ನಡಿಗರಿಗೆ ದ್ರೋಹ ಮಾಡಬೇಡಿ, ಬನ್ನಿ ರಾಜ್ಯದ ಪರವಾಗಿ ಧ್ವನಿ ಎತ್ತೋಣ ಎಂದು ಕರೆಯುತ್ತಿದ್ದೇವೆ. ಪ್ರತಿಭಟಿಸದೆ ಸುಮ್ಮನಿದ್ದರೆ ಕನ್ನಡಿಗರಿಗೆ ದ್ರೋಹ ಮಾಡಿದಂತಾಗುತ್ತದೆ ಎಂದರು.

ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆಯಿಂದ ಕಾಯುತ್ತಿದ್ದೆವು. ಕಳೆದ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿ ಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ. ಹೋರಾಟಕ್ಕೆ ಜೊತೆ ನೀಡಲು ಇಡೀ ಸರ್ಕಾರ ಪಕ್ಷ ಭೇದ ಮರೆತು ಆಹ್ವಾನ ನೀಡಿದ್ದೇವೆ. ಕನ್ನಡಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಕೇಂದ್ರದ ಕಿವಿಯನ್ನು ತೆರೆಸಲು ಹೋರಾಡುತ್ತಿದ್ದೇವೆ ಎಂದರು.

ಭದ್ರಾ ಯೋಜನೆಗೆ 5,300 ಕೋಟಿ ರೂ. ಕೊಡುತ್ತೇವೆ ಎಂದು ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ಈವರಗೆ ಒಂದು ರೂ. ಕೂಡ ಬಿಡುಗಡೆ ಮಾಡಿಲ್ಲ. ಬರ ಪರಿಹಾರದ ಹಣವೂ ಇಲ್ಲ. ನರೇಗಾ ಅಡಿ 150 ಮಾನವ ದಿನಗಳಿಗೆ ಕೂಲಿ ಕೊಡಲು ಕೂಡ ಅನುಮತಿ ನೀಡಿಲ್ಲ. ಇಂಥ ಹಲವು ಕಾರಣಗಳಿಗಾಗಿ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ದೇಶದ ಜನರ ಗಮನ ಸೆಳೆಯಬೇಕು, ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ, ಹಣಕಾಸು ಹಂಚಿಕೆಯಲ್ಲಾಗಿರುವ ತಾರತಮ್ಯ, ಬರ ಪರಿಹಾರದಲ್ಲಿ ತೋರಿರುವ ಮಲತಾಯಿ ಧೋರಣೆ ಬಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಶಾಸಕರು, ಮೇಲ್ಮನೆ ಶಾಸಕರು ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಒಟ್ಟು ಲೆಕ್ಕದಲ್ಲಿ ರಾಜ್ಯದಿಂದ 100 ರೂ. ಕೇಂದ್ರಕ್ಕೆ ಹೋದರೆ ಅದರಲ್ಲಿ ನಮಗೆ 12- 13 ರೂ.ಗಳು ಮಾತ್ರ ವಾಪಾಸ್ ಬರುತ್ತಿದೆ. ಉಳಿದದ್ದು ಕೇಂದ್ರ ಸರ್ಕಾರ ಇಟ್ಟುಕೊಳ್ಳುತ್ತಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರವೇ ಅಂಕಿ ಅಂಶಗಳನ್ನು ನೀಡಿದೆ.2017-18 ರಲ್ಲಿ ಕೇಂದ್ರದ ಬಜೆಟ್ ಗಾತ್ರ 21,46,735 ಕೋಟಿ ಇತ್ತು. ಆಗ ರಾಜ್ಯಕ್ಕೆ ತೆರಿಗೆ ಪಾಲು ರೂ. 31,908 ಕೋಟಿ, ಅನುದಾನ ಹಾಗೂ ನಗದು ಹಂಚಿಕೆ ರೂ.16,072 ಕೋಟಿ, ಎರಡೂ ಸೇರಿಸಿ ರೂ.47,990 ಕೋಟಿ ಸಿಕ್ಕಿತ್ತು.2023-24 ಸಾಲಿನಲ್ಲಿ 45,03,097 ಕೋಟಿ ಕೇಂದ್ರ ಬಜೆಟ್ ಆಗಿದ್ದು, ರಾಜ್ಯಕ್ಕೆ ರೂ.50,257 ಕೋಟಿ ಮಾತ್ರ ಸಿಗುವ ಅಂದಾಜಿದೆ. ತೆರಿಗೆ ಹಂಚಿಕೆ 2.2 ಇಂದ 2024-25 ಕ್ಕೆ 1.23 ಗೆ ಇಳಿದಿದೆ. ಇದರಿಂದಾಗಿ ರಾಜ್ಯಕ್ಕೆ ಆಗುವ ಅನ್ಯಾಯದ ಪ್ರಮಾಣ ಹೆಚ್ಚುತ್ತಲೇ ಇದೆ ಎಂದರು.

ಬಜೆಟ್ ಗಾತ್ರ ಡಬಲ್ ಆದಾಗ, ರಾಜ್ಯದ ತೆರಿಗೆಯ ಪಾಲು ದುಪ್ಪಟ್ಟಾಗಬೇಕಿತ್ತು. ಆದರೆ ಈಗ ಅರ್ಧಕ್ಕಿಂತ ಹೆಚ್ಚು ಕಡಿಮೆ ಆಗಿದೆ. ಸೆಸ್, ಸರ್ ಚಾರ್ಜ್ ಪ್ರತೀ ವರ್ಷ ಹೆಚ್ಚಿಸಿಕೊಂಡು ಹೋಗುತ್ತಿದ್ದಾರೆ. ಸೆಸ್, ಸರ್ ಚಾರ್ಜ್ ಮೂಲಕ ಕೇಂದ್ರ ವಸೂಲಿ ಮಾಡುವ ತೆರಿಗೆಯಲ್ಲಿ ರಾಜ್ಯಗಳಿಗೆ ನಯಾಪೈಸೆ ವಾಪಾಸ್ ಬರಲ್ಲ. ಆದರೆ ಸೆಸ್, ಸರ್ ಚಾರ್ಜ್ ಎರಡೂ ಕೊಡೋದು ರಾಜ್ಯಗಳೇ.ಆದ್ದರಿಂದ 16ನೇ ಹಣಕಾಸು ಆಯೋಗದ ಮುಂದೆ ಸೆಸ್ ಹಾಗೂ ಸರ್ ಚಾರ್ಜ್ ನಲ್ಲೂ ಪಾಲು ಕೊಡಲೇಬೇಕು ಎಂದು ಒತ್ತಾಯಿಸುತ್ತೇವೆ. ಈ ಬಗ್ಗೆ ಗಟ್ಟಿಯಾಗಿ ಧ್ವನಿ ಎತ್ತಲಿದ್ದೇವೆ. ಇದರ ಜತೆಗೆ ಶೇ1 ರಷ್ಟು ರಕ್ಷಣಾ ಇಲಾಖೆಗೆ ಇಟ್ಟುಕೊಳ್ಳುತ್ತಾರೆ. ಹೀಗೆ ನರೇಂದ್ರ ಮೋದಿ ಅವರು ಬಂದ ನಂತರ ರಚನೆಯಾದ 15ನೇ ಹಣಕಾಸು ಆಯೋಗದ ಬಳಿಕ ರಾಜ್ಯಕ್ಕೆ 1,87,867 ಕೋಟಿ ರೂ. ಅನ್ಯಾಯವಾಗಿದೆ ಎಂದರು.

ಉತ್ತರದ ರಾಜ್ಯಗಳಿಗೆ ಅನುದಾನ ಕೊಡಬೇಡಿ ಎಂದು ಹೇಳುವುದಿಲ್ಲ. ಆದರೆ ದಕ್ಷಿಣ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಿ. ಚಿನ್ನದ ಮೊಟ್ಟೆ ಇಡುವ ಕೋಳಿ ಎಂದು ಕತ್ತು ಕುಯ್ಯಬಾರದು, ಹಾಲು ಕೊಡುವ ಕೆಚ್ಚಲನ್ನೇ ಕತ್ತರಿಸಬಾರದು ಎನ್ನುವುದು ನಮ್ಮ ಮನವಿ. ನಮ್ಮ ನಿರಂತರ ಬೇಡಿಕೆ, ಮನವಿಗಳಿಗೂ ಕೇಂದ್ರ ಬೆಲೆ ಕೊಟ್ಟಿಲ್ಲ.ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಅವರು ಪ್ರಧಾನಿಗಳ ಮುಂದೆ ಬಾಯಿ ಬಿಡುವುದಿಲ್ಲ. ವಿರೋಧಪಕ್ಷದ ನಾಯಕ ಆರ್. ಅಶೋಕ್, ಸಚಿವ ಪ್ರಹ್ಲಾದ್ ಜೋಶಿ ಅವರಿ ಗೆ ಈ ವಿಷಯಗಳೆಲ್ಲಾ ಅರ್ಥವೇ ಆಗಲ್ಲ ಎಂದು ಕಿಡಿ ಕಾರಿದರು.

ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ರಾಜ್ಯದಿಂದ ಕೇಂದ್ರ ಮಂತ್ರಿಗಳಾಗಿದ್ದಾರೆ. 27 ಜನ ಸಂಸದರು ಸಂಸತ್ತಿನಲ್ಲಿ ಮಾತೇ ಆಡಿಲ್ಲ. ಜನ ಇವರನ್ನು ಆಯ್ಕೆ ಮಾಡಿ ಕಳುಹಿಸಿದರೆ ಕಣ್ಣುಮುಚ್ಚಿ ಕುಳಿತಿದ್ದಾರೆ. ಇವರು ರಾಜ್ಯದ ಪರವಾಗಿ ಪಾರ್ಲಿಮೆಂಟಲ್ಲಿ ಬಾಯಿಯನ್ನೇ ಬಿಡುತ್ತಿಲ್ಲ. 11 ಸಾವಿರ ಕೋಟಿ ಕೇಂದ್ರ ಹಣಕಾಸು ಸಚಿವರಿಂದಲೇ ತಿರಸ್ಕಾರವಾಗಿದೆ. ರಾಜ್ಯದಿಂದ ಆಯ್ಕೆ ಆದ ನಿರ್ಮಲಾ ಸೀತಾರಾಮನ್ ಅವರಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ. ನರೇಂದ್ರ ಮೋದಿ ಅವರು ಸೂಕ್ಷ್ಮ ಇದ್ದಾರೆ, ಪ್ರತಿಭಟನೆ ಬಳಿಕವಾದರೂ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಿ ಕರ್ನಾಟಕದ ಪಾಲಿನ ಹಣವನ್ನು ವಾಪಾಸ್ ಕೊಡಬಹುದು ಎಂಬ ಆಶಾಭಾವನೆ ಇದೆ. ಮುಂಬರುವ ಅಧಿವೇಶನದಲ್ಲಿ ಶ್ವೇತಪತ್ರ ಹೊರಡಿಸಲು ರಾಜ್ಯ ಸರ್ಕಾರವು ಚಿಂತನೆ ನಡೆಸಿದೆ ಎಂದರು.

ಕೇಂದ್ರ ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಕೊಡುತ್ತೇವೆ ಎಂದು ತಿಳಿಸಿದ್ದರು.ಬಸವರಾಜ್ ಬೊಮ್ಮಾಯಿ ಅವರು ರಾಜ್ಯ ಬಜೆಟ್ ಮಂಡಿಸುವಾಗ ಇದನ್ನೇ ಪುನಃ ನೀರಾವರಿ ಯೋಜನೆಯ ಅನುದಾನ ಎಂದು ಉಲ್ಲೇಖಿಸಿದ್ದರು. 2.5 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸುವ ಯೋಜನೆ ಇದು. ಆದರೆ ಇದುವರೆಗೂ ಒಂದೇ ಒಂದು ರೂ.ಬಂದಿಲ್ಲ. ಈಗಲಾದರೂ ಬಿಡುಗಡೆ ಮಾಡಿ ಎಂದು ನಾನು ಒತ್ತಾಯಿಸುತ್ತೇನೆ ಎಂದರು.

ಮಹದಾಯಿ ಯೋಜನೆಯ ಪರಿಸರ ತೀರುವಳಿ ಇಂದಿನವರೆಗೆ ಆಗಿಲ್ಲ. ಯೋಜನೆ ಪ್ರಾರಂಭಿಸಲು ತೀರುವಳಿ ಕೊಡಿ ಎಂದರೆ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿಲ್ಲ. ಇಂದಿನವರೆಗೆ ಗೆಜೆಟ್ ನೋಟಿಫಿಕೇಶನ್ ಮಾಡಿಕೊಟ್ಟಿಲ್ಲ.
ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟುಗೆ ಇವತ್ತಿನವರೆಗೂ ಅನುಮತಿ ಕೊಟ್ಟಿಲ್ಲ. 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದೆ. 123 ತೀವ್ರ ಬರಗಾಲ ಪೀಡಿತವಾಗಿದ್ದರೂ ಕೇಂದ್ರದಿಂದ ನಯಾಪೈಸೆ ಬಂದಿಲ್ಲ ಎಂದರು.

ಸೆಪ್ಟೆಂಬರ್ 23 ರಂದು ಕೇಂದ್ರ ತಂಡ ಬಂದು ಬರಗಾಲ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಕೊಟ್ಟಿದೆ. ಬಳಿಕ ಶಬರಿ ಕಾದಂತೆ ನಮ್ಮ ಮಂತ್ರಿಗಳು ಭೇಟಿಗೆ ಕಾದು ವಾಪಾಸ್ ಬಂದಿದ್ದಾರೆ. ಭೇಟಿ ಮಾಡಿದಾಗ ಸಭೆ ಕರೆಯುತ್ತೇನೆ ಎಂದ ಅಮಿತ್ ಶಾ ಇವತ್ತಿನವರೆಗೂ ಸಭೆಯನ್ನೇ ಕರೆದಿಲ್ಲ. ಸಭೆ ಕರೆಯದೆ ಬರ ಪರಿಹಾರ ಬರುವುದೇ ಇಲ್ಲ ಎಂದರು.

ಅಮಿತ್ ಶಾ ಅವರು ಇವತ್ತಿನವರೆಗೂ ಪ್ರಾಥಮಿಕ ಸಭೆಯನ್ನೇ ಕರೆದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಾಗಲೂ ಮನವಿ ಮಾಡಿದ್ದೆ. 35 ಸಾವಿರ ಕೋಟಿ ಬೆಳೆ ನಷ್ಟ ಆಗಿದೆ. ಇದಕ್ಕೆ 17,901 ಕೋಟಿ ರೂಪಾಯಿ ಪರಿಹಾರವನ್ನು ಕೇಂದ್ರದಿಂದ ಕೇಳಿದ್ದೇವೆ. NDRF ನಿಂದ ನಯಾ ಪೈಸೆ ಬಿಡುಗಡೆ ಮಾಡಿಲ್ಲ. 2019 ರಲ್ಲಿ ಪ್ರವಾಹ ಬಂದಾಗ  ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ NDRF ಗಾಗಿ ಗೋಗರೆದರೂ ಪರಿಹಾರ ಕೊಡಲಿಲ್ಲ ಎಂದರು.

ಕೇಂದ್ರ ಸರ್ಕಾರ 2021ರಲ್ಲಿ ಪ್ರವಾಹ ಬಂದಾಗಲೂ ಅಗತ್ಯ ಹಣ ಕೊಟ್ಟಿಲ್ಲ. ಪರಿಹಾರ ಹಂಚಿಕೆ ಮಾಡುವಾಗ 6 ಮಾನದಂಡಗಳಾದ ಜನಸಂಖ್ಯೆ, ವಿಸ್ತೀರ್ಣ, ವರಮಾನದ ಅಂತರ, ಅರಣ್ಯ ಪ್ರದೇಶ, ತೆರಿಗೆ ಹಣಕಾಸಿನ ಪರಿಸ್ಥಿತಿಗಳನ್ನು ಪರಿಗಣಿಸುತ್ತಾರೆ. ಈ ಮಾನದಂಡಗಳ ಪ್ರಕಾರವೂ ನಮಗೆ ಪರಿಹಾರದ ಹಣ ಬಂದಿಲ್ಲ. ನಮ್ಮ ರಾಜ್ಯಕ್ಕೆ ಅನ್ಯಾಯವಾಗಬಾರದು. ಪತ್ರ ಬರೆದರೆ ಉತ್ತರ ಕೊಡದೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಮಂತ್ರಿಗಳಿಗೆ ಭೇಟಿಗೆ ಅವಕಾಶವಿಲ್ಲದಿರುವುದು, ಬರಗಾಲಕ್ಕೆ ಹಣಕಾಸು ಬಿಡುಗಡೆ ಮಾಡದಿರುವುದು, ಹಂಚಿಕೆಯಲ್ಲಿ ಅನ್ಯಾಯವಾಗಿರುವುದು ನೋಡಿದರೆ ಇದು ಒಕ್ಕೂಟ ವ್ಯವಸ್ಥೆಯ ಅಪಮಾನ ಅಲ್ಲವೇ? ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

JDS MP ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.